ದ.ಕ.‌ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ನೇಮಕ

ಮಂಗಳೂರು: ದಕ್ಷಿಣ ‌ಕನ್ನಡ ಜಿಲ್ಲೆಯ ‌ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಿಂಧು ರೂಪೇಶ್ ಅವರು ಉಡುಪಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರಿನ ಎನ್‌ಐಇಯಿಂದ ಬಿ.ಇ ಪದವಿ ಪಡೆದಿರೋ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಗುರುವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಹಿನ್ನೆಲೆಯಲ್ಲಿ ಸಿಂಧು ಅವರನ್ನು ನೇಮಕ ಮಾಡಲಾಗಿದೆ. ಉಡುಪಿಯ ನೂತನ‌ ಸಿಇಒ ಆಗಿ ಉತ್ತರ ಕನ್ನಡ ಜಿಲ್ಲೆಯ ಎಸಿ […]

ಕಾಲೇಜ್ ಬಸ್ – ಆಡು ಸಾಗಾಟದ ಲಾರಿ ಮಧ್ಯೆ ಅಪಘಾತ: 15 ಕುರಿಗಳು ಬಲಿ

ಮಂಗಳೂರು: ಕಾಲೇಜ್ ಬಸ್ ಹಾಗೂ ಆಡು ಸಾಗಾಟದ ಲಾರಿ ಮಧ್ಯೆ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಮಿತ್ತೂರಲ್ಲಿ ಶುಕ್ರವಾರ ಸಂಭವಿಸಿದೆ. ಬಸ್ ಚಾಲಕ ಹಾಗೂ ಶಿಕ್ಷಕನೋರ್ವನಿಗೆ ಗಾಯವಾಗಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಆಡುಗಳು ಬಲಿಯಾಗಿವೆ. ಶಾಲಾ ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಶಾಲಾ ಬಸ್ ನ ಮುಂಭಾಗ ಹಾಗೂ ಲಾರಿ ಜಖಂಗೊಂಡಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಆಡು ಸಾಗಾಟದ ಲಾರಿಯು ಕುಂಬ್ರದಿಂದ ಬರುತ್ತಿದ್ದ ಕುಂಬ್ರ […]

ಅಜೆಕಾರು ಗಣೇಶೋತ್ಸವ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರಿಂದ ತಂಪು ಪಾನೀಯ ವಿತರಣೆ:ಸೌಹಾರ್ದತೆಯ ಸಂಗಮವಾಯ್ತು ಗಣೇಶೋತ್ಸವ

ಅಜೆಕಾರು :ಇಲ್ಲಿನ  ಇಪ್ಪತೈದನೆ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಅಜೆಕಾರು ಸಾರ್ವಜನಿಕ ಗಣೇಶೋತ್ಸವದ ವೈಭವದ ಪುರ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ತಂಪುಪಾನೀಯ ವಿತರಿಸಿ ಸೌಹಾರ್ದತೆ ಮೆರೆದಿದ್ದಾರೆ.  ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರು ಕೂಡ ಉತ್ಸಾಹದಲ್ಲಿ ಪಾಲ್ಗೊಂಡು ಸಂಭ್ರಮದ ಗಣೇಶೋತ್ಸವ ಮೆರವಣಿಗೆಗೆ ಸಾಕ್ಷಿಯಾದರು. ವೈಭದ ಮೆರವಣಿಗೆಯಲ್ಲಿ ಸುಮಾರು ಮೂರು ಸಾವಿರ ಕ್ಕೂ ಹೆಚ್ಚು ಜನ ಪಾಲ್ಗೊಂಡರು. ಹತ್ತಕ್ಕೂ ಹೆಚ್ಚು ಟ್ಯಾಬ್ಲೊಗಳು   . ಚೆಂಡೆ ಖ್ಯಾತ ಕಲಾವಿದ ಸಚಿನ್ ಬೈಲೂರು ಅವರ ನೃತ್ಯ ಸಂಗೀತ ,ಭಜನ ಮಂಡಳಿ, ಕೀಲು […]

ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಮೊಗಸಾಲೆ ಸಾಹಿತ್ಯ ವಿಚಾರ ಸರಣಿ ಕಾರ್ಯಕ್ರಮ

ಕಾರ್ಕಳ: ಬುದ್ಧಿ, ಭಾವ, ಅನುಭವದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ.ಜ್ಞಾನ ಎನ್ನುವುದು ಉತ್ಪಾದನೆ ಅಷ್ಟೇ ಹೊರತು ಹುಟ್ಟಿನಿಂದ ಬರುವ ಗುಣವಲ್ಲ.ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಬದ್ಧತೆ ಇದ್ದರೆ ಗೆಲುವು ಸಾಧ್ಯ. ಆದರೆ ಇಂದಿನ ದಿನಗಳಲ್ಲಿ ಇವು ಕಣ್ಮರೆಯಾಗುತ್ತಿವೆ ಎಂದು ಸಾಹಿತಿ ಮೊಗಸಾಲೆ ನಾರಾಯಣ ಭಟ್ ಹೇಳಿದರು. ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೊಗಸಾಲೆ ೭೫ ಅಭಿನಂದನ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಮೊಗಸಾಲೆ ಸಾಹಿತ್ಯ ವಿಚಾರ ಸರಣಿ ಕಾರ್‍ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. ಮನುಷ್ಯನಾದವನಿಗೆ ಜೀವನದಲ್ಲಿ […]

ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ – ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: 2019-20ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಾಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಗಳು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಪಡೆದಿರಬೇಕಾಗಿರುತ್ತದೆ. ಹಾಗೂ ಸಂಸ್ಥೆಯಲ್ಲಿ ಹೊಂದಿರುವ ಮೂಲಭೂತ ಸೌಕರ್ಯಗಳ ವಿವರ, ತರಬೇತಿ ನೀಡುವ ಚಟುವಟಿಕೆಗೆ ಸಂಬಂಧಿಸಿ ಸ್ಥಳಾವಕಾಶದ ಮಾಹಿತಿ, ಯಂತ್ರೋಪಕರಣಗಳ ವಿವರ, ಛಾಯಾಚಿತ್ರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಗಳನ್ನು ದ್ವಿ-ಪ್ರತಿಯೊಂದಿಗೆ ಸೆಪ್ಟಂಬರ್ 20 ರ ಒಳಗೆ […]