ಡಿಕೆಶಿ‌ ಬಂಧನ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ: ಇದು ಪ್ರಜಾಪ್ರಭುತ್ವದ ಖಗ್ಗೊಲೆ: ಸೊರಕೆ ಆರೋಪ

ಉಡುಪಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರ ಬಂಧನವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಬುಧವಾರ ಬೃಹತ್  ಪ್ರತಿಭಟನೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಪಿತೂರಿಯಿಂದ ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕರಾದ ಶಾಸಕ ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಲಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದಲೇ ಕೇಂದ್ರ ಸರ್ಕಾರ ಡಿಕೆಶಿ ಅವರ ಮೇಲೆ ಹಗೆತನ ಸಾಧಿಸುತ್ತಾ ಬಂದಿದೆ. ಅವರಿಗೆ ನಿರಂತರ […]

ಕೇಂದ್ರ ಸರಕಾರ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ: ಯೋಗೀಶ್ ಶೆಟ್ಟಿ

ಉಡುಪಿ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೇಂದ್ರದ ಸಂಸ್ಥೆಗಳಾದ ಐಟಿ, ಇಡಿ ಮುಂತಾದ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ. ದ್ವೇಷಕ್ಕಾಗಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರಿಗಿದೆ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನಸಿಕ ಬೆಳವಣಿಗೆ ಪೂರಕವಾದ ಶಿಕ್ಷಣ ನೀಡುವ ಜತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಬುಧವಾರ ಉದ್ಯಾವರ ಸೈಂಟ್ ಫ್ರಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ನೀಡುವ ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಒಂದು […]

ಅನುಮತಿ‌ ಇಲ್ಲದೇ ಮರಗಳಿಗೆ ಕೊಡಲಿ; ತಪ್ಪಿತಸ್ಥ ಹೆದ್ದಾರಿ ಅಧಿಕಾರಿಗಳ‌ ಬಂಧಿಸಲು ಪರಿಸರವಾದಿಗಳ‌ ಆಗ್ರಹ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169(ಎ)ರ ಪರ್ಕಳ ದೇವಿನಗರದಿಂದ ಆದಿಉಡುಪಿ ಕರಾವಳಿ ಜಂಕ್ಷನ್‌ವರೆಗಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅನುಮತಿ ಇಲ್ಲದೆಯೇ ಅಕ್ರಮವಾಗಿ ಕೆಲವೊಂದು ಮರಗಳನ್ನು ಕಡಿದು ಹಾಕಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ. ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆಯಡಿ 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದರೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕ್ರಮಕೈಗೊಳ್ಳಬೇಕಾಗಿರುವುದರಿಂದ ಬುಧವಾರ ಕುಂದಾಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. […]

ಶ್ರೀ ಭುವನೇಂದ್ರ ಕಾಲೇಜು: ಐ.ಟಿ ಕ್ಲಬ್ -ವಿಶೇಷ ಉಪನ್ಯಾಸ

ಕಾಕ೯ಳ: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಇದು ತಂತ್ರಜ್ಞಾನ ಯುಗ ಹಾಗಾಗಿ ಇಲ್ಲಿ ತಂತ್ರಜ್ಞಾನದ ಅರಿವಿದ್ದರೆ ಮಾತ್ರ ಕೆಲಸ ಸುಲಭದಲ್ಲಿ ಸಿಗಲು ಸಾಧ್ಯ. ಇದರೊಂದಿಗೆ ಸಂವಹನ ಮತ್ತು ಭಾಷೆಯಲ್ಲಿನ ಸ್ಪಷ್ಟತೆ ಕೂಡ ಬಹಳ ಮುಖ್ಯವಾದುದು ಎಂದು ಉಡುಪಿಯ ರೋಬೋ ಸಾಫ್ಟ್ ಕಂಪನಿಯ ಸಾಫ್ಟ್‌ವೇರ್ ಇಂಜಿನಿಯರ್ ಪುನೀತ್ ನಾಯಕ್ ಹೇಳಿದರು. ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಐ.ಟಿ ಕ್ಲಬ್ ನ ವತಿಯಿಂದ ನಡೆದ ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾಹಿತಿ ತಂತ್ರಜ್ಙಾನ ಕ್ಷೇತ್ರದಲ್ಲಿ ಮುಂದುವರೆಯಲು ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ […]