ಕುಂದಾಪುರ: ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಪಾದಯಾತ್ರೆ: ಭರ್ಜರಿ ಜನಬೆಂಬಲ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ಮಾಬುಕಳದಿಂದ ಕೋಟದವರೆಗೆ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಪಾದಯಾತ್ರೆಗೆ ಸಾರ್ವಜನಿಕರಿಂದ ಅತ್ಯುತ್ತಮವಾದ ಬೆಂಬಲ ದೊರಕಿತು. ಮಾಬುಕಳ ಬಸ್ ಸ್ಟ್ಯಾಂಡಿನಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆಯು ಮಾಬುಕಳ, ಸಾಸ್ತಾನ, ಸಾಲಿಗ್ರಾಮ ಮಾರ್ಗವಾಗಿ ಸಾಗಿ ಕೋಟದಲ್ಲಿ ಸಮಾಪನಗೊಂಡಿತು. ಸುಮಾರು ಮೂರುವರೆ ವರುಷಗಳ ಹಿಂದೆಯೇ ಕುಮ್ರಗೋಡು, ಮಾಬುಕಳ, ಸಾಸ್ತಾನ, ಸಾಲಿಗ್ರಾಮ, ಕೋಟ ವ್ಯಾಪ್ತಿಯ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಿಕೊಡಬೇಕು ಎಂಬ ಬೇಡಿಕೆಯನ್ನು ಇಟ್ಟು ಹೋರಾಟವನ್ನು ಮಾಡುತ್ತಾ […]
ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ
ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಅಕ್ಟೋಬರ್ 11: ಉಡುಪಿ ತಾಲೂಕು ಮಟ್ಟದ ಕಲಾಶ್ರೀ ಶಿಬಿರ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಬ್ರಹ್ಮಾವರ ಕಚೇರಿ ವತಿಯಿಂದ ಉಡುಪಿ ತಾಲೂಕು ಮಟ್ಟದ ಕಲಾಶ್ರೀ ಶಿಬಿರವನ್ನು ಅಕ್ಟೋಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಏರ್ಪಡಿಸಲಾಗಿದೆ. ಉಡುಪಿ ತಾಲೂಕಿನ ವಿವಿಧ ಶಾಲೆಗಳ 9 ರಿಂದ 16 ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳ ಕ್ಷೇತ್ರಗಳಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು […]
ಆಯುಷ್ಮಾನ್ ಭಾರತ್ ಯೋಜನೆಯ ಅಡೆತಡೆಗಳ ನಿವಾರಣೆಗೆ ಪ್ರಯತ್ನ: ಶೋಭಾ ಕರಂದ್ಲಾಜೆ
ಉಡುಪಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪ್ರಪ್ರಥಮವಾಗಿ ಭಾರತದಲ್ಲೆ ಜಾರಿಗೊಳಿಸಲಾದಂತಹ ಯೋಜನೆ, ಇಂತಹ ಯೋಜನೆ ಪ್ರಪಂಚದ ಬೇರಿನ್ನಾವುದೇ ದೇಶದಲ್ಲಿ ಇಲ್ಲದಿರುವುದು ನಮ್ಮ ಹೆಗ್ಗಳಿಕೆ. ಈ ಯೋಜನೆಯಲ್ಲಿರುವ ಅಡೆತಡೆಗಳನ್ನು ಸರಿಪಡಿಸಿ, ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದರ ಲಾಭ ದೊರೆಯುವಂತೆ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು. ಅವರು, ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಹಮ್ಮಿಕೊಳ್ಳಲಾದ ಆಯುಷ್ಮಾನ್ ಭಾರತ […]
ನವದೆಹಲಿ: ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 80-90 ರು.ಗೆ ತಲುಪಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಬಗೆಯ ಈರುಳ್ಳಿ ರಫ್ತು ಮಾಡುವುದಕ್ಕೆ ನಿಷೇಧಿಸಲಾಗಿದೆ ಎಂದು ಡೈರೆಕ್ಟೊರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಅಧಿಸೂಚನೆಯಲ್ಲಿ ತಿಳಿಸಿದೆ. ಈರುಳ್ಳಿ ಬೆಳೆಯುವಂಥ ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ನೆರೆ ಸಮಸ್ಯೆ ಆಗಿ, ಈರುಳ್ಳಿ ಉತ್ಪಾದನೆಯಲ್ಲಿ ಕುಸಿತವಾಗಿದ್ದರಿಂದ ಈ ಸ್ಥಿತಿ ಏರ್ಪಟ್ಟಿತು ಎನ್ನಲಾಗಿದೆ. ದೇಶದಲ್ಲಿ ಈರುಳ್ಳಿ ಪೂರೈಕೆ ಸುಗಮವಾಗುವವರೆಗೂ ವಿದೇಶಗಳಿಗೆ ಈರುಳ್ಳಿ ರಫ್ತಿಗೆ ನಿಷೇಧ […]