ಹೇಳಿಕೆ ಕೊಟ್ಟ ಕೂಡಲೇ ದೇಶದ್ರೋಹಿ ಆಗಲು ಸಾಧ್ಯವಿಲ್ಲ: ಪೇಜಾವರ ಶ್ರೀ

ಬಾಗಲಕೋಟೆ: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಗೆ ದೇಶದ್ರೋಹಿ ಎಂಬ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದು, ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ. ಸೂಲಿಬೆಲೆ ಸಮಾಜಕ್ಕೆ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲ್ಲ ಎಂದರು. ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಇನ್ನೂ […]