ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಸಿಎಂಗೆ ಮನವಿ: ಕೋಟ

ಉಡುಪಿ: ಸಮಾಜದ ದಮನಿತ ವರ್ಗದ ಜನರ ಏಳಿಗೆಗಾಗಿ, ಅವರ ಧ್ವನಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತಂತೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ  ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ, ಬ್ರಹ್ಮಶ್ರೀ ನಾರಾಯಣ ಗುರುಗಳ […]

ಗಿರ್ ಗಿಟ್ ನಿಷೇದಾಜ್ಞೆ: ಆಕ್ಷೇಪಾರ್ಹ ದೃಶ್ಯ ತೆಗೆಯಲು ಚಿತ್ರ ತಂಡ ಒಪ್ಪಿಗೆ

ಮಂಗಳೂರು: ಗಿರಿಗಿಟ್ ಚಿತ್ರದ ವಿವಾದ ಕೊನೆಗೂ ನಿರ್ಣಾಯಕ ಹಂತ ತಲುಪಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಅಂಶ ಇರುವ ಭಾಗಗಳನ್ನು ಬೇಷರತ್ತಾಗಿ ತೆಗೆದು ಹಾಕಲು ಗಿರಿಗಿಟ್ ಚಿತ್ರ ತಂಡ ಒಪ್ಪಿಕೊಂಡಿದೆ. ಮಂಗಳೂರಿನ ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಚಿತ್ರತಂಡದ ಪರ ವಾದ ಮಂಡಿಸಿದ ಗಿರಿಗಿಟ್ ಪರ ವಕೀಲರು ಚಿತ್ರ ಪ್ರದರ್ಶನ ಮುಂದುವರಿಸಲು ಅನುಮತಿ ಯಾಚಿಸಿದರು. ತಾಂತ್ರಿಕ ಕಾರಣಗಳಿಂದ ಚಿತ್ರ ಪ್ರದರ್ಶನ ಮುಂದುವರಿಯುತ್ತಿದ್ದು, ಚೆನ್ನೈನಲ್ಲಿ ಚಲನಚಿತ್ರದ ಭಾಗಗಳನ್ನು ಎಡಿಟ್ […]

ಮಂಚಿಕೋಡಿ: ಚಿನ್ನದ ಸರ ಸುಲಿಗೆ; ಆರೋಪಿಯ ಬಂಧನ

ಉಡುಪಿ: ಶಿವಳ್ಳಿ ಗ್ರಾಮದ ಮಂಚಿಕೋಡಿ ಎಂಬಲ್ಲಿ ಗುರುವಾರ ನಡೆದ ಚಿನ್ನದ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು‌ ಮಂಚಿಕೋಡಿಯ ನಿವಾಸಿ ಪ್ರವೀಣ್ ನಾಯ್ಕ್ (32) ಎಂದು ಗುರುತಿಸಲಾಗಿದೆ. ಈತ ಗುರುವಾರ ಬೆಳಿಗ್ಗೆ 8.30ಕ್ಕೆ ಬೈಕ್ ನಲ್ಲಿ ಬಂದು ಮಣಿಪಾಲ ಪ್ರೆಸ್ ಕೆಲಸಕ್ಕೆ ಹೋಗುತ್ತಿದ್ದ ಮಂಚಿಕೋಡಿಯ ಲಲಿತಾ ನಾಯ್ಕ್ ಎಂಬುವವರ ಕುತ್ತಿಗೆಯಲ್ಲಿದ್ದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಲಲಿತಾ ಅವರು ಠಾಣೆಯಲ್ಲಿ ನೀಡಿದ ದೂರಿನಲ್ಲಿ ತನಗೆ ಪರಿಚಯ ಇರುವ […]

ಸೆ.26, 27: ಬ್ಯಾಂಕ್ ವಿಲೀನ ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಮುಷ್ಕರ

ನವದೆಹಲಿ: ದೇಶದ ಹತ್ತು ಪ್ರಮುಖ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ  ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಲು ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆಯ ವತಿಯಿಂದ  ಸೆ. 26, 27 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕಿಗೆ ಸಾಲು ಸಾಲು ರಜೆ, ಬ್ಯಾಂಕ್ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು […]

ಪತ್ರಕರ್ತರ ಸಂಘದ ವತಿಯಿಂದ ಪೊಲೀಸ್ ಕಮೀಷನರ್ ಭೇಟಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ ಕಮೀಷನರ್  ಡಾ.ಹರ್ಷ ಅವರನ್ನು ಭೇಟಿ ಮಾಡಿ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಪೊಲೀಸ್ ಆಯುಕ್ತರು  ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಕರ್ತರ ಸಂಘದ ವತಿಯಿಂದ  ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ ಈ ತಿಂಗಳಿನಲ್ಲಿ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗುವ ಕೋಮು ಸೌಹಾರ್ಧತೆ ಬೆಳೆಸುವ ಮತ್ತು […]