ಫೋಟೋಗ್ರಫಿ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ: ರಘುಪತಿ ಭಟ್
ಉಡುಪಿ: ಪೋಟೋಗ್ರಫಿ ಕ್ಷೇತ್ರ ಹಾಗೂ ಯುವಕರಿಗೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ರಾಜ್ಯದಲ್ಲಿ ಪೋಟೋಗ್ರಫಿ ಅಕಾಡೆಮಿ ಸ್ಥಾಪಿಸುವಂತೆ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಸೌತ್ ಕೆನರಾ -ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ.- ಮತ್ತು ಉಡುಪಿ ಜಿಲ್ಲೆ ಇದರ 29ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಅಕಾಡೆಮಿ ಸ್ಥಾಪನೆಯಿಂದ -ಪೋಟೋಗ್ರಫಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಯೋಜನ ಆಗಬೇಕು. ಆ […]
ಸರಕಾರ-ಸಂಘ ಸಂಸ್ಥೆಯ ಸಹಕಾರದಿಂದ ಅಂಗನವಾಡಿಯ ಅಭಿವೃದ್ಧಿ: ಮಂಜುನಾಥ್
ಉಡುಪಿ: ಸರ್ಕಾರ ನೀಡುವ ಸೌಲಭ್ಯದ ಜತೆಗೆ ಸಂಘ ಸಂಸ್ಥೆಗಳು ಸಹ ಸಹಕಾರ ನೀಡಿದಲ್ಲಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಬಹುದು ಎಂದು ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಹೇಳಿದರು. ಬಾಲವಿಕಾಸ ಸಮಿತಿ, ರೋಟರಿ ಕ್ಲಬ್ ಉಡುಪಿ ರಾಯಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್, ಸಹಕಾರ ಭಾರತಿ ಸಹಯೋಗದಲ್ಲಿ ಮಣಿಪಾಲ ಈಶ್ವರನಗರ ವಾರ್ಡ್‌ನ ಆದರ್ಶ ನಗರ-ದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ ಸ್ತನ್ಯಪಾನ ಮತ್ತು ಪೋಷಕಾಂಶ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದರು. ಅಂಗನವಾಡಿಯಿಂದಲೇ […]
ಜಿಲ್ಲಾ ಉಸ್ತುವಾರಿ ಕುರಿತಾದ ಚರ್ಚೆ ನಿಲ್ಲಿಸಲು ಕೋಟ ಶ್ರೀನಿವಾಸ ಪೂಜಾರಿ ಮನವಿ
ಉಡುಪಿ: ಪಾರ್ಟಿ ಮತ್ತು ಮುಖ್ಯಮಂತ್ರಿಗಳು ಕೊಟ್ಟ ಅವಕಾಶ ಉಪಯೋಗಿಸಿಕೊಂಡು ಸರ್ಕಾರದ ಗೌರವ ಹೆಚ್ಚಿಸುವ ಕೆಲಸ ಮಾಡಲು ಶ್ರಮವಹಿಸಿ ದುಡಿಯುವ ನಿರ್ಧಾರ ಮಾಡಿದ್ದೇನೆ. ಈ ಮಧ್ಯೆ ಉಡುಪಿ ಜಿಲ್ಲೆಯ ಉಸ್ತುವಾರಿ ಬಗ್ಗೆ ನಡೆಯುತ್ತಿರುವ ಸಾರ್ವಜನಿಕ ವರದಿ ಕಾರ್ಯಕರ್ತರಲ್ಲಿ ಮತ್ತು ಜನಸಾಮಾನ್ಯರಲ್ಲಿ ನಿತ್ಯ ಚರ್ಚೆಯ ವಿಷಯವಾಗಿ ಮಾರ್ಪಡುತ್ತಿದೆ. ಇಲ್ಲಿಯವರೆಗೂ ನನ್ನ ಪಾರ್ಟಿ ಕೊಟ್ಟ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿದ ನನಗೆ ಇದರಿಂದ ಸಹಜವಾಗಿಯೇ ಮುಜುಗರವಾಗುತ್ತಿದೆ. ಆದ್ದರಿಂದ ನನ್ನ ಸಮಾಜವೂ ಸೇರಿದಂತೆ ನನ್ನೆಲ್ಲಾ ಆತ್ಮೀಯರು ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿಯ ವಿಚಾರದಲ್ಲಿ ನಡೆಯುತ್ತಿರುವ […]
ಜನರ ಬೇಡಿಕೆಗಳನ್ನು ಈಡೇರಿಸಲು ಶಕ್ತಿ ಮೀರಿ ಪ್ರಯತ್ನಿಸುವೆ: ಶಾಸಕ ಕಾಮತ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲ್ಲಿಗುಡ್ಡೆಯ ಜಯನಗರ ಪ್ರದೇಶಕ್ಕೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳ ಹಿಂದೆ ಈ ಪ್ರದೇಶವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು ಅದಕ್ಕೂ ಮೊದಲು ಈ ಭಾಗ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿತ್ತು. ಈ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ. ಮೂಲಭೂತ ಸೌಕರ್ಯಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ. ಈ […]
ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ: ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ: ಶಾಸಕ ಕಾಮತ್
ಮಂಗಳೂರು: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಪೂರ್ಣ ಪ್ರಮಾಣದ ಸಹಕಾರ ಒದಗಿಸುವುದಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಎಕ್ಕೂರು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಿದ್ದು ನೂತನ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗ್ರೆ ಪ್ರದೇಶ ಸೇರಿದಂತೆ ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದ್ದು ಇನ್ನಷ್ಟು ಅಂಗವನಾಡಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಬೇಡಿಕೆಗಳನ್ನು […]