ಉಡುಪಿ: ವೇಗದೂತ ಸಾರಿಗೆಗಳಲ್ಲಿ ದೈನಂದಿನ, ಮಾಸಿಕ ಪಾಸುಗಳ ವಿತರಣೆ

ಉಡುಪಿ :ಕರಾರಸಾ ನಿಗಮವು ಪ್ರತಿದಿನ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅತೀ ಕಡಿಮೆ ಪ್ರಯಾಣ ದರದಲ್ಲಿ ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗಗಳಲ್ಲಿ ಕಾರ್ಯಚರಿಸುತ್ತಿರುವ ವೇಗದೂತ ಸಾರಿಗೆಗಳಲ್ಲಿ ದೈನಂದಿನ (ಪ್ರತಿದಿನ ಎರಡು ಟ್ರಿಪ್ (ಹೋಗುವ ಹಾಗೂ ಬರುವ)) ಹಾಗೂ ಮಾಸಿಕ ಬಸ್ಸು ಪಾಸುಗಳನ್ನು (ಒಂದು ತಿಂಗಳಿಗೆ) ವಿತರಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಸದರಿ ದೈನಂದಿನ ಹಾಗೂ ಮಾಸಿಕ ಬಸ್ಸು ಪಾಸುಗಳ ದರಗಳು ಹೀಗಿವೆ. ಮಂಗಳೂರು- ಉಡುಪಿ ದೈನಂದಿನ ಪಾಸು 100 ರೂ., ಮಾಸಿಕ ಪಾಸು 2000 ರೂ.ಗಳು. ಉಡುಪಿ-ಕುಂದಾಪುರ ದೈನಂದಿನ ಪಾಸು […]

ಯೋಗ್ಯ ನಾಗರಿಕರನ್ನು ಸಮಾಜಕ್ಕೆ ನೀಡುವ‌ ಅನಿವಾರ್ಯತೆ-ಶಕ್ತಿ ಶಿಕ್ಷಕರಿಗಿದೆ: ಕೋಟ

ಉಡುಪಿ: ಪ್ರಸ್ತುತ ಸಮಾಜಕ್ಕೆ ಬೇಕಾದ ಯೋಗ್ಯ ನಾಗರಿಕರನ್ನು ಬೆಳೆಸುವ ಅವಶ್ಯಕತೆ, ಅನಿವಾರ್ಯತೆ ಮತ್ತು ಶಕ್ತಿ ಇದೆ. ಎಂಜಿನಿಯರ್‌, ಡಾಕ್ಟರ್‌, ರಾಜಕಾರಣಿಗಳಿಂದ ಈ ಕಾರ್ಯ ಅಸಾಧ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸಹಯೋಗದಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರ ದಿನಾಚರಣೆ ಅಂದರೆ ಶಿಕ್ಷಕರು ಶಿಕ್ಷಣ ಕ್ಷೇತ್ರಕ್ಕೆ […]

ಭ್ರೂಣಲಿಂಗ ಪತ್ತೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮ- ಡಾ.ಪ್ರತಾಪ್ ಕುಮಾರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಸುಳಿವು ಸಿಕ್ಕಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು, ಇದರ ಮಾಹಿತಿ ನೀಡಿದವರಿಗೆ 50000 ರೂ. ಬಹುಮಾನ ನೀಡಲಾಗುವುದು ಮತ್ತು ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾ ಪಿಸಿ & ಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್‍ಕುಮಾರ್ ತಿಳಿಸಿದರು. ಅವರು ಬುಧವಾರ ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರ. ಅದಾಗಿಯೂ […]

ಪ್ರಮೋದ್ ಮಧ್ವರಾಜ್ ಗೆ ಬಿಜೆಪಿ ಗೇಟ್ ತೆರೆದಿದೆ: ರಘುಪತಿ ಭಟ್

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷಕ್ಕೆ ಅರ್ಜಿ ಹಾಕಿದರೆ ಪಕ್ಷ ಸ್ವೀಕರಿಸಲಿದೆ. ಬಿಜೆಪಿಯ ಹಿರಿಯ ನಾಯಕರು ಪ್ರಮೋದ್ ಮಧ್ವರಾಜ್ ಅವರ ಸೇರ್ಪಡೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಉಪಿಯಲ್ಲಿ‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಅವರು ಜೆಡಿಎಸ್ ಪಕ್ಷದಿಂದ ಮೈತ್ರಿ ಅಭ್ಯರ್ಥಿಯಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಅನಂತರ ಯಾವ ಪಕ್ಷದಲ್ಲಿ ಇದ್ದಾರೆ ಎಂದು ತಿಳಿದಿರಲಿಲ್ಲ. ಆದರೆ ಕಳೆದ ವಾರ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ […]

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಳಿನ್ ಪುಷ್ಪಾರ್ಚನೆ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋದಂಡರಾಮಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಅನಂತರ ಶಿಕ್ಷಕರನ್ನು ಅಭಿನಂದಿಸಿ, ಶಾಲಾ ಮಕ್ಕಳಿಗೆ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರಾದ  ಮಂಜುನಾಥ್ ರಾಜ್, ಶಾಲೆಯ ಶಿಕ್ಷಕರು, ಪಕ್ಷದ ಪ್ರಮುಖರು, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.