ಸೆ.29 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರಧಾನ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2018-19 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಸಪ್ಟೆಂಬರ್29 ರಂದು ಬೆಳಗ್ಗೆ 10 ಗಂಟೆಗೆ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು. ಈ ಪದವಿಪ್ರದಾನ ಸಮಾರಂಭದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ ವಿದ್ಯಾರ್ಥಿಗಳಿಗೆ ಪದವಿಪ್ರದಾನ ಮಾಡಲಾಗುವುದು ಹಾಗೂ ಶೈಕ್ಷಣಿಕ ಸಾಧನೆಗೈದ […]

ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ-ಉಡುಪಿ ಡಿಸಿ ಜಗದೀಶ್

ಉಡುಪಿ,: ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ಗಳು ಸೇರಿದಂತೆ  ಜಿಲ್ಲಾದ್ಯಂತ  ಅಕ್ಟೋಬರ್ 2 ರ ನಂತರ  ಪ್ಲಾಸ್ಟಿಕ್ ನಿಷೇಧವನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ನಿಷೇಧಿತ ಪ್ಲಾಸ್ಟಿಕ್ ಬಳಸುವ ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರ ಮೇಲೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಅವರು ಗುರುವಾರ , ಉಡುಪಿ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಿಂದ ಅಕ್ಟೋಬರ್ 2 ರ ವರೆಗೆ ಪ್ಲಾಸ್ಟಿಕ್ ನಿಷೇಧದ ಕುರಿತು […]

ಮೀನುಗಾರರ ಸಾಲ ಮರುಪಾವತಿಗೆ ಬ್ಯಾಂಕುಗಳು ಒತ್ತಾಯಿಸುವಂತಿಲ್ಲ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮೀನುಗಾರರ ಸಾಲ ಮನ್ನಾ ಯೋಜನೆಯಡಿ ಯಲ್ಲಿ 2017-18 ಮತ್ತು 2018-19  ಸಾಲಿನಲ್ಲಿ  ಮೀನುಗಾರರಿಗೆ, ರಾಷ್ಟ್ರೀಕೃತ  ಬ್ಯಾಂಕುಗಳು , ಪ್ರಾದೇಶಿಕ ಬ್ಯಾಂಕುಗಳು ಶೇ 2, ಶೇ 3 ಹಾಗೂ ಶೂನ್ಯ ಬಡ್ಡಿದರದಲ್ಲಿ ವಿತರಿಸುವ  ಸಾಲುಗಳು  ಮನ್ನಾ ಆಗಲಿದ್ದು,   ಆರ್ಹ ಫಲಾನುಭವಿಗಳಿಗೆ ಸಾಲ ಮರು ಪಾವತಿಗಾಗಿ ಬ್ಯಾಂಕ್‍ಗಳಿಂದ ಯಾವುದೇ ಒತ್ತಡ ಹೇರುವಂತಿಲ್ಲಾ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್  ಸಭಾಂಗಣದಲ್ಲಿ ನಡೆದ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ

ನಿಟ್ಟೆ: ‘ಸಮಾಜದ ಏಳಿಗೆಯ ಪ್ರಕ್ರಿಯೆಯಲ್ಲಿ ನನ್ನ ಪಾತ್ರವೇನಿದೆ ಎಂಬುದನ್ನು ಪ್ರತಿಯೋರ್ವ ಮಾನವನೂ ಚಿಂತಿಸಿ ಬದುಕಬೇಕು. ರಾಷ್ಟ್ರೀಯ ಸೇವಾ ಯೋಜನೆಯ ಆಶಯದಂತೆ ರಾಷ್ಟ್ರಾಭಿವೃದ್ಧಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು’ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕವು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ‘ಹೆತ್ತವರಿಗೆ ಒಳ್ಳೆಯ ಮಕ್ಕಳಾಗಿದ್ದು, ಪ್ರಾಧ್ಯಾಪಕರಿಗೆ ಉತ್ತಮ ವಿದ್ಯಾರ್ಥಿಗಳೆನಿಸಿಕೊಂಡು, ವಿವಿಧ ಬಗೆಯ ಕೌಶಲ್ಯತೆಯನ್ನು ಬೆಳೆಸಿಕೊಂಡು ಸಮಾಜಕ್ಕೆ ಹಾಗೂ ದೇಶದ ಅಭಿವೃದ್ಧಿಗೆ ಕೆಲಸಮಾಡಬೇಕು ಎಂದರು. […]

ಎಲ್‌ಐಸಿ ವಲಯ ಸಲಹಾ ಸಮಿತಿ ಸದಸ್ಯೆಯಾಗಿ ಡಾ.ಉಷಾ ಪ್ರಭಾ ಎನ್.ನಾಯಕ್ ಪುನರ್ ನೇಮಕ

ಮಂಗಳೂರು: ಭಾರತೀಯಜೀವ ವಿಮಾ ನಿಗಮದ ವಲಯ ಸಲಹಾ ಸಮಿತಿಯ ಸದಸ್ಯರಾಗಿ ಎರಡನೆಯ ಅವಧಿಗೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್‌ ಅವರನ್ನು ಪುನರ್ ನೇಮಕ ಮಾಡಲಾಗಿದೆ. ಎರಡು ವರ್ಷದ ಎಲ್‌ಐಸಿಯ ಸೌತ್ ಸೆಂಟ್ರಲ್ ವಲಯದ ಸಲಹಾ ಸಮಿತಿಗೆ ಎರಡನೆಯ ಅವಧಿಗೆ ಅವರನ್ನು ಪುನರ್‌ ನೇಮಕ  ಮಾಡಲಾಗಿದೆ. ಜೀವ ವಿಮಾ ನಿಗಮದ ಬೆಳವಣಿಗೆ ದೃಷ್ಟಿಯಿಂದ ನಡೆಯುವ ಸಭೆಗಳಲ್ಲಿ ಭಾಗವಹಿಸಿ ವಿಚಾರ ವಿಮರ್ಶೆ ಮಾಡಿ ಚರ್ಚಿಸಿ ಸೂಕ್ತ ಶಿಫಾರಸು ನೀಡುವ ಉದ್ದೇಶದಿಂದ ಇವರನ್ನು ನೇಮಕ ಮಾಡಲಾಗಿದೆ. ಮಂಗಳೂರಿನ […]