ಮಂಗಳೂರು: ಬ್ಯಾಂಕ್ ಗಳ ವಿಲೀನ ಖಂಡಿಸಿ ಮಂಗಳೂರಲ್ಲಿ‌ ಪ್ರತಿಭಟನೆ 

ಮಂಗಳೂರು: ಬ್ಯಾಂಕುಗಳ ತವರು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹುಟ್ಟಿದ ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕುಗಳ ವಿಲೀನ ಮಾಡಿದ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸಿ ಮಂಗಳೂರಿನಲ್ಲಿ ಬ್ಯಾಂಕ್ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಮಂಗಳೂರಿನ‌ ಪಾಂಡೇಶ್ವರದಲ್ಲಿರುವ ಕಾರ್ಪೊರೇಷನ್ ಬಳಿ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು, ಬ್ಯಾಂಕ್ ವಿಲೀನದಿಂದ ದೇಶದ ಆರ್ಥಿಕ ಸ್ಥಿತಿಗೆ ಸಹಾಯವಾಗುವುದಿಲ್ಲ. ಇದರಿಂದಾಗಿ ಗ್ರಾಹಕರಿಗೆ ಹಾಗೂ ಬ್ಯಾಂಕ್ ನೌಕರಿಗೆ ಸಮಸ್ಯೆ ಆಗುತ್ತದೆ.‌ ಅಲ್ಲದೇ ಈ ಪ್ರಕ್ರಿಯೆಯಿಂದ […]

ಕರ್ನಾಟಕ‌ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಪದಗ್ರಹಣ

ಬೆಂಗಳೂರು: ಕರ್ನಾಟಕ‌ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಕೆ.ಎ.ಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಶನಿವಾರ ನೆರವೇರಿತು. ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಿಕಲಚೇತನ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಎಚ್.ವಿ. ಗೋಪಾಲಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಕಲಚೇತನರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು. ನೂತನವಾಗಿ ರಾಜ್ಯ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಪ್ರಧಾನ ಕಾರ್ಯದರ್ಶಿ ಡಾ. […]

ಗಣೇಶೋತ್ಸವದಲ್ಲಿ ಸೂಚನೆ ಪಾಲಿಸಿ- ಜಿಲ್ಲಾಧಿಕಾರಿ ಜಗದೀಶ್

ಉಡುಪಿ: ಗಣೇಶೋತ್ಸವಗಳಲ್ಲಿ ಪಿಓಪಿ ಬಳಸಿ ತಯಾರಿಸಿದ ಯಾವುದೇ ಗಣೇಶ ವಿಗ್ರಹಗಳನ್ನು ಬಳಸುವಂತಿಲ್ಲ ಹಾಗೂ ಅವುಗಳನ್ನು ವಿಸರ್ಜಿಸಲು ಯಾವುದೇ ಅವಕಾಶ ಇರುವುದಿಲ್ಲ. ಒಂದು ವೇಳೆ ಬಳಸಿದಲ್ಲಿ ಇಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ರಾಸಾಯನಿಕ ಬಣ್ಣಗಳನ್ನು ಉಪಯೋಗಿಸಿದ ವಿಗ್ರಹಗಳನ್ನು ಕೂಡ ಬಳಸುವಂತಿಲ್ಲ, ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಪರಿಸರ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ  ತಿಳಿಸಿದ್ದಾರೆ. ಅವರು ಶುಕ್ರವಾರ ಗಣೇಶೋತ್ಸವ ಆಚರಣೆ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವ ಕುರಿತ ಪೂರ್ವಭಾವಿ […]

ಗಣೇಶ ಚತುರ್ಥಿ ಹಿನ್ನೆಲೆ :ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಉಡುಪಿ: ಸೆಪ್ಟಂಬರ್ 2 ರಂದು ಗಣೇಶ ಚತುರ್ಥಿ ಹಬ್ಬ ಆಚರಣೆ ಸಂದರ್ಭದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಅದ್ಧೂರಿ ಪುರ ಮೆರವಣಿಗೆಗಳು ನಡೆಯಲಿರುವುದರಿಂದ ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಜಗದೀಶ್ ಈ ಕೆಳಕಂಡ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಆದೇಶ ಹೊರಡಿಸಿರುತ್ತಾರೆ ಉಡುಪಿ ನಗರ ಠಾಣಾ ವ್ಯಾಪ್ತಿಯ ಗ್ರಾಮವಾದ ಕೊರಂಗ್ರಪಾಡಿ(4 ಕಿ.ಮೀ.ವ್ಯಾಪ್ತಿ)ಯಲ್ಲಿ ಸೆಪ್ಟಂಬರ್ 2 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 3 ರ ಬೆಳಗ್ಗೆ […]

ಯುವ ಜನತೆಯಲ್ಲಿ ಸಮರ್ಪಣಾ ಮನೋಭಾವ ಮೂಡಲಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಯುವಜನಾಂಗ ಸಮರ್ಪಣಾ ಮನೋಭಾವದಿಂದ ರಾಷ್ಟ್ರಕ್ಕಾಗಿ ದುಡಿದರೆ, ದೇಶ ಅಭಿವೃದ್ದಿ ಹೊಂದಲು ಸಾಧ್ಯ ಎಂದು ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲ ಸಾರಿಗೆ, ಜಿಲ್ಲಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನಾ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು […]