Day: September 5, 2019

  • ಮಂಗಳೂರು: ಶಕ್ತಿ ವಸತಿ ಶಾಲೆ-ಪಿಯು ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

    ಮಂಗಳೂರು: ಶಕ್ತಿ ವಸತಿ ಶಾಲೆ-ಪಿಯು ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

    ಮಂಗಳೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ ಗುರುವಾರ ಜರುಗಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾೖಕ್‌, ಹಾಗೂ ಇತರ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕರಾಗಿ ಆಯ್ಕೆಗೊಂಡ ನಿವೃತ್ತ ಶಿಕ್ಷಕರಾದ ಯು. ಗೋಪಾಲಕೃಷ್ಣ ಭಟ್, ವಿಮಲಾ ಬಾಯಿ, ವೀಣಾ ಬಿ., ಪಶುಪತಿ ಶಾಸ್ತ್ರಿ, ಸೋಮಶೇಖರ ಶೆಟ್ಟಿ ಅವರನ್ನು ಗುರುತಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು…

  • ಸೆ.6: ಬೆಂಗಳೂರಿಗೆ ಪ್ರಧಾನಿ ಮೋದಿ: ಚಂದ್ರಯಾನ-2 ನೌಕೆಯ ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ

    ಸೆ.6: ಬೆಂಗಳೂರಿಗೆ ಪ್ರಧಾನಿ ಮೋದಿ: ಚಂದ್ರಯಾನ-2 ನೌಕೆಯ ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ

    ಬೆಂಗಳೂರು: ಸೆ.6 ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಸೆ.07ರಂದು ಪೀಣ್ಯ ಬಳಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)ದ ಚಂದ್ರಯಾನ-2 ನೌಕೆಯ ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಇಸ್ರೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಡಾಫಡಿಲ್ಸ್‌ ಕಾನ್ಸೆಫ್ಟ್‌ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ನಾಗರಾಜ್ ಕೂಡ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ಪ್ರಧಾನಿ ಮೋದಿ ಮುಂಬೈಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

  • ವಿಶೇಷ ಮಕ್ಕಳನ್ನು ಉತ್ತಮ ‌ಪ್ರಜೆಗಳಾಗಿ ರೂಪಿಸುವಲ್ಲಿ ವಿಶೇಷ ಶಾಲೆಯ‌ ಶಿಕ್ಷಕರ ಪಾತ್ರ ಮಹತ್ತರವಾದುದು: ಪ್ರವೀಣ್ ಬಿ.ನಾಯಕ್

    ವಿಶೇಷ ಮಕ್ಕಳನ್ನು ಉತ್ತಮ ‌ಪ್ರಜೆಗಳಾಗಿ ರೂಪಿಸುವಲ್ಲಿ ವಿಶೇಷ ಶಾಲೆಯ‌ ಶಿಕ್ಷಕರ ಪಾತ್ರ ಮಹತ್ತರವಾದುದು: ಪ್ರವೀಣ್ ಬಿ.ನಾಯಕ್

    ಉಡುಪಿ: ದೈಹಿಕ ಹಾಗೂ ಮಾನಸಿಕ ಪಕ್ವತೆಯಿಲ್ಲದ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರ ಪಾತ್ರ ಮಹತ್ತರವಾದುದು. ಕಳೆದ 8 ವರ್ಷಗಳಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್‌ ಬಿ. ನಾಯಕ್‌ ಹೇಳಿದರು. ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಅಂತರರಾಷ್ಟ್ರೀಯ ಲಯನ್ಸ್‌ ಸೇವಾ ಸಂಸ್ಥೆ, ಉಡುಪಿ–ಇಂದ್ರಾಳಿ ಲಯನ್ಸ್‌ ಕ್ಲಬ್‌, ಲಿಯೋ ಕ್ಲಬ್‌, ಜಿಲ್ಲಾ ವಿಶೇಷ…

  • ಉಡುಪಿ: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮರಳುಗಾರಿಕೆ ಆರಂಭಿಸುವ ಬಗ್ಗೆ ಶಾಸಕರ ಸಭೆ

    ಉಡುಪಿ: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮರಳುಗಾರಿಕೆ ಆರಂಭಿಸುವ ಬಗ್ಗೆ ಶಾಸಕರ ಸಭೆ

    ಉಡುಪಿ: ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಉಡುಪಿ ಜಿಲ್ಲೆಯ ಸಮಸ್ಯೆ ಮತ್ತು ಅಭಿವೃದ್ಧಿ ಚಟುವಟಿಕೆಯ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಚರ್ಚೆ-ಸಭೆ ಗುರುವಾರ ನಡೆಯಿತು. ಈ ತಿಂಗಳ ೨೦ ರ ಒಳಗೆ ಮರಳುಗಾರಿಕೆಗೆ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು. ಜೊತೆಗೆ ಜಿಲ್ಲೆಯ 9/11ಎ,11ಬಿ,ಕ್ರಷರ್ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠೆ ನಿಶಾ ಜೇಮ್ಸ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಸುಕುಮಾರ್ ಶೆಟ್ಟಿ,…

  •  ಶ್ರೀಕೃಷ್ಣ ಮಠದಲ್ಲಿ: ಗಣಪತಿ ವಿಸರ್ಜನೆ ಕಾರ್ಯಕ್ರಮ

     ಶ್ರೀಕೃಷ್ಣ ಮಠದಲ್ಲಿ: ಗಣಪತಿ ವಿಸರ್ಜನೆ ಕಾರ್ಯಕ್ರಮ

    ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಮೆರವಣಿಗೆಯೊಂದಿಗೆ ಮಧ್ವಸರೋವರದಲ್ಲಿ ಗಣಪತಿ ವಿಸರ್ಜನೆ ನಡೆಯಿತು