ಗಂಗೊಳ್ಳಿ :ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಾರ್ಯಕ್ರಮ

ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ ೪೫ನೇ ವರ್ಷದ ಸಮಾರಂಭದ ಅಂಗವಾಗಿ ಶ್ರೀ ದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಮತ್ತು ಗ್ರಾಮಾಭಿವೃದ್ಧಿಗೋಸ್ಕರ ಶ್ರೀ ಚಂಡಿಕಾ ಯಾಗ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶನಿವಾರ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ಗೋವಿಂದ ಪುತ್ರನ್ ದಂಪತಿ ಕಟ್‌ಬೇಲ್ತೂರು, ವಾಸುದೇವ ಶೇರುಗಾರ್ ದಂಪತಿ ಗಂಗೊಳ್ಳಿ ಹಾಗೂ ಕೃಷ್ಣ ಮೇಸ್ತ ದಂಪತಿ ಗುಜ್ಜಾಡಿ […]

20 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾರ್ಮಿಕ ಕಾಲೋನಿಯಲ್ಲಿ ರಸ್ತೆ ಅಭಿವೃದ್ಧಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಮಂಗಳೂರು ಅಭಿವೃದ್ದಿಯತ್ತ ಸಾಗುತ್ತಿದೆ. ಕೇವಲ ನಗರ ಪ್ರದೇಶ ಮಾತ್ರವಲ್ಲದೆ ಒಳ ಪ್ರದೇಶಗಳನ್ನೂ ಗುರುತಿಸಿ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದೇನೆ. ಸಾರ್ವಜನಿಕರ ಬೇಡಿಗೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು. ರಾಜ್ಯ ಸರಕಾರದ ಸಹಕಾರದೊಂದಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ […]

ಕೇಂದ್ರದ ಆಡಳಿತ ಪ್ಯಾಸಿಸಂಗೆ ಸಮಾನ: ಸಿದ್ದರಾಮಯ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಫ್ಯಾಸಿಸಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂಪಾಯಿ ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ […]

ಮತ್ಸ್ಯಕ್ಷಾಮದಿಂದ ಪಾರಾಗಲು ಬೊಬ್ಬರ್ಯನ ‌ಮೊರೆ ಹೋದ ಮೀನುಗಾರರ ಸಂಘ

ಉಡುಪಿ: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮತ್ಸ್ಯಕ್ಷಾಮದಿಂದ ಮೀನುಗಾರರನ್ನು ಪಾರು ಮಾಡುವಂತೆ ಕೋರಿ ಮಲ್ಪೆ ಪರ್ಸಿನ್‌ ಮೀನುಗಾರರ ಸಂಘದವರು ಮಲ್ಪೆ ಕಲ್ಮಾಡಿಯ ಬೊಬ್ಬರ್ಯ ದೈವಸ್ಥಾನದಲ್ಲಿ ಶನಿವಾರ ವಿಶೇಷ ದರ್ಶನ ಸೇವೆ ಸಲ್ಲಿಸಿದರು. ಈ ವೇಳೆ ಮಲ್ಪೆ ಪರ್ಸಿನ್‌ ಮೀನುಗಾರರ ಸಂಘದ ಉಪಾಧ್ಯಕ್ಷ ಚಂದ್ರ ಸಾಲ್ಯಾನ್‌ ಮಾತನಾಡಿ, ಕಳೆದ ಎರಡು ತಿಂಗಳುಗಳಿಂದ ಸಮುದ್ರದಲ್ಲಿ ಎಲ್ಲಿ ಹೋದರೂ ಮೀನುಗಳೇ ಸಿಗುತ್ತಿಲ್ಲ. ಮಂಗಳೂರು, ಕಾರವಾರ, ಕೇರಳ ಭಾಗದಲ್ಲೂ ಮೀನುಗಳು ಇಲ್ಲವಾಗಿದೆ. ಇದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ. ಸಂಪಾದನೆ ಇಲ್ಲದೆ ಹೊರರಾಜ್ಯದ ಕಾರ್ಮಿಕರು ಊರಿಗೆ […]

ಉಡುಪಿಯ ರೆಡ್ ಕ್ರಾಸ್ : ಜಿಲ್ಲೆಯ ನೆರೆ ಸಂತ್ರಸ್ತರಿಗೆ ಪರಿಹಾರದ ಕಿಟ್ ವಿತರಣೆ

ಉಡುಪಿ: ಪ್ರವಾಹ ಮತ್ತು ತುರ್ತು ಸಂದರ್ಭದಲ್ಲಿ ಹಾಗೂ ಅನಾರೋಗ್ಯ ಪೀಡಿತರು ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿರುವ ರೆಡ್ ಕ್ರಾಸ್ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ. ಅವರು ಶನಿವಾರ, ಉಡುಪಿಯ ರೆಡ್ ಕ್ರಾಸ್ ಭವನದಲ್ಲಿ, ಜಿಲ್ಲೆಯ ನೆರೆ ಸಂತ್ರಸ್ಥರಿಗೆ ಪರಿಹಾರದ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ನೆರವು ನೀಡುವ ರೆಡ್ ಕ್ರಾಸ್‍ನ ಕಾರ್ಯಗಳು ಅನುಕರಣೀಯವಾಗಿದ್ದು, […]