ಅಜ್ಜರಕಾಡು ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಿ: ಸಮಸ್ಯೆ ಬಗೆಹರಿಸಲು ಆಗ್ರಹ
ಉಡುಪಿ: ಅಜ್ಜರಕಾಡು ಸರ್ಕಾರಿ ಆಸ್ಪತ್ರೆ ಕಡತದಲ್ಲಿ ಮಾತ್ರ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿದೆಯೇ ವಿನಾ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ. ಈಗ ಕೇಂದ್ರ ಹಾಗೂ ರಾಜ್ಯ ಎರಡು ಕಡೆ ಬಿಜೆಪಿ ಸರ್ಕಾರವಿದ್ದು, ಜಿಲ್ಲೆಯ ಶಾಸಕರು, ಸಂಸದರು ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವುದರ ಜತೆಗೆ ಸಮಸ್ಯೆಗಳನ್ನು ಸರಿಪಡಿಸಲು ಮುಂದಾಗಬೇಕು ಎಂದು ಮನೋವೈದ್ಯ ಡಾ. ಪಿ.ವಿ. ಭಂಡಾರಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಪ್ರತಿದಿನ 600 ಹೊರರೋಗಿಗಳು ಹಾಗೂ 150ಕ್ಕೂ ಅಧಿಕ ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ 17ವೈದ್ಯರು, 25ಕ್ಕೂ ಅಧಿಕ ದಾದಿಯರು, 30ಕ್ಕೂ […]
ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾವಳಿಯ ಉದ್ಘಾಟನೆ
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾವಳಿಯ ಉದ್ಘಾಟನೆ ಶುಕ್ರವಾರ ಪೂರ್ಣಪ್ರಜ್ಞ ಆಡಳಿತ ಸಂಸ್ಥೆಯ ಪ್ರಜ್ಞಾ ಸಭಾಂಗಣದಲ್ಲಿ ಜರಗಿತು. ಅದಮಾರು ಮಠದ ಶ್ರೀ ವಿಶ್ವಪ್ರೀಯ ತೀರ್ಥ ಸ್ವಾಮೀಜಿಯವರು ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೊಡುಗೆ, ಅದರಲ್ಲೂ ಅದಮಾರು ಮಠದಿಂದ ದೇಶದ ವಿವಿಧ ಬಾಗಗಳಲ್ಲಿ ಸ್ಥಾಪಿಸಲ್ಪಟ್ಟ ಹಲವಾರು ಶಿಕ್ಷಣ ಸಂಸ್ಥೆಗಳ ಕೊಡುಗೆಯನ್ನು […]
ಸಾರ್ಥಕ ಬಾಳ್ವೆ ನಡೆಸಲು ಮಾನವ ಹಕ್ಕು ಅವಶ್ಯಕ: ಈಶ್ವರ ಭಟ್
ಉಡುಪಿ: ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಹಕ್ಕನ್ನು ಗೌರವಿಸುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ಸಾರ್ಥಕ ಬಾಳ್ವೆ ನಡೆಸಲು ಮಾನವ ಹಕ್ಕುಗಳು ಅವಶ್ಯಕ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಈಶ್ವರ ಭಟ್ ಹೇಳಿದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ ಮಾನವ ಹಕ್ಕುಗಳ ಮೇಲಿನ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಹಲವಾರು ದೇಶಗಳು ಸಂವಿಧಾನದಲ್ಲಿ ವಿವಿಧ ಮಾನವ ಹಕ್ಕುಗಳನ್ನು ಅಳವಡಿಸಿಕೊಂಡಿದ್ದು, […]
ಮರೋಳಿ: ತಡೆಗೋಡೆ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ವಾರ್ಡ್ ನ ಬಜ್ಜೋಡಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಗುದ್ದಲಿಪೂಜೆ ನೆರವೇರಿಸಿದರು. ಮರೋಳಿ ವಾರ್ಡ್ ಅಧ್ಯಕ್ಷರಾದ ಜಗನ್ನಾಥ್ ದೊಡ್ಡಮನೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಮರೋಳಿ, ವಾರ್ಡ್ ಮಹಿಳಾ ಮೋರ್ಚದ ಅಧ್ಯಕ್ಷರಾದ ಸರಳ, ಬಿಜೆಪಿ ನಾಯಕರಾದ ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಅಜಯ್, ಪ್ರಮುಖರಾದ ಜಗದೀಶ್ ಶೆಣೈ, ಕೃಷ್ಣ.ಟಿ, ಪುರುಷೋತ್ತಮ ಸುವರ್ಣ, ಪ್ರಕಾಶ್ ನಾಯಕ್, ರಂಜಿತ್, ಮಾಲತಿ ಶೆಟ್ಟಿ, ಅರುಣ್ ಶೆಟ್ಟಿ […]
ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನ: ಅಲೆವೂರು ಸಂತೆಯಲ್ಲಿ ಚಾಲನೆ
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಪಂಚರತ್ನ ಸೇವಾ ಟ್ರಸ್ಟ್ ಉಡುಪಿ, ಇವರು ಜಂಟಿಯಾಗಿ ಆಯೋಜಿಸಿದ “ಪ್ಲಾಸ್ಟಿಕ್ ತ್ಯಜಿಸಿ- ಪರಿಸರ ಉಳಿಸಿ” ಅಭಿಯಾನ, ಅಲೆವೂರು ಜೋಡುರಸ್ತೆಯಲ್ಲಿ ನಡೆಯುವ ವಾರದ ಸಂತೆಯಲ್ಲಿ ಚಾಲನೆ ನೀಡಲಾಯಿತು. ಡಂಗುರ ಬಾರಿಸಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವಂತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಮಾರಕ ತೊಂದರೆಗಳ ಬಗ್ಗೆ, ಸಂತೆಯಲ್ಲಿ ತರಕಾರಿ ಖರಿಧಿಗೆ ಬಂದ ಗ್ರಾಹಕರಿಗೆ ಮತ್ತು ಮಾರಟಗಾರರಿಗೆ ಮೌಖಿಕವಾಗಿ ವಿವರಿಸಿ ಅರಿವು ಮೂಡಿಸಲಾಯಿತು. ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಗ್ರಾಹಕರಲ್ಲಿದ್ದ ಪ್ಲಾಸ್ಟಿಕ್ ಚೀಲವನ್ನು […]