ನಿಮ್ಮ ಮಗುವಿಗೆ ರೋಟಾವೈರಸ್ ಲಸಿಕೆ ನೀಡಲು ಮರೆಯಬೇಡಿ !:ರೋಟಾವೈರಸ್ ಲಸಿಕೆ ಯಾಕೆ ನೀಡಬೇಕು? ಇಲ್ಲಿದೆ ಮಾಹಿತಿ

ಉಡುಪಿ: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವು ಭಾರತದ ಅತಿ ದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, ಇದು 2.9 ಕೋಟಿ ಗರ್ಭಿಣಿಯರು ಮತ್ತು 2.67 ಕೋಟಿ ನವಜಾತ ಶಿಶುಗಳ ಗುರಿ ಹೊಂದಿದೆ. ಲಸಿಕಾ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸಲು ಭಾರತ ಸರ್ಕಾರವು ಹಲವು ಲಸಿಕೆಗಳನ್ನು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಪರಿಚಯಿಸಿದ್ದು, ನಮ್ಮ ರಾಜ್ಯದಲ್ಲಿ ರೋಟಾವೈರಸ್ ಲಸಿಕೆಯನ್ನು ಆಗಸ್ಟ್ 2019 ರಿಂದ ಪರಿಚಯಿಸಲಾಗುತ್ತಿದೆ. ರೋಟಾವೈರಸ್ ಲಸಿಕೆಯನ್ನು ಏಕೆ ನೀಡಬೇಕು? ಮಕ್ಕಳಲ್ಲಿ ರೋಟಾವೈರಸ್ ಸೋಂಕನ್ನು ನಿಯಂತ್ರಿಸಲು ರೋಟಾವೈರಸ್ ಲಸಿಕೆ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಅತಿಸಾರ ಭೇದಿಯು […]

ಹಿರಿಯಡಕ ಕಾಲೇಜು: ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಅಂತರಾಷ್ಟ್ರೀಯ ಆಟಗಾರ್ತಿ ಕರಿಷ್ಮಾ ಎಸ್. ಸನಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಯನ್ನು ಬೆಳೆಸಿಕೊಂಡು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿಯಾದ ಮಂಜುನಾಥ್ ಹಾಗೂ ಕೃಷ್ಣ ಭಟ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ ಸ್ವಾಗತಿಸಿದರು. ಸೌಮ್ಯ ನಿರೂಪಿಸಿದರು, ದಿವ್ಯಾ ವಂದಿಸಿದರು.

ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ: ಸೆ.6 ರಂದು ನೇರ ನೇಮಕಾತಿ

ಉಡುಪಿ: ಪೇಟಿಎಂ ಹಾಗೂ ಸೋನಿ ಕಂಪೆನಿ ವತಿಯಿಂದ ಫೀಲ್ಡ್ ಸರ್ವೀಸ್ ಇಂಜಿನಿಯರ್ ಹುದ್ದೆಗೆ (ವೇತನ-20,000) ನೇರ ನೇಮಕಾತಿಯು ಸೆಪ್ಟಂಬರ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರಜತಾದ್ರಿ ಮಣಿಪಾಲದಲ್ಲಿ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ, ಡ್ರೈವೀಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಪ್ (ವೇತನ-13,600) ಮಾಡಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ […]

ಕಾರ್ಕಳ: ಎಪಿಎಂಸಿ‌ ನಿರ್ದೇಶಕರಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ

ಕಾರ್ಕಳ: ಕಾರ್ಕಳ ಎಪಿಎಂಸಿ ನಿರ್ದೇಶಕರ ಒಂದು ತಿಂಗಳ ಪ್ರಯಾಣ ಭತ್ತೆಯನ್ನು ಶಾಸಕ ವಿ. ಸುನಿಲ್‌ ಕುಮಾರ್ ಅವರ ಮುಖಾಂತರ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಎಪಿಎಂಸಿ ಅಧ್ಯಕ್ಷರಾದ ಮಾಪಾಲು ಜಯವರ್ಮ ಜೈನ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಣಿರಾಜ್ ಶೆಟ್ಟಿ, ಮಹಾವೀರ ಹೆಗ್ಡೆ ಉಪಸ್ಥಿತಿದ್ದರು.

ಡಿ.ಕೆ. ಶಿವಕುಮಾರ್ ಬಂಧನ‌ ಹಿನ್ನೆಲೆ ಕರಾವಳಿಯಾದ್ಯಂತ‌ ಪ್ರತಿಭಟನೆ: ಬಸ್ ಗಳಿಗೆ ಕಲ್ಲು ತೂರಾಟ: ಹಲವರ‌ ಬಂಧನ

ಮಂಗಳೂರು/ಉಡುಪಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಮಂಗಳೂರು ಸೇರಿದಂತೆ ಕರಾವಳಿಯಾದ್ಯಂತ ಬುಧವಾರ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರುನ‌ ಜಿಲ್ಲಾಧಿಕಾರಿ ಕಚೇರಿ ಮುಂಬಾಗ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಮಾಜಿ ಸಚಿವ ಅಭಯಚಂದ್ರ ಜೈನ್, ವಿದಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಹರೀಶ್ ಕುಮಾರ್ ಭಾಗಿಯಾಗಿದ್ದು, ಕೂಡಲೇ ಅವರನ್ನು ಬಂಧಿಸಲಾಗಿದೆ. ಉಡುಪಿಯಲ್ಲೂ ನೂರಾರು ಮಂದಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲಲ್ಲಿ ಬಸ್ಸುಗಳಿಗೆ ಕಲ್ಲು […]