ತಂತ್ರಜ್ಞಾನವೇ ಅಭಿವೃದ್ಧಿಯ ಶಕ್ತಿ: ಡಾ. ಆರ್ ಚಿದಂಬರಂ

ನಿಟ್ಟೆ: ‘ಭಾರತದಂತಹ ದೇಶದಲ್ಲಿ ಗ್ರಾಮೀಣಭಾಗಗಳ ಮೂಲಭೂತ ಅಭಿವೃದ್ಧಿ ಅತಿಮುಖ್ಯ ಪ್ರಾತ್ರ ವಹಿಸುತ್ತದೆ. ದೇಶದ ಅಭಿವೃದ್ಧಿಯ ಬಗೆಗೆ ದೂರದೃಷ್ಟಿ ಹೊಂದಿದ ನಾಯಕನಷ್ಟೇ ದೇಶವನ್ನು ಸಮರ್ಥವಾಗಿ ಮುನ್ನಡೆಸಬಹುದು’ ಎಂದು ಭಾರತ ಸರ್ಕಾರದ ಮಾಜಿ ವೈಜ್ಞಾನಿಕ ಸಲಹೆಗಾರ ಡಾ. ಆರ್ ಚಿದಂಬರಂ ಅಭಿಪ್ರಾಯಪಟ್ಟರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸೆ.೧೩ ರಂದು ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕವರ್ಗ ಹಾಗೂ ವಿದ್ಯಾರ್ಥಿಗಳನ್ನುದ್ದೇಶಿಸಿ ‘ಟೆಕ್ನಾಲಜಿ ಈಸ್ ಪವರ್’ ಎಂಬ ವಿಷಯದ ಬಗೆಗೆ ಮಾತನಾಡಿದರು. ‘ನಮ್ಮ ಸಾಮರ್ಥ್ಯ ಬಲವಾಗಿದ್ದರೆ ಶತ್ರುಗಳು ನಮ್ಮನ್ನು ಕೆಣಕುವ ಧೈರ್ಯ ತೋರುವುದಿಲ್ಲ. […]

ಪೊದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ

ಉಡುಪಿ: ಪೊದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಎಮ್.ಎಸ್.ಹಿರೇಮಠ  ಉದ್ಘಾಟಿಸಿದರು. ಶಾಲಾ ಮಕ್ಕಳು ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ಭಾಷಣ ಮಾಡಿದರು. ಶಿಕ್ಷಕರ ಪರವಾಗಿ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯಿಯಾದ ಲಕ್ಷ್ಮೀ ಕದೆರೇಶ್ವರನ್ ಶಿಕ್ಷಕರ ದಿನಚರಣೆಯ ಬಗ್ಗೆ  ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ರಶಾದ್ ಸ್ವಾಗತಿಸಿದರು. ವಿವಿಧ ಸಾಂಸೃತಿಕ ಕಾರ್ಯಕ್ರಮಗಳು ನಡೆದವು.ಶಿಕ್ಷಕರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ತನು ಶೆಟ್ಟಿ ನಿರೂಪಿಸಿದರು.

ಮಾವಿನಕಟ್ಟೆ : ಕೆಸರುಗದ್ದೆ ಕ್ರೀಡಾಕೂಟ ಉದ್ಘಾಟನೆ.

ಬೆಳ್ಮಣ್ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾವಿನಕಟ್ಟೆ ಘಟಕ ಮತ್ತು ಬೆಳ್ಮಣ್ ವಲಯ ಆಶ್ರಯದಲ್ಲಿ ಮಾವಿನಕಟ್ಟೆ ಮನ್‍ಬೆಟ್ಟು ಗದ್ದೆಯಲ್ಲಿ ಕೆಸರುಗದ್ದೆ ಗ್ರಾಮೀಣ ಕ್ರೀಡಾಕೂಟ ಭಾನುವಾರ ಜರುಗಿತು. ಕ್ರೀಡಾಕೂಟವನ್ನು ನಂದಳಿಕೆ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ತುಕಾರಾಮ್ ಶೆಟ್ಟಿ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಶಿವಪ್ರಸಾದ್  ಪ್ರಮುಖ ಭಾಷಣ ಮಾಡಿದರು. ವಿಶ್ವಹಿಂದೂ ಪರಿಷತ್ ಬೆಳ್ಮಣ್ ವಲಯದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕಾಡಿಕಂಬಳ  ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಂಡ್ಕೂರು ಗ್ರಾ.ಪಂ ಉಪಾಧ್ಯಕ್ಷ […]

ಉದ್ಯೋಗ ಸೃಜನ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : 2019-20 ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿ.ಎಂ.ಇ.ಜಿ.ಪಿ) ಯಡಿ ಸ್ವಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ / ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುತ್ತದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ /ಯುವತಿಯರಿಗೆ  ಗರಿಷ್ಠ ಯೋಜನಾ ವೆಚ್ಚ ರೂ. 10 ಲಕ್ಷ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು […]