ಕರಾವಳಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಕರಾವಳಿ ಪ್ರವಾಸೋದ್ಯಮ ಸಾಂಸ್ಕೃತಿಕ, ಸಾಂಪ್ರದಾಯಿಕ, ದೇವಾಲಯಗಳನ್ನು ಹೊಂದಿರುವ ಧಾರ್ಮಿಕತೆಯ ನಾಡು. ಜಿಲ್ಲೆಯಲ್ಲಿ ವಿಸ್ತಾರವಾದ ಸುಂದರ ಸಮುದ್ರ ಕಿನಾರೆ ಹೊಂದಿದೆ, ಆದರೂ ಇನ್ನಷ್ಟು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ದಕ್ಷಿಣ ಕನ್ನಡ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2019” ಯನ್ನು ಪ್ರವಾಸೋದ್ಯಮ ಹಾಗೂ ಉದ್ಯೋಗ : […]
ಸೆ. 29ರಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಭ್ರಮದ ದಸರಾ ಮಹೋತ್ಸವ
ಮಂಗಳೂರು: ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರ ವರೆಗೆ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಉತ್ಸವಗಳು ನಡೆಯಲಿದ್ದು, ಸೆಪ್ಟೆಂಬರ್ 29ರ ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳುತ್ತದೆ ಎಂದರು. ಅಂದು ಪೂರ್ವಾಹ್ನ 11.20ಕ್ಕೆ ನವದುರ್ಗೆಯರು ಹಾಗೂ ಶಾರದಾ ಪ್ರತಿಷ್ಠೆ ನಡೆಯಲಿದೆ. ಸೆಪ್ಟೆಂಬರ್ 30ರಂದು ದುರ್ಗಾ ಹೋಮ, ಅ.1ರಂದು ಬೆಳಗ್ಗೆ ಆರ್ಯ […]