ಕೊಲ್ಲೂರಿನಲ್ಲಿ 21 ಕೋಟಿ ರೂ. ವೆಚ್ಚದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆಯ ಕಟ್ಟಡ ಲೋಕಾರ್ಪಣೆ

ಕುಂದಾಪುರ : ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಇರುವ ದೇವಸ್ಥಾನಗಳ ಸಹಕಾರವನ್ನು ಪಡೆದುಕೊಂಡು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪ ಮಾಡಲಾಗಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ ಎಂದು ರಾಜ್ಯ ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ  ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಲ್ಲೂರಿನಲ್ಲಿ ಬುಧವಾರ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ […]

ಕುಂದಾಪುರ ಕಾಂಗ್ರೆಸ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜನ್ಮ ದಿನಾಚರಣೆ

ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಇಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೆಎಫ್‌ಡಿಸಿ ಮಾಜಿ ಅಧ್ಯಕ್ಷ ಬಿ.ಹಿರಿಯಣ್ಣ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಚಿಂತನೆಗಳ ಮಹತ್ವದ ಕುರಿತು ಸಭೆಗೆ ವಿವರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿ ಪ್ರಸಾದ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರೆಗಾರ, ಪುರಸಭಾ ಸದಸ್ಯರಾದ ಪ್ರಭಾವತಿ […]

ಅ.6ರಂದು ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮಂಗಳೂರು: ಅವಿಭಜಿತ ಜಿಲ್ಲಾ ಕಂಬಳ ಸಮಿತಿ ಮಹಾಸಭೆ ಅ.6ರಂದು ಬೆಳಗ್ಗೆ 10ಗಂಟೆಯಿಂದ ಮೂಡುಬಿದಿರೆ ಸಮಾಜ ಭವನದಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ತಿಳಿಸಿದ್ದಾರೆ. ಮಹಾಸಭೆ ಕ್ಲಪ್ತ ಸಮಯಕ್ಕೆ ಆರಂಭವಾಗಲಿದ್ದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿರಬೇಕು. ಈ ಸಭೆಯಲ್ಲಿ ಮುಂದಿನ ಕಂಬಳ ಸಿದ್ಧತೆ, ಯೋಜನೆಗಳು ಸೇರಿದಂತೆ ನಾನಾ ವಿಚಾರದಲ್ಲಿ ಚರ್ಚೆ ನಡೆಯಲಿದೆ. ಕಂಬಳ ದಿನಾಂಕ ನಿಗದಿ: 2019-20ನೇ ಸಾಲಿನ ಕಂಬಳ ದಿನಾಂಕವನ್ನು ಇದೇ ಸಭೆಯಲ್ಲಿ ಚರ್ಚಿಸಿ ನಿಗದಿಪಡಿಸಲಾಗುವುದು. ಆದುದರಿಂದ ಕಂಬಳ ಸಮಿತಿಯ ಎಲ್ಲ ಸದಸ್ಯರು, […]

ಅ. 4: ಮಣಿಪಾಲದಲ್ಲಿ ಅಂತರಾಷ್ಟ್ರೀಯ ಮಟ್ಟದ ಇ-ಪೋಸ್ಟರ್ ಸಮ್ಮೇಳನ 

ಉಡುಪಿ: ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸುವ ನಿಟ್ಟಿನಿಂದ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ವಾಣಿಜ್ಯ ವಿಭಾಗದ ವತಿಯಿಂದ ಅ.4ರಂದು ಮಣಿಪಾಲ ಕೆಎಂಸಿಯ ಡಾ. ಟಿಎಂಎ ಪೈ ಹಾಲ್‌ನಲ್ಲಿ ಒಂದು ದಿನದ ಅಂತರರಾಷ್ಟ್ರೀಯ ಮಟ್ಟದ ಇ–ಪೋಸ್ಟರ್‌ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಮಾಹೆಯ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಂಕಿತಾ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಮ್ಮೇಳನವು ಆಡಳಿತ ನಿರ್ವಹಣೆ, ವಾಣಿಜ್ಯ, ಆರೋಗ್ಯ ನಿರ್ವಹಣೆ, ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ, ವ್ಯವಹಾರ ವಿಶ್ಲೇಷಣೆ ಮುಂತಾದ ವಿಚಾರಗಳನ್ನು ಮಂಡಿಸಲು […]

ಗಾಂಧೀಜಿಯ ರಾಮರಾಜ್ಯದ ಪರಿಕಲ್ಪನೆ ಅನುಷ್ಠಾನಗೊಳಿಸಿಲ್ಲ; ಸ್ವಚ್ಛತೆಯ ಚಿಹ್ನೆಯಾಗಿ ಬಳಸಿಕೊಂಡಿದ್ದೇವೆ: ಶ್ರೀರಾಜ್ ಗುಡಿ

ಉಡುಪಿ: ಗಾಂಧೀಜಿ ಭಾರತ ದೇಶಕ್ಕೆ ಸೀಮಿತವಾಗಿರದೆ, ಇಡೀ ಜಗತ್ತಿಗೆ ಪ್ರೇರಣ ಶಕ್ತಿಯಾಗಿದ್ದಾರೆ. ಅವರು ತನ್ನ ವಿಚಾರಧಾರೆಗಳಿಂದ ಇಂದಿಗೂ ಪ್ರಚಲಿತದಲ್ಲಿದ್ದಾರೆ. ಆದರೆ ನಾವು ಗಾಂಧಿಯನ್ನು ಸ್ವಚ್ಛತೆಯ ಚಿಹ್ನೆಯಾಗಿ ಮಾತ್ರ ಬಳಸಿಕೊಂಡಿದ್ದೇವೆಯೇ‌ ಹೊರತು, ಅವರ ರಾಮರಾಜ್ಯದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿಲ್ಲ ಎಂದು ಮಣಿಪಾಲ ಮಾಹೆಯ ಎಂಐಸಿಯ ಸಹಾಯಕ ಪ್ರಾಧ್ಯಾಪಕ ಪ್ರೊ. ಶ್ರೀರಾಜ್‌ ಗುಡಿ ಬೇಸರ ವ್ಯಕ್ತಪಡಿಸಿದರು. ಉಡುಪಿ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರ ಹಾಗೂ ಎಂಜಿಎಂ ಪದವಿ ಪೂರ್ವ‌ ಕಾಲೇಜಿನ ವತಿಯಿಂದ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ಆಯೋಜಿಸಲಾದ […]