ಉಡುಪಿ: ಎರಡು ದಿನಗಳ ವ್ಯಾಪಾರ ಮೇಳ-ವಸ್ತು ಪ್ರದರ್ಶನಕ್ಕೆ ಚಾಲನೆ
ಉಡುಪಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ, ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆ ಮಂಗಳೂರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ- ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಎರಡು ದಿನಗಳ ವ್ಯಾಪಾರ ಮೇಳ ಹಾಗೂ ವಸ್ತುಪ್ರದರ್ಶನ ‘ಉದ್ಯಮ್ ಸಮಾಗಮ್’ಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್, ಸುನಿಲ್ ಕುಮಾರ್, ಬಿ.ಎಂ. […]
ಅಕ್ರಮ ಮೀನುಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಅಕ್ರಮ ಮೀನುಗಾರಿಕೆ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಲ್ಪೆ ಡೀಪ್ ಸೀ ಟ್ರಾಲ್ ಬೋಟ್ ಅಸೋಸಿಯೇಶನ್ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಅವೈಜ್ಞಾನಿಕ ಬೆಳಕು ಮತ್ತು ಬುಲ್ಟ್ರಾಪ್ ಮೀನುಗಾರಿಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೂ ಅಕ್ರಮ ಮೀನುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ತಡೆಯೊಡುತ್ತಿಲ್ಲ. ಇದರಿಂದ ಮತ್ಸ್ಯಕ್ಷಾಮ ಉಂಟಾಗಿ ರಾಜ್ಯದ 18 ಸಾವಿರ ನಾಡದೋಣಿ ಮೀನುಗಾರರು ಮತ್ತು 4,500 […]
ಸೆ.29: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಜೀರ್ಣೋದ್ಧಾರ; ಭೋಜನ ಶಾಲೆ ಉದ್ಘಾಟನೆ
ಉಡುಪಿ: ಜಿಲ್ಲೆಯ ಪ್ರಸಿದ್ದ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸೆ. 29ರಂದು ಭೋಜನ ಶಾಲೆ ಉದ್ಘಾಟನೆ ಮತ್ತು ಸಮಗ್ರ ಜೀರ್ಣೋದಾರಕ್ಕೆ ದಾರು ಹಾಗೂ ಶಿಲಾ ಮುಹೂರ್ತ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಜನಪ್ರತಿನಿಧಿಗಳು, ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಶರನವರಾತ್ರಿ ಮಹೋತ್ಸವ: ಶ್ರೀ ಕ್ಷೇತ್ರದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 8 ರವರೆಗೆ ಶರನವರಾತ್ರಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಗಳು ಪ್ರತಿನಿತ್ಯ […]
ಪ್ರವಾಸೋದ್ಯಮ ಅಭಿವೃದ್ದಿಗೆ ಕಾರ್ಯಪಡೆ ರಚನೆ:ಬಸವರಾಜ ಬೊಮ್ಮಾಯಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನೂ ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ದಿಗೊಳಿಸುವ ಉದ್ದೇಶದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ಮಲ್ಪೆಅಭಿವೃದ್ಧಿ ಸಮಿತಿ ಮತ್ತು ಕರಾವಳಿ ಪ್ರವಾಸೋದ್ಯಮ ಸಂಘಟನೆ(ಂಅಖಿ), ಉಡುಪಿ ಜಿಲ್ಲೆಇವರ ಸಹಯೋಗದಲ್ಲಿಪ್ರವಾಸೋದ್ಯಮ ಹಾಗೂ ಉದ್ಯೋಗ ಸರ್ವರಿಗೂಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆಜಿಲ್ಲಾಧಿಕಾರಿಕಚೇರಿ ಸಂಕೀರ್ಣದಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ […]
ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಿ: ಸಚಿವ ಬೊಮ್ಮಾಯಿ
ಉಡುಪಿ,: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳ ಸಮರ್ಪಕ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಉಡುಪಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಉಡುಪಿ ಜಿಲ್ಲಾ ಟೂರಿಸಂ ಟಾಸ್ಕ್ ಫೋರ್ಸ್ನ್ನು ರಚನೆ ಮಾಡುವ ನಿರ್ಣಯವನ್ನು ಶುಕ್ರವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೈಗೊಳ್ಳಲಾಯಿತು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ಜಿಲ್ಲೆಗೆ ಒಂದು ವಿಶೇಷವಾದ ಟೂರಿಸಂ […]