ಸಹಕಾರ ಸಂಘಗಳನ್ನು ಉಳಿಸಿಕೊಳ್ಳಬೇಕೆಂಬ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ: ಜನರು ಸಹಕಾರಿ ಸಂಘಗಳ ಕುರಿತಂತೆ ನಿರಾಶವಾದಿಗಳಾಗುವ ಅಗತ್ಯವಿಲ್ಲ. ಆಶಾವಾದಿಗಳಾಗಿ ಸಹಕಾರಿ ಸಂಘಗಳನ್ನು ಉಳಿಸಿಕೊಳ್ಳಬೇಕೆಂಬ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಮ್ಮಣ್ಣಿರಾಮಣ್ಣ ಸಭಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಬಹೃತ್‌ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಬದುಕಿಗೆ ಇನ್ನಷ್ಟು ಬಲ ಬರಬೇಕಾದರೆ ಸಹಕಾರಿ ಹೋರಾಟವನ್ನು ಮುಂದುವರಿಸಿಕೊಂಡು ಹೋಗಬೇಕು. ಅದಕ್ಕೆ […]

ರಾಜ್ಯದಾದ್ಯಂತ ಉಚಿತ ನೇತ್ರ ತಪಾಸಣೆ-ಚಿಕಿತ್ಸಾ ಶಿಬಿರ ನಡೆಸಲು ಚಿಂತನೆ: ಶ್ರೀರಾಮುಲು

ಉಡುಪಿ: ರಾಜ್ಯದಲ್ಲಿ ದೃಷ್ಟಿ ನೀತಿ ಸಮಿತಿ ರಚಿಸಲು ಈಗಾಗಲೇ ಚಿಂತನೆ ನಡೆಸಲಾಗಿದ್ದು, ಅದರ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ನಡೆಸಿ ಪ್ರತಿಯೊಬ್ಬರಿಗೂ ದೃಷ್ಟಿ ನೀಡುವ ಕೆಲಸ ಮಾಡಲಾಗುವುದು.‌ ಜತೆಗೆ ಮುಂದಿನ ದಿನಗಳಲ್ಲಿ ಬಡವರ ಆರೋಗ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಡೀ ರಾಜ್ಯದಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಪರಿವಾರ ಸಮುದಾಯ ಅಭಿವೃದ್ಧಿ ಟ್ರಸ್ಟ್‌, […]

ಕೂಸಮ್ಮಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸರ್ಕಾರಿ ವಿಭಾಗ ತೆರೆಯುವಂತೆ ಶಾಸಕ ರಘುಪತಿ ಭಟ್ ಒತ್ತಾಯ

ಉಡುಪಿ: ಕೂಸಮ್ಮಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸರ್ಕಾರಿ ವಿಭಾಗವೊಂದನ್ನು ತೆರೆದು, ಸರ್ಕಾರಿ ವೈದ್ಯಾಧಿಕಾರಿಗಳನ್ನು ಮಾಡಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಆಗ್ರಹಿಸಿದ್ದಾರೆ. ಕೂಸಮ್ಮಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ವಿಭಾಗವೊಂದನ್ನು ತೆರೆದರೆ, ಜನರಲ್ಲಿ ಇದು ಸರ್ಕಾರಿ ಆಸ್ಪತ್ರೆ ಎಂಬ ಭಾವನೆ ಬರುತ್ತದೆ. ಅಲ್ಲದೆ ಸರ್ಕಾರದಿಂದಲೂ ಹೆಚ್ಚಿನ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ […]

ಸೆ. 29ರಿಂದ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ‌ ದೇವಸ್ಥಾನದಲ್ಲಿ ಸಂಭ್ರಮದ ಶರನವರಾತ್ರಿ 

ಪಡುಬಿದ್ರೆ: ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಕಾರ್ಯಕ್ರಮ ಸೆ. 29ರಿಂದ ಅ. 10ರ ವರೆಗೆ ಸಂಭ್ರಮದಿಂದ ನಡೆಯಲಿದೆ. ಶರನ್ನವರಾತ್ರಿ ಪ್ರಯುಕ್ತ ಪ್ರತಿದಿನ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ನವರಾತ್ರಿ ಪೂಜೆ ನಡೆಯಲಿದೆ. ಸೆ.29 ಅದ್ಯಗಣಯಾಗ, ಚಂಡಿಕಾಯಾಗ ಸೆ.30 ಲಕ್ಷ್ಮಿ ಹೃದಯ ಹೋಮ, ಅ.1ರಿಂದ 3: ಚಂಡಿಕಾಯಾಗ, ಅ. 4 ಮತ್ತು 5ರಂದು ಶ್ರೀ ಸೂಕ್ತ ಹೋಮ, […]

ಸೆ.29ರಿಂದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

ಕಟಪಾಡಿ: ಉಡುಪಿ‌ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ  ಸೆ. 29 ರಿಂದ ಪ್ರಾರಂಭಗೊಂಡು ಅ.7ರ ವರೆಗೆ  ಜರಗಲಿದೆ. ಆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಿತ್ಯ ಭಜನೆ, ಸಾಂಸ್ಕೃತಿಕ, ದಾಂಡಿಯಾ ನೃತ್ಯ ಕಾರ್ಯಕ್ರಮಗಳೊಂದಿಗಳು ನಡೆಯಲಿವೆ. ಅ. 6 ರಂದು ಬೆಳಿಗ್ಗೆ 9 ಗಂಟೆಗೆ ಮಹಾ ಚಂಡಿಕಾಯಾಗ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್. ಶಂಕರ್ ಪೂಜಾರಿ, ಪದಾಧಿಕಾರಿಗಳು, ಸರ್ವ ಸದಸ್ಯರ ಪ್ರಕಟನೆ ತಿಳಿಸಿದೆ.