ಮಣಿಪಾಲ: ಫೋಟೋಗ್ರಫಿ–ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ: ಮಣಿಪಾಲ ಸಿಂಡ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಸ್ವ-ಉದ್ಯೋಗಾಕಾಂಕ್ಷಿಗಳಿಗಾಗಿ ಸೆಪ್ಟೆಂಬರ್‌ 16ರಿಂದ 30 ದಿನಗಳ ‘ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ’ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಖಾಲಿ ಹಾಳೆಯಲ್ಲಿ ಪೂರ್ಣವಿಳಾಸ, ಪಿನ್‌ಕೋಡ್‌, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ ಹಾಗೂ ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು ಮುಂತಾದ […]

ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಪ್ರಮುಖ ವಿಷಯಗಳಾದ ನೆರೆ ಪರಿಹಾರ, ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ, ಇಎಸ್ ಐ ಕಾಯ್ದೆಯಡಿ ನೊಂದಣಿ, ಕಿರು ವಿಮಾನ ನಿಲ್ದಾಣ ಕಾಮಗಾರಿ, ಜಲಧಾರೆ ಯೋಜನೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.

ಡಿ.ಕೆ.ಶಿಗೆ ಇಡಿ ಕಿರುಕುಳ ನೀಡುತಿದೆ ಎಂದು ಆರೋಪಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶ

ಮಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಇಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಕೇಂದ್ರ ಸರಕಾರದ ಕೈಗೊಂಬೆಯಾಗಿ ವರ್ತಿಸಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ರಿಗೆ ಇಡಿ ಅನಗತ್ಯ ಕಿರುಕುಳ ನೀಡುತ್ತಿದೆ. ಕೇಂದ್ರ […]

ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಜನತಗೆ ಆತಂಕ: ಯು.ಟಿ. ಖಾದರ್

ಮಂಗಳೂರು: ದೇಶದ ಆರ್ಥಿಕ ಸ್ಥಿತಿ ಬಗ್ಗೆ ಭಯ ಶುರುವಾಗಿದೆ. ದೇಶದ ಜನರು ಆರ್ಥಿಕ ಕುಸಿತದಿಂದ ಆತಂಕಗೊಂಡಿದ್ದಾರೆ. ಬಂಡವಾಳ ಹೂಡುವವರು ಮುಂದೆ ಬರುತ್ತಿಲ್ಲ. ಗ್ರಾಮೀಣ ಮಟ್ಟದ ವ್ಯಾಪಾರಸ್ಥರು ಆತ್ಮಹತ್ಯೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ವಿಶ್ವದಲ್ಲೇ ತಲೆ ತಗ್ಗಿಸುವತ್ತ ಸಾಗುತ್ತಿದೆ. ಆರ್ ಬಿಐನಿಂದಲೇ ಕೇಂದ್ರ ಸರ್ಕಾರ ಸಾಲ ತೆಗೆದುಕೊಂಡಿದೆ. ಎಮರ್ಜೆನ್ಸಿ ಅನಂತರ ರಿಸರ್ವ್ ಬ್ಯಾಂಕ್ ನಿಂದ ಕೇಂದ್ರ ಸರ್ಕಾರ ಹಣ ತೆಗೆದುಕೊಂಡಿದೆ. ಸ್ವೀಸ್ […]

ಟಿಬೆಟಿಯನ್ ವಿದ್ಯಾರ್ಥಿಗಳೊಂದಿಗೆ ದಲೈಲಾಮ‌ ಸಂವಾದ: ಮುನ್ನೆಚ್ಚರಿಕಾ‌ ಕ್ರಮವಾಗಿ ಬಂದೋಬಸ್ತ್

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಹ್ವಾನಿತ ಟಿಬೇಟಿಯನ್ ವಿದ್ಯಾರ್ಥಿಗಳೊಂದಿಗೆ ನಗರದ ತಾಜ್ ಗೇಟ್ ವೇ ಹೋಟೆಲ್​​​​ನಲ್ಲಿ ಸಂವಾದ ನಡೆಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಹೋಟೆಲ್ ​​​ಗೆ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿತ್ತು, ಅಲ್ಲದೇ ಮಾದ್ಯಮ ಸಹಿತ ಆಹ್ವಾನ ಇಲ್ಲದ ಯಾರಿಗೂ ಕಾರ್ಯಕ್ರಮಕ್ಕೆ ಪ್ರವೇಶವಿರಲಿಲ್ಲ. ಅನಂತರ ಪಂಪ್ ವೆಲ್ ನಲ್ಲಿರುವ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕೆಥೋಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ಅಲ್ಲಿಯೂ ಕೂಡ ಬಂದೋಬಸ್ತ್​ ವ್ಯವಸ್ಥೆ ಮಾಡಿ, ದಲೈ ಲಾಮಾ […]