ಜಿಲ್ಲಾಧಿಕಾರಿ ರಾಜಿನಾಮೆ: ಕಾಂಗ್ರೇಸ್ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ: ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ವಿಚಾರ ಆಘಾತ ತರಿಸಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಈ ವಿಚಾರವಾಗಿ ಈಗಾಗಲೇ ನಾನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಲ್ಲಿ ಮಾತನಾಡಿದ್ದೇನೆ. ನಾನು ಕೂಡ ರಾಜೀನಾಮೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿ, ರಾಜೀನಾಮೆಯನ್ನು ಹಿಂಪಡೆಯಬೇಕು. ಒಂದು ವೇಳೆ ರಾಜೀನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದ ವತಿಯಿಂದ ಪೂರ್ಣ ರೀತಿಯ […]

ಜಿಲ್ಲಾಧಿಕಾರಿ ರಾಜೀನಾಮೆಗೆ ಬಿಜೆಪಿ ನೇರ ಹೊಣೆ: ಕಾಂಗ್ರೆಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಗೆ ಬಿಜೆಪಿಯೇ ನೇರ ಹೊಣೆ ಎಂದು ಹೇಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯದಲ್ಲಿ ದಕ್ಷ ಅಧಿಕಾರಿಗಳು ವರ್ಗಾವಣೆಯಾಗುತ್ತಿದ್ದಾರೆ. ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ದಕ್ಷ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಸಸಿಕಾಂತ್ ಸೆಂಥಿಲ್ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ […]

ಮಂಗಳೂರು: ಸಿಎಂ ನಿಧಿಗೆ ಬಜಪೆ ವ್ಯ.ಸೇ.ಸ. ಸಂಘದಿಂದ 5 ಲಕ್ಷ ರೂ.

ಮಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘ ಸಂಸ್ಥೆಗಳಿಗೆ ಎಸ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿರುವ ಬಜಪೆ ವ್ಯ.ಸೇ.ಸ. ಸಂಘ 5 ಲಕ್ಷ ರೂ. ನೆರವು ನೀಡಿದೆ. ಗುರುವಾರ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಬಜಪೆ ವ್ಯ.ಸೇ.ಸ. ಸಂಘದ ಅಧ್ಯಕ್ಷ ಕೆ. ಮೋನಪ್ಪ ಶೆಟ್ಟಿ ಎಕ್ಕಾರು ಅವರು ನೆರವಿನ ಚೆಕ್‌ನ್ನು ಸಿಎಂ ಪ್ರಕೃತಿ ವಿಕೋಪ ನಿಧಿಗೆ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮೂಲಕ ಹಸ್ತಾಂತರಿಸಿದರು. […]

ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು; ಚಾಲಕ ಅಪಾಯದಿಂದ ಪಾರು

ಉಡುಪಿ: ಇಲ್ಲಿನ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪೂರ್ಣ ನಜ್ಜುಗುಜ್ಜಾಗಿ, ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದ ಕಾರಣ ಹೆಚ್ಚಿನ‌ ಅನಾಹುತ ತಪ್ಪಿದೆ. ಕಾರು ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಚಲಿಸುತ್ತಿತ್ತು.  ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಚಲಾಯಿಸುತ್ತಿದ್ದು, ಅವರಿಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುವನ್ನು ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ ಸೇವೆಗೆ ರಾಜಿನಾಮೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತನ್ನ ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಐಪಿಎಸ್ ಅಣ್ಣಾಮಲೈ ಹಾದಿಯಲ್ಲೇ ಸೆಂಥಿಲ್ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ಎಂದು ತಿಳಿಸಿದ್ದಾರೆ. ಅವರು ಆಗಸ್ಟ್ 3ರಿಂದ ರಜೆಯಲ್ಲಿ ತೆರಳಿದ್ದರು ಎಂದು ತಿಳಿದು ಬಂದಿದೆ. 2017, ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು.  ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.