ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನ ಸೆ.29ರಿಂದ ಅ.8ರ ವರೆಗೆ ನವರಾತ್ರಿ ಉತ್ಸವ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇಗುಲದಲ್ಲಿ ಸೆ.29 ರಿಂದ ಅ.8ರ ತನಕ ನವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಲಿದೆ. ಆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ದೇವಳದಲ್ಲಿ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ನಾನಾ ರಾಜ್ಯಗಳಿಂದ ಆಗಮಿಸುವ ಭಕ್ತರಿಗೆ ವಿಜಯದಶಮಿಯಂದು ಸರಸ್ವತಿ ಮಂಟಪದಲ್ಲಿ ನಡೆಯಲಿರುವ ವಿದ್ಯಾರಂಭಕ್ಕೆ ಅನುಕೂಲತೆ ಕಲ್ಪಿಸಲಾಗುವುದು. ದೇವಳದಲ್ಲಿ ಅಕ್ಟೋಬರ್ 7 ಮಹಾ ನವಮಿಯಂದು ಬೆಳಿಗ್ಗೆ 11:30ಕ್ಕೆ ಚಂಡಿಕಾಯಾಗ ನಡೆಯಲಿದೆ. ಪ್ರತಿದಿನ ಸಂಜೆ ಸ್ವರ್ಣಮುಖಿ ಸಭಾಭವನದಲ್ಲಿ ಆಹ್ವಾನಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು […]

ಭಾರತದ ಮುಂದಿನ‌ ಭವಿಷ್ಯ ಇಂದಿನ ವಿದ್ಯಾರ್ಥಿಗಳ‌ ಮೇಲಿದೆ: ಶಾಸಕ ಕಾಮತ್

ಮಂಗಳೂರು: 2018-19ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಯೋಜನೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುವ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನವಾಗಿ ಸರಕಾರ ಕೊಡಮಾಡುವ ಲ್ಯಾಪ್‌ಟಾಪ್‌ಗಳನ್ನು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಯುವ ಶಕ್ತಿ ಈ ದೇಶದ ಸಂಪತ್ತು. ಭಾರತದ ಮುಂದಿನ ಭವಿಷ್ಯ ಇಂದಿನ […]

ಕೆಎಂಸಿ ಮಹಿಳಾ ಮತ್ತು ಮಕ್ಕಳ ಕೇಂದ್ರ ಉದ್ಘಾಟಿಸಿದ ಶಿಲ್ಪಾ ಶೆಟ್ಟಿ

ಮಂಗಳೂರು: ಮಂಗಳೂರಿನಲ್ಲಿ ಕೆಎಂಸಿ ಸಂಸ್ಥೆ ಪ್ರಾರಂಭಿಸಿದ ಮಹಿಳಾ ಮತ್ತು ಮಕ್ಕಳ ಕೇಂದ್ರವನ್ನು ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು. ಇದೇ ವೇಳೆ ಸಂಸ್ಥೆಯ ವತಿಯಿಂದ ಗರ್ಭಿಣಿಯರಿಗೆ ಆಯೋಜಿಸಲಾಗಿದ್ದ ವಾವ್ ಮಾಮ್ ಸ್ಪರ್ಧಾ ಕಾರ್ಯಕ್ರಮದ‌ ವಿಜೇತರನ್ನು ಘೋಷಿಸಿ, ಬಹುಮಾನ ವಿತರಿಸಿ ಶಿಲ್ಪಾ ಶೆಟ್ಟಿ ಕಿರೀಟ ತೊಡಿಸಿದರು. ಸುಮಾರು 350 ಗರ್ಭಿಣಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮವಾಗಿ 10 ಗರ್ಭಿಣಿಯರು ಸ್ಪರ್ಧೆಯಲ್ಲಿ ಇದ್ದರು. ಬಳಿಕ ತುಳುವಿನಲ್ಲೇ ಮಾತು ಪ್ರಾರಂಭಿಸಿದ ಬಾಲಿವುಡ್ ಬೆಡಗಿ ಶಿಲ್ಪಾ, ತಾಯಿ ಅಥವಾ ಮಹಿಳೆಯರು […]

ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.29-ಅ8ರ ವರೆಗೆ ಸಂಭ್ರಮದ ನವರಾತ್ರಿ ಉತ್ಸವ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ನವರಾತ್ರಿ ಉತ್ಸವವು ಶ್ರೀವಿಕಾರಿ ನಾಮಸಂವತ್ಸರದ ಅಶ್ವಯುಜ ಶುದ್ಧ ಪ್ರತಿಪದಿ ಸೆಪ್ಟೆಂಬರ್ 29ರಿಂದ ಪ್ರಾರಂಭಗೊಂಡು ಅಶ್ವಯುಜ ಶುದ್ಧ ದಶಮಿ ಅಕ್ಟೋಬರ್ 8ರವರೆಗೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನವರಾತ್ರಿಯ ಪ್ರಯುಕ್ಯ ಪ್ರತಿದಿನ ತ್ರಿಕಾಲ ಪೂಜೆ, ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಸುತ್ತುಬಲಿ ನಡೆಯುತ್ತದೆ. ಅ.5ರಂದು ರಾತ್ರಿ ಶಾರದಾ ದೇವಿಯ ಪ್ರತಿಷ್ಠಾಪನಾ ಕಾರ್ಯ ಹಾಗೂ ವಿಶೇಷ ಪೂಜಾ ಕೈಂಕರ್ಯಗಳಿವೆ. ಅ. […]

ಕರಾವಳಿಯಲ್ಲಿ ಶಾಂತಿ ಕದಡುವ ಕೃತ್ಯ ನಡೆಸಿದರೆ ಸುಮ್ಮನಿರುವುದಿಲ್ಲ: ಶಾಸಕ ಕಾಮತ್

ಮಂಗಳೂರು: “ಭಾರತ ಹಿಂದೂರಾಷ್ಟ್ರ” ಎಂದ ಯುವಕನೊಬ್ಬನ ಮೇಲೆ ಗುಂಪೊಂದು ಅಮಾನವೀಯ ಹಲ್ಲೆ ನಡೆಸಿರುವ ಘಟನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಖಂಡಿಸಿದ್ದು, ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯವನ್ನು ಯಾರೇ ನಡೆಸಿದರೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಶಾಂತಿಯನ್ನು ಕದಡುವ ಕಾರ್ಯವನ್ನು ಯಾರೂ ಮಾಡಬಾರದು. ಶಾಂತಿ ಸಾಮರಸ್ಯ ಕಾಯ್ದುಕೊಳ್ಳಲು ಸರ್ವರೂ ಸಹಕರಿಸಬೇಕು. ಒಂದು ವೇಳೆ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡಿದರೆ […]