ತೆರಿಗೆ ಪಾವತಿಸದ ಮೊಬೈಲ್ ಟವರ್ ಗೆ ನೋಟಿಸ್ ಜಾರಿಗೊಳಿಸಿ: ಕೋಟ
ಮಂಗಳೂರು: ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ. ಹೀಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ […]
ಭಾರತ-ಪಾಕ್ ದ್ವಿಪಕ್ಷೀಯ ಸರಣಿ; ಎರಡು ದೇಶಗಳ ಪ್ರಧಾನಮಂತ್ರಿಗಳ ಅನುಮೋದನೆ ಬೇಕು: ಗಂಗೂಲಿ
ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶಗಳ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಬಿಸಿಸಿಐ ನೂತನ ಅಧ್ಯಕ್ಷ ಸ್ಥಾನ ಪಡೆದ ಬಳಿಕ ಗಂಗೂಲಿ ಅವರು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶದ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ತಿಳಿಸಿದ್ದಾರೆ. ಯಾವಾಗ ದ್ವಿಪಕ್ಷೀಯ ಸರಣಿ ನಡೆಯಬೇಕು ಎಂಬುದನ್ನು ನೀವು ಭಾರತದ ಪ್ರಧಾನಿ ನರೇಂದ್ರ […]
ಶ್ರೀ ಕೃಷ್ಣ ಮಠ: ವಿದ್ಯಾಸಿಂಹಾಚಾರ್ಯ ಅವರಿಗೆ ಶ್ರೀಪೂರ್ಣಪ್ರಜ್ಞ ಪ್ರಶಸ್ತಿ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿದ್ವಾಂಸರಾದ ಮಾಹುಲಿ ವಿದ್ಯಾಸಿಂಹಾಚಾರ್ಯ,ಮುಂಬೈ ಇವರನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು “ಶ್ರೀಪೂರ್ಣಪ್ರಜ್ಞ ಪ್ರಶಸ್ತಿ” ನೀಡಿ ಅನುಗ್ರಹಿಸಿದರು. ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು,ಪ್ರಯಾಗದ ಶ್ರೀ ವಿದ್ಯಾತ್ಮತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಆವರ್ಸೆ ಗ್ರಾ.ಪಂ.: ತ್ರೈಮಾಸಿಕ ಕೆ.ಡಿ.ಪಿ ಸಭೆ
ಉಡುಪಿ : ಆವರ್ಸೆ ಗ್ರಾಮ ಪಂಚಾಯತ್ನ ದ್ವಿತೀಯ ಹಂತದ ತ್ರೈಮಾಸಿಕ (ಕೆ.ಡಿ.ಪಿ)ಸಭೆಯು ಪಂಚಾಯತ್ ಅಧ್ಯಕ್ಷ ಹೆಚ್ ಪ್ರಮೋದ್ ಹೆಗ್ಡೆ ಅಧ್ಯಕ್ಷತೆಯಲ್ಲಿ, ಆವರ್ಸೆ ಗ್ರಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಅಧ್ಯಕ್ಷರು ಆಗಮಿಸಿರುವ ಎಲ್ಲಾ ಇಲಾಖೆಗಳು ಸಾಧಿಸಿರುವ ಗುರಿ ಮತ್ತು ಸಾಧನೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಗ್ರಂಥಾಲಯ ಇಲಾಖೆಯಿಂದ ಮೇಲ್ವಿಚಾರಕಿ ಸನಾ, ಸಿಂ.ರೈ.ಸೇ.ಸ.ಸಂಘ ಆವರ್ಸೆ ಶಾಖಾಧಿಕಾರಿ ಶರತ್ ಶೆಟ್ಟಿ, ಶಿಕ್ಣಣ ಇಲಾಖೆಯಿಂದ ಸಹಶಿಕ್ಷಕಿ ಶಾಮಿಲಿ, ಶಿಶು ಅಭಿವೃಧ್ಧಿ ಇಲಾಖೆಯಿಂದ […]
ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಅರ್ಜಿ ಸಲ್ಲಿಸಿ
ಉಡುಪಿ : 2019-20 ನೇ ಸಾಲಿನಲ್ಲಿ ವಿದೇಶಿ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ ಪಿಎಚ್ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ ನೋಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: […]