ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಸ್ಕೌಟ್ಸ್-ಗೈಡ್ಸ್ ಸ್ಪೂರ್ತಿ ನೀಡುತ್ತದೆ: ಪಿ.ಜಿ.ಆರ್. ಸಿಂಧ್ಯಾ
ಉಡುಪಿ: ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ತಂಡ ಸ್ಫೂರ್ತಿ ಇರಬೇಕು. ಅಂಥ ಸ್ಪೂರ್ತಿಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಬೆಳೆಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಟ್ರೈ ಸೆಂಟಿನರಿ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ ರಾಜ್ಯಮಟ್ಟದ ರೇಂಜರಿಂಗ್ ಶತಮಾನೋತ್ಸವ, ರೋವರ್ಸ್ -ರೇಂಜರ್ಸ್ ಮೂಟ್ ಮತ್ತು ರೋವರ್ ಸ್ಕೌಟ್ […]
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ಹಾಗೂ ಇಂಜಿನಿಯರ್ ದಿನಾಚರಣೆ
ನಿಟ್ಟೆ: “ನಾವು ಉದ್ಯೋಗಕ್ಕೋಸ್ಕರ ಹಾತೊರೆಯದೆ ಉದ್ಯೋಗಸೃಷ್ಠಿಗೆ ಕಾರಣರಾಗಬೇಕು. ಕೃಷಿ ಕ್ಷೇತ್ರದಲ್ಲಿ ಅದೆಷ್ಟೋ ತಂತ್ರಜ್ಞಾನ ಕ್ರಾಂತಿಯನ್ನು ಅಳವಡಿಸಿಕೊಳ್ಳುವ ಅವಕಾಶವಿದೆ. ಈ ಎಲ್ಲಾ ಮುಕ್ತ ಅವಕಾಶವನ್ನು ನಾವು ಉಪಯುಕ್ತವಾಗಿ ಬಳಸಿ ದೈನಂದಿನ ಚಟುವಟಿಕೆಗಳಿಗೆ ಸಹಾಯವಾಗುವಂತಹ ತಂತ್ರಜ್ಞಾನದ ಆವಿಷ್ಕಾರದಲ್ಲಿ ತೊಡಗಿದರೆ ಅದೆಷ್ಟೋ ಮಂದಿ ರೈತರಿಗೆ ಅನುಕೂಲವಾಗುತ್ತದೆ” ಎಂದು ‘ಮಿಲ್ಕ್ ಮಾಸ್ಟರ್’ ಹಾಲುಕರೆಯುವ ಯಂತ್ರವನ್ನು ಆವಿಷ್ಕರಿಸಿ ರಾಷ್ಟ್ರಪತಿಯವರಿಂದ ಪುರಸ್ಕೃತರಾದ ರಾಘವ ಗೌಡ ಪಲ್ಲತ್ತಡ್ಕ ಅಭಿಪ್ರಾಯಪಟ್ಟರು. ಅವರು ಸೆ.7 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಹಮ್ಮಿಕೊಂಡಿದ್ದ ಶಿಕ್ಷಕ ಹಾಗೂ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು […]
ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ: ಜೀವನದಲ್ಲಿ ಸ್ಪರ್ಧೆ ನಿರಂತರವಾಗಿದ್ದು, ಕ್ರೀಡಾಪಟುಗಳು ಕ್ರೀಡೆಯಲ್ಲಿ ಸೋತರೆ ಎದೆಗುಂದದೆ, ಸೋಲನ್ನು ಸವಾಲನ್ನಾಗಿ ಸ್ವೀಕರಿಸಿ, ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತಾನಾಡಿದರು. ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ಸುಗಳಿಸಬೇಕು ಎನ್ನುವ ಸಲುವಾಗಿ ಕ್ರೀಡಾಪಟುಗಳು ಅವಿರತ ಶ್ರಮವಹಿಸಿರುತ್ತಾರೆ. ಇಂತಹ […]
ಉಡುಪಿ: ಜಿ.ಪಂ. ಸಿಇಓ ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಪ್ರೀತಿ ಗೆಹ್ಲೋಟ್ ಶನಿವಾರ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆ ಕುಮುಟಾದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದರು. ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ, ಸಿಂಧೂ ಬಿ ರೂಪೇಶ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.
ವಿದ್ಯಾರ್ಥಿಗಳು ಬಡ ಸಹಪಾಠಿಗೆ ನೆರವು ನೀಡುವ ಮನೋಧರ್ಮ ಬೆಳೆಸಿಕೊಳ್ಳಬೇಕು: ವಿನಯ ಗುರೂಜಿ
ಉಡುಪಿ: ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಜತೆಗೆ ದೇಶದ ಬಗ್ಗೆಯೂ ಚಿಂತನೆ ಮಾಡಬೇಕು. ಜತೆಗೆ ಬಡ ಸಹಪಾಠಿಗೆ ನೆರವು ಒದಗಿಸುವ ಮನೋಧರ್ಮವನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಗೌರಿಗದ್ದೆಯ ಸ್ವರ್ಣ ಪೀಠಿಕಪುರ ದತ್ತಾಶ್ರಮದ ವಿನಯ ಗುರೂಜಿ ಹೇಳಿದರು. ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಸ್ತುತ ಸಾಲಿನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಬೆನ್ನೆಲುಬು. ವಿದ್ಯಾರ್ಥಿ ಶಕ್ತಿಗಿಂತ […]