ಶ್ರೀ ಕೃಷ್ಣ ಮಠದಲ್ಲಿ ಚಿಣ್ಣರ ಉತ್ಸವ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ,ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನ ಇವರು ಆಚರಿಸುವ “ಚಿಣ್ಣರ ಉತ್ಸವ” ಕಾರ್ಯಕ್ರಮ ನಡೆಯಿತು Advt
ಕರಾವಳಿಯ ಮರಳು ಹೊರ ಜಿಲ್ಲೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಒಂದು ಮುಷ್ಠಿ ಮರಳು ಹೊರ ಜಿಲ್ಲೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಉಡುಪಿ ನಗರಸಭೆಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೆಗೆಯುವ ಮರಳು ಇಲ್ಲಿಯ ನಿರ್ಮಾಣ ಕಾಮಗಾರಿಗಳಿಗೆ ವಿನಿಯೋಗಿಸಲಾಗುವುದು. ಬಡವರ ಮನೆ ನಿರ್ಮಾಣ, ವಿವಿಧ ಸರ್ಕಾರಿ ಯೋಜನೆಗಳಡಿ ನಿರ್ಮಿಸಲಾಗುವ ಕಟ್ಟಡ, ಮನೆಗಳಿಗೆ ಮೊದಲ ಆದ್ಯತೆಯಲ್ಲಿ ಮರಳು ಸಿಗುವಂತೆ ಕ್ರಮ ವಹಿಸಲಾಗುವುದು ಎಂದರು. ಮರಳಿನ ಸಮಸ್ಯೆಯಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದು, ಜನರಿಗೆ ಮರಳು ನೀಡಲೇ […]