ಅ.19 ರಂದು ಕಾರ್ಕಳದಲ್ಲಿ ಕಲಾಶ್ರೀ ಶಿಬಿರ: ಮಕ್ಕಳಿಗೆ ಕಾದಿವೆ ಭರ್ಜರಿ ಸ್ಪರ್ಧೆ, ಬಹುಮಾನಗಳು

ಉಡುಪಿ : ಕಾರ್ಕಳ ತಾಲೂಕು ಶಿಶು ಅಭಿವೃಧ್ಧಿ ಯೋಜನೆ, ಸೌಹಾರ್ಧ ಸ್ತ್ರೀಶಕ್ತಿ ಭವನ, ಕಾರ್ಕಳ ಇಲ್ಲಿ ಅಕ್ಟೋಬರ್ 19 ರಂದು ಬೆಳಗ್ಗೆ 9 ಕ್ಕೆ ಕಲಾಶ್ರೀ ಶಿಬಿರವನ್ನು ಆಯೋಜಿಸಲಾಗಿದೆ. ಕಲಾಶ್ರೀ ಪ್ರಶಸ್ತಿ: ೯ ರಿಂದ ೧೬ ವರ್ಷದೊಳಗಿನ ಮಕ್ಕಳು ಈ ಕೆಳಗಿನ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಸೃಜನಾತ್ಮಕ ಕಲೆ : ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಬರವಣಿಗೆ : ಕಥೆ, ಕವನ, ಪ್ರಬಂಧ ಬರೆಯುವುದು (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಪ್ರದರ್ಶನ ಕಲೆ: […]

ಗಂಗೊಳ್ಳಿ:ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೋಣೆಗಳಿಗೆ ಶಂಕುಸ್ಥಾಪನೆ

ಗಂಗೊಳ್ಳಿ : ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾದುದು ಸರಕಾರದ ಕರ್ತವ್ಯ. ಶಾಲಾ ಕೊಠಡಿಗಳಿಲ್ಲದ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ತರಗತಿ ಕೋಣೆ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಶಾಲಾ ಕಟ್ಟಡದ ದುರಸ್ಥಿಗೂ ಅನುದಾನ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದ ಮಲೆನಾಡು […]

ಬೀದಿ ನಾಟಕದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ: ಬಾಲಕೃಷ್ಣ ಹೆಗ್ಡೆ

ಉಡುಪಿ: ಬೀದಿ ನಾಟಕಗಳ ಮೂಲಕ ಸಾಮಾಜಿಕ ಪರಿವರ್ತನೆ ಮಾಡಲು ಸಾಧ್ಯವಿದೆ. ವಿದ್ಯಾರ್ಥಿಗಳು ಬೀದಿ ನಾಟಕಗಳ ಮೂಲಕ ಸಮಾಜದಲ್ಲಿ ಜನಜಾಗೃತಿ ಮೂಡಿಸಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಎಸ್‌. ಬಾಲಕೃಷ್ಣ ಹೆಗ್ಡೆ ಹೇಳಿದರು. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಿದ ಎರಡು ದಿನಗಳ ರಂಗ ತರಬೇತಿ ಶಿಬಿರವನ್ನು ಉದ್ಘಾಟಿಸಿ […]

ಯೆಯ್ಯಾಡಿ: 5.65 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮಂಗಳೂರು: ಯೆಯ್ಯಾಡಿ ಕೈಗಾರಿಕಾ ವಲಯದಲ್ಲಿ 5.65 ಕೋ. ರೂ. ವೆಚ್ಚದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸ್ಥಳೀಯರು, ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಆಗಬೇಕಿರುವ ಅಭಿವೃದ್ಧಿಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರ ಬಳಿ ಬೇಡಿಕೆಯಿಟ್ಟಿದ್ದೆವು. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೊಳಿಸಿದರೆ ಕೈಗಾರಿಕಾ ವಲಯದ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಇಲ್ಲಿಗೆ […]

ಯುವತಿಯರರು ಸ್ಕ್ವಾಷ್ ಕ್ರೀಡೆಗೆ ಆಸಕ್ತಿ‌ ತೋರುವುದು ಉತ್ತಮ ಬೆಳವಣಿಗೆ: ರವಿದೀಕ್ಷಿತ್ 

ಉಡುಪಿ: ಪ್ರಸ್ತುತ ದಿನಗಳಲ್ಲಿ ಯುವತಿಯರು ಸ್ಕ್ವಾಷ್‌ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅಂತರರಾಷ್ಟ್ರೀಯ ಸ್ಕ್ವಾಷ್‌ ಆಟಗಾರ ರವಿದೀಕ್ಷಿತ್‌ ಹೇಳಿದರು. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ವತಿಯಿಂದ ಮಣಿಪಾಲದ ಮರೀನಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಮೂರು ದಿನಗಳ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಸ್ಕ್ವಾಷ್‌ ಚಾಂಪಿಯನ್‌ಶಿಪ್‌ ಟೂರ್ನಮೆಂಟ್‌ ಅನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಯುವತಿಯರು ಕಾಲೇಜು ವಿದ್ಯಾಭ್ಯಾಸದವರೆಗೆ ಮಾತ್ರ ಸ್ಕ್ವಾಷ್‌ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಕಾಲೇಜು ಶಿಕ್ಷಣ ಮುಗಿದ ಬಳಿಕ […]