ಉಪ್ಪಿನಂಗಡಿ: ಕಾರುಗಳ ಢಿಕ್ಕಿ, ಇಬ್ಬರಿಗೆ ಗಾಯ

ಮಂಗಳೂರು: ಮಾರುತಿ ಸ್ವಿಫ್ಟ್ ಹಾಗೂ ಮಹೀಂದ್ರಾ ಕೆಯುವಿ100 ಕಾರುಗಳ ಮಧ್ಯೆ ಢಿಕ್ಕಿ ಸಂಭವಿಸಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್ ನಲ್ಲಿ ಗುರುವಾರ ನಡೆದಿದೆ. ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ ಹಾಗೂ ಅವರ ಪತ್ನಿ ಪೂರ್ಣ ಗೋಖಲೆ ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್ ಮೂಲದವರಿದ್ದ ಮಹೀಂದ್ರಾ […]
ಮರ ಕದ್ದ ಆರೋಪ ಹೊರಿಸಿ ಯುವಕನಿಗೆ ಮಾರಣಾಂತಿಕ ಹಲ್ಲೆ: ಸುಬ್ರಹ್ಮಣ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ

ಮಂಗಳೂರು: ಮರ ಕದ್ದ ಆರೋಪ ಹೊರಿಸಿ ಅಮಾಯಕ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಂಬಾರು ಗ್ರಾಮದ ಕೂಲಿ ಕಾರ್ಮಿಕ ಲೋಕೇಶ್ ಹಲ್ಲೆಗೊಳಗಾದ ಯುವಕ. ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮರ ಕಳ್ಳತನವಾಗಿತ್ತು. ಈ ಪ್ರಕರಣದ ಕುರಿತು ತನಿಖೆ ನಡೆಸೋ ಬದಲಿಗೆ ಅಮಾಯಕ ಕೂಲಿ ಕಾರ್ಮಿಕನನ್ನು ಬಂಧಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಳಿ […]
ಹಲವರಿಮಠ ಶಾಲೆಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ರಜೆಯಲ್ಲಿದ್ದ ಶಿಕ್ಷಕಿ ಮರಳಿ ಶಾಲೆಯತ್ತ: udupi xpress ವರದಿ ಫಲಶ್ರುತಿ

ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ( udupi x press ವರದಿ ಫಲಶ್ರುತಿ) ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಯಡಮೊಗೆ ಗ್ರಾಮಪಂಚಾಯತ್ ವ್ಯಾಪ್ತಿಯ ಹಲವರಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಬಳಿಕ ಎಸ್‌ಡಿಎಮ್‌ಸಿ, ಪೋಷಕರು, ಹಳೆ ವಿದ್ಯಾರ್ಥಿಗಳೊಂದಿಗೆ ಶಾಲಾ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆಯಲ್ಲಿ ಪೋಷಕರು ತಮ್ಮ ಮಕ್ಕಳಿಗಾಗುತ್ತಿರುವ ಸಮಸ್ಯೆಗಳನ್ನು ಕ್ಷೇತ್ರ […]
ಕುಂದಾಪುರದ ನಿರ್ಗಮಿತ ಎಸಿ ಮುಧುಕೇಶ್ವರ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ: 3,08,000 ನಗದು, 23 ಸರ್ಕಾರಿ ಕಡತ ವಶಕ್ಕೆ !

ಕುಂದಾಪುರ: ಮೂರು ದಿನಗಳ ಹಿಂದೆಷ್ಟೇ ವರ್ಗಾವಣೆಗೊಂಡಿದ್ದ ನಿರ್ಗಮಿತ ಕುಂದಾಪುರ ಉಪವಿಭಾಗಾಧಿಕಾರಿ ಡಾ. ಎಸ್.ಎಸ್.ಮಧುಕೇಶ್ವರ್ ಅವರ ಸರ್ಕಾರಿ ವಸತಿಗೃಹದ ಮೇಲೆ ಗುರುವಾರ ಮಧ್ಯಾಹ್ನ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವರ್ಗಾವಣೆಗೊಂಡ ಬಳಿಕವೂ ಲಂಚ ಪಡೆದು ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆಂಬ ದೂರಿನ ಮೇರೆಗೆ ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದ ಎಸಿಬಿ ತಂಡ ದಾಳಿ ನಡೆಸಿದೆ. ದಾಳಿಯ ವೇಳೆಯಲ್ಲಿ ಸಿಕ್ಕ 3,08,000 ರೂ ನಗದು ಹಾಗೂ 23 ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಸರ್ಕಾರಿ ಕಡತಗಳನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ. […]
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆ– ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತರಾಗಿರುವ ಪತ್ರಾಂಕಿತ ಅಧಿಕಾರಿಗಳಾಗಿರಬೇಕು ಮತ್ತು ಸಂಸ್ಥೆಗಳಲ್ಲಿ ಕನಿಷ್ಟ 2 ವರ್ಷ ಅಥವಾ ಕನಿಷ್ಟ 1 ವರ್ಷ ಸೇವೆ ಸಲ್ಲಿಸಿದ ಅನುಭವವಿರಬೇಕು. ಗುತ್ತಿಗೆ ನೇಮಕಾತಿ ಸಿಬ್ಬಂದಿಗಳ ಸೇವಾವಧಿ ಗರಿಷ್ಟ ವಯೋಮಿತಿ 65 ವರ್ಷಗಳಾಗಿದ್ದು, ಸದರಿ […]