ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ
ಉಡುಪಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ-1 ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತರಾಗಿರುವ ಪತ್ರಾಂಕಿತಅಧಿಕಾರಿಗಳಾಗಿರಬೇಕು ಮತ್ತು ಸಂಸ್ಥೆಗಳಲ್ಲಿ ಕನಿಷ್ಟ 2 ವರ್ಷ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ/ ಡಿಸಿಪಿಒ ಆಗಿ ಕನಿಷ್ಟ 1 ವರ್ಷ ಸೇವೆ ಸಲ್ಲಿಸಿದ ಅನುಭವವಿರಬೇಕು. ಗುತ್ತಿಗೆ ನೇಮಕಾತಿ ಸಿಬ್ಬಂದಿಗಳ ಸೇವಾವಧಿ ಗರಿಷ್ಟ ವಯೋಮಿತಿ 65 […]
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಪ್ರಯತ್ನ: ರಘುಪತಿ ಭಟ್
ಉಡುಪಿ: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ, ಮುಖ್ಯಮಂತ್ರಿಗಳೊಂದಿಗೆ ಚಿರ್ಚಿಸಿ, ಮುಂದಿನ ಬಜೆಟ್ನಲ್ಲಿ ಅನುಮತಿ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಮತ್ತು ಉಳ್ಳಾಲ, ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, […]
ಹಾಸಿಗೆ ಗೋದಾಮಿಗೆ ಬೆಂಕಿ; ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲು
ಮಂಗಳೂರು: ಹಾಸಿಗೆ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಗಳೂರು ತೊಕಟ್ಟು ಸಮೀಪದ ಕಲ್ಲಾಪು ಪಟ್ಲದಲ್ಲಿ ಶನಿವಾರ ನಡೆದಿದೆ. ಗೋದಾಮಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ. ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಿಕೆ ಜಾಸ್ತಿಯಾಗುತ್ತಿದ್ದ ಹಿನ್ನೆಲೆ ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯರು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿಯ ರಭಸಕ್ಕೆ ಗೋದಾಮಿನ ಒಳಗೆ ಇದ್ದ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಲಾಗಿದೆ. ಈ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿದ […]
ಶಾಸ್ತ್ರಿ ಸರ್ಕಲ್ ಚಲೋ” ನಮ್ಮ ಕಾರ್ಯಕ್ರಮವಲ್ಲ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಪಷ್ಟನೆ
ಕುಂದಾಪುರ: ಅಕ್ಟೋಬರ್ 20ರ ಭಾನುವಾರ ಕುಂದಾಪುರದಲ್ಲಿ ನಡೆಯಲಿದೆ ಎನ್ನಲಾಗಿರುವ “ಶಾಸ್ತ್ರಿ ಸರ್ಕಲ್ ಚಲೋ” ಎಂಬ ಹೆಸರಿನ ಕಾರ್ಯಕ್ರಮಕ್ಕೂ “ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ”ಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ ರಾಯಪ್ಪನ ಮಠ ಸ್ಪಷ್ಟಪಡಿಸಿದ್ದಾರೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸಂಯೋಜಿತವಾಗಿರುವ […]
ನೆಲ್ಯಾಡಿ: ಅಕ್ರಮ ಜಾನುವಾರು ಸಾಗಾಟ; ಓರ್ವ ಬಂಧನ; 22 ಜಾನುವಾರು ವಶ
ಮಂಗಳೂರು: ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಕೋಲ್ಪೆಯಲ್ಲಿ ಪತ್ತೆಹಚ್ಚಿದ್ದಾರೆ. ನೆಲ್ಯಾಡಿ ಪೊಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆದು 22 ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ತುಮಕೂರು ನಿವಾಸಿ ನವಾಝ್ ಬಂಧಿತ ಆರೋಪಿ. ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಪೊಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟಿದ ಪೊಲೀಸರು ಕೋಲ್ಪೆಯಲ್ಲಿ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ 22 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿದ್ದುದು ಪತ್ತೆಯಾಯಿತು ಎಂದು ಪೊಲೀಸರು […]