ಆತ್ಮಗೌರವಕ್ಕೆ ವಂಚನೆ ಮಾಡದೆ ಬದುಕುವುದೇ ಮಾನವ ಹಕ್ಕು: ಪ್ರಕಾಶ್ ಕಣಿವೆ
ಉಡುಪಿ: ಯಾವುದೇ ಸುಸಂಸ್ಕೃತ ಸಮಾಜದಲ್ಲಿ ಆತ್ಮಗೌರವಕ್ಕೆ ವಂಚನೆ ಮಾಡದೆ ಸಮಾಧಾನವಾಗಿ ಬದುಕುವುದೇ ಮಾನವ ಹಕ್ಕು ಎಂದು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್ ಕಣಿವೆ ಹೇಳಿದರು. ಉಡುಪಿ ಎಂಜಿಎಂ ಕಾಲೇಜಿನ ಯುತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನಿರ್ಲಕ್ಷ್ಯ ಮಾಡಿದರೆ, ಅದು ತಂದೆ ತಾಯಿಯ ಹಕ್ಕು ಉಲ್ಲಂಘನೆ ಆಗುತ್ತದೆ. ಅಲ್ಲದೆ, ಇದೂ ಅತೀ […]
ಸೆ. 20-21: ಮಂಗಳೂರು ವಿ. ವಿ.ಮಟ್ಟದ ಚೆಸ್ ಚಾಂಪಿಯನ್‌ಶಿಪ್
ಉಡುಪಿ: ಮಂಗಳೂರು ವಿ. ವಿ.ಮಟ್ಟದ ಪುರುಷ ಹಾಗೂ ಮಹಿಳಾ ಚೆಸ್ ಚಾಂಪಿಯನ್‌ಶಿಪ್ 2019-20 ಉಡುಪಿಯ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸೆಪ್ಟೆಂಬರ್ 20-21 ರಂದು ನಡೆಯಲಿದೆ. ಸೆ.20ರಂದು ಬೆಳಿಗ್ಗೆ 9.30ಕ್ಕೆ ಪಿಐಎಂನ ಪ್ರಜ್ಞಾ ಹಾಲಿನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚಿಸಲಿದ್ದಾರೆ. ಪಿಐಎಂ ನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ […]
ವಿಭಾಗ ಪ್ರಭಾರಿಯಾಗಿ ಕೆ. ಉದಯಕುಮಾರ್ ಶೆಟ್ಟಿ ನೇಮಕ
ಮಂಗಳೂರು: ಬಿಜೆಪಿಯ ಮಂಗಳೂರು ವಿಭಾಗ ಪ್ರಭಾರಿಯಾಗಿ ಬಿಜೆಪಿಯ ಹಿರಿಯ ಮುಖಂಡ ಕಿದಿಯೂರು ಉದಯಕುಮಾರ್ ಶೆಟ್ಟಿ ಅವರನ್ನು ಮತ್ತೊಮ್ಮೆ ನೇಮಕ ಮಾಡಲಾಗಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇಮಕ ಮಾಡಿ ಆದೇಶಿಸಿದ್ದಾರೆ. ಮಂಗಳೂರು ವಿಭಾಗದಲ್ಲಿ ಉಡುಪಿ, ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆಗಳು ಒಳಗೊಂಡಿರುತ್ತವೆ. ಕಳೆದ ಬಾರಿಯೂ ಉದಯಕುಮಾರ್ ಶೆಟ್ಟಿಯವರು ಮಂಗಳೂರು ವಿಭಾಗದ ಪ್ರಭಾರಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಆ ಅವಧಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ವಿಭಾಗದ ೧೫ಕ್ಷೇತ್ರಗಳಲ್ಲಿ ೧೪ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿತ್ತು. ಅಷ್ಷೇ ಅಲ್ಲದೇ ಜಿಲ್ಲಾ […]
ಪಚ್ಚನಾಡಿ ಮಂದಾರ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಭೇಟಿ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಅವರು ಅಧಿಕಾರ ಸ್ವೀಕಾರಿಸಿದ ಮರು ದಿನವೇ ಪಚ್ಚನಾಡಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಬುಧವಾರ ಮುಂಜಾನೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಕಮೀಷನರ್, ಅಲ್ಲಿನ ಜನರೊಂದಿಗೆ ಚರ್ಚಿಸಿದರು. ಪಚ್ಚನಾಡಿ ತ್ಯಾಜ್ಯ ಸಮಸ್ಯೆ ನಗರದ ಬಹುದೊಡ್ಡ ಸಮಸ್ಯೆಯಾಗಿದೆ. ನಾಳೆ ಬೆಂಗಳೂರಿನ ತಜ್ಞರ ತಂಡ ಆಗಮಿಸಲಿದ್ದು, ತಜ್ಞರು ನೀಡುವ ವರದಿ ಆಧಾರ ಮೇಲೆ ಸಂತ್ರಸ್ತರಿಗೆ ಸರ್ಕಾರ ನೆರವು ನೀಡಲಿದೆ ಎಂದು ಅವರು ಹೇಳಿದರು. ಮಂಗಳೂರು ಮಹಾನಗರ […]
ಭಾರತೀಯ ಕೋಸ್ಟ್ ಗಾರ್ಡ್‌ನಿಂದ 23 ಮೀನುಗಾರರ ರಕ್ಷಣೆ
ಮಂಗಳೂರು: ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಸಿಲುಕಿಕೊಂಡು ಅತಂತ್ರದಲ್ಲಿದ್ದ 23 ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಕರ್ನಾಟಕ ಮೂಲದ ಎನ್ಎಸ್ ಜಿ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಭಟ್ಕಳ ಸಮೀಪದ ಸಮುದ್ರ ತೀರದಿಂದ ಸುಮಾರು 30 ನಾಟಿಕಲ್ ಮೈಲು ದೂರದಲ್ಲಿ ರಕ್ಷಣೆ ಮಾಡಲಾಗಿದೆ. ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಸಮಸ್ಯೆಗೆ ಸಿಲುಕಿತ್ತು. ಬೋಟ್ ನಲ್ಲಿ 23 ಮಂದಿ ಮೀನುಗಾರರಿದ್ದರು. ಅಪಾಯದಲ್ಲಿರುವ ಬಗ್ಗೆ ಮಾಹಿತಿ ಪಡೆದು ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ […]