ಸಂಘ-ಸಂಸ್ಥೆಯ ಬೆಳವಣಿಗೆಗೆ ಹಿರಿಯರ ಮಾರ್ಗದರ್ಶನ ಮುಖ್ಯ: ಜಯರಾಮ್ ಆಚಾರ್ಯ

ಉಡುಪಿ: ಹಿರಿಯರ ಅನುಭವ, ಮಾರ್ಗದರ್ಶನದೊಂದಿಗೆ ಮುನ್ನಡೆದಲ್ಲಿ ಸಂಘ ಸಂಸ್ಥೆಗಳ ಏಳ್ಗೆ ಸಾಧ್ಯ ಎಂದು ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಕೆ. ಜಯರಾಮ್‌ ಆಚಾರ್ಯ ಹೇಳಿದರು. ಚಿಟ್ಟಾಡಿ ವಿಶ್ವಕರ್ಮ ಸೇವಾ ಸಂಘದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು. ಯಾವುದೇ ಸಂಘ ಸಂಸ್ಥೆಗಳ ಬೆಳವಣಿಗೆ ಆಗಬೇಕಿದ್ದರೆ ಅಲ್ಲಿ ಒಗ್ಗಟ್ಟು ಮುಖ್ಯ. ಕೇವಲ ಪದಾಧಿಕಾರಿಗಳು ಮಾತ್ರ ಜವಾಬ್ದಾರಿ ತೆಗೆದುಕೊಳ್ಳದೆ ಸದಸ್ಯರೆಲ್ಲರೂ ಒಟ್ಟಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಮಾದರಿ ಸಂಸ್ಥೆಯನ್ನಾಗಿ […]

ಕಲಾಕೃತಿಗಳ ಮೂಲಕ ಜನರಲ್ಲಿ ಸಾಕ್ಷಿಪ್ರಜ್ಞೆ ಮೂಡಿಸುವ ಕೆಲಸವಾಗಬೇಕು: ಡಾ.‌ಪಿ.ವಿ. ಭಂಡಾರಿ

ಉಡುಪಿ: ಕಲಾವಿದರು ತಮ್ಮ ಕಲಾಕೃತಿಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವ ಕೆಲಸ ಮಾಡಬೇಕು ಎಂದು ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದರು. ಮಣಿಪಾಲ ಸರಳೇಬೆಟ್ಟಿನ ಹೊಸ ಬೆಳಕು ಆಶ್ರಮದಲ್ಲಿ ಆಯೋಜಿಸಿದ ಅವೇ ಮಣ್ಣಿನ ಕಲಾಕೃತಿ ರಚನೆಯ ತರಬೇತಿ ಶಿಬಿರ ‘ಮಣ್ಣಿನ ಆಟ’ವನ್ನು ಉದ್ಘಾಟಿಸಿ ಮಾತನಾಡಿದರು. ಕಲಾವಿದರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಬೇಕು. ಇಂತಹ ಕಾರ್ಯಗಳು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆಗೆ ಪ್ರೇರೇಪಣೆ ಆಗುತ್ತದೆ ಎಂದರು. ಉಡುಪಿ ಆರ್ಟಿಸ್ಟ್‌ ಫಾರಂನ ಸಂಚಾಲಕ ರಮೇಶ್‌ ರಾವ್‌ […]

ಯೋಗದಿಂದ ಸದೃಡ ಆರೋಗ್ಯ ಕಾಪಾಡಲು ಸಾಧ್ಯ: ವಿದ್ಯಾದೀಶ ಶ್ರೀ

ಉಡುಪಿ: ಯೋಗದಿಂದ ಸದೃಢ ಆರೋಗ್ಯ ಸದೃಢ ಆರೋಗ್ಯ ಕಾಪಾಡಲು ಸಾಧ್ಯ. ಪ್ರತಿದಿನ ಯೋಗಾಭಾಸ್ಯ ಮಾಡುವುದರಿಂದ ಕಾಯಿಲೆ ಮುಕ್ತರಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಯೋಗದ ಲಾಭ ಪಡೆದುಕೊಳ್ಳಬೇಕು ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ನ. 16ರಿಂದ 20ರ ವರೆಗೆ ರಾಮ್‌ದೇವ್‌ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯುವ ಐದು ದಿನಗಳ ಯೋಗ ಶಿಬಿರದ ಪೂರ್ವಭಾವಿಯಾಗಿ ಶ್ರೀಕೃಷ್ಣಮಠದ ಕನಕಮಂಟಪದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇಂದು ಭಾರತಕ್ಕಿಂತಲೂ ವಿದೇಶಿಗರು ಹೆಚ್ಚು ಯೋಗಾಸನದ […]

ಮಂಗಳೂರು: ಪ್ರಕೃತಿ ವಿಕೋಪದ ಚೆಕ್ ವಿತರಣೆ

ಮಂಗಳೂರು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಚೆಕ್ಕನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪ್ರಕೃತಿ ವಿಕೇಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರಕಾರದಿಂದ ಸಿಗುವ ಪರಿಹಾರ ಧನದ ಚೆಕ್ಕನ್ನು ವಿತರಿಸಿದ್ದೇವೆ. 25 ಜನರಿಗೆ ಪರಿಹಾರ ಚೆಕ್ ವಿತರಿಸಲಾಗಿದೆ. ಮಳೆಹಾನಿಯಿಂದ ನಗರ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂರ್ಣ ಪ್ರಮಾಣದ ಹಾನಿಯಾದ ಕಡೆಗೆ ಹಿಂದೆಂದಿಗಿಂತಲೂ ಹೆಚ್ಚಿನ ಮೊತ್ತವನ್ನು ಕೊಟ್ಟಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರೂಪಾ […]