ಡಿಕೆಶಿ ಬಿಡುಗಡೆ ಉಪಚುನಾವಣೆ ಮೇಲೆ ಪರಿಣಾಮ ಬೀರದು; ಬಿಜೆಪಿಗೆ ಗೆಲುವು ಖಚಿತ: ಕೋಟ ಭರವಸೆ
ಉಡುಪಿ: ಮುಂಬರುವ ಕರ್ನಾಟಕ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಡಿಕೆಶಿ ಬಿಡುಗಡೆ ಸೇರಿದಂತೆ ಇನ್ಯಾವುದೇ ವಿಷಯಗಳು ಇದರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗಾಂಧೀಜಿಯ 150ನೇ ಜನ್ಮದಿನಾಚರಣೆ ಆಚರಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ. ಆದರೆ ಕಾಂಗ್ರೆಸ್ ಗಾಂಧೀಜಿಯನ್ನು ಮರೆತು, ಜೈಲಿನಿಂದ ಬಿಡುಗಡೆಗೊಂಡವರ ಸಂಭ್ರಮಾಚರಣೆ ಮಾಡುವ ಮೂಲಕ ಜವಾಬ್ದಾರಿ ರಹಿತವಾಗಿ ನಡೆದುಕೊಳ್ಳುತ್ತಿದೆ. […]
ಗಾಂಧೀಜಿ ಅವರನ್ನು ರಾಜಕೀಯ ಪಕ್ಷದ ಕಪಿಮುಷ್ಠಿಯಿಂದ ಹೊರತರಬೇಕು: ಶೋಭಾ ಕರಂದ್ಲಾಜೆ
ಉಡುಪಿ: ಮಹಾತ್ಮ ಗಾಂಧೀಜಿ ಅವರದ್ದು ರಾಜಕೀಯ ಹೊರತಾದ ವ್ಯಕ್ತಿತ್ವ. ಆದರೆ ಸ್ವಾತಂತ್ರ್ಯದ ನಂತರ ಅವರು ಒಂದು ಪಕ್ಷದ ಚಿಹ್ನೆಯ ಜೊತೆ ಸೀಮಿತರಾಗಿದ್ದರು. ಆದ್ದರಿಂದ ಅವರನ್ನು ರಾಜಕೀಯ ಪಕ್ಷದ ಕಪಿಮುಷ್ಠಿಯಿಂದ ಹೊರತರಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಮಹಾತ್ಮ ಗಾಂಧೀಜಿಯ 150ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ‘ಗಾಂಧಿ ಸಂಕಲ್ಪ ಯಾತ್ರೆ’ಗೆ ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ಗುರುವಾರ ಚಾಲನೆ ನೀಡಿ ಮಾತನಾಡಿದರು. ಗಾಂಧೀಜಿ ನಮ್ಮ ದೇಶದ ನಿಜವಾದ ರಾಷ್ಟ್ರಪಿತ, ರಾಷ್ಟ್ರನಾಯಕ. ಅವರು ಸ್ವಾತಂತ್ರ್ಯ ವಿಚಾರದ […]
ಸಿದ್ದರಾಮಯ್ಯ ಕ್ಷುಲ್ಲಕ-ಚೀಪ್ ಮೆಂಟಾಲಿಟಿ ಹೊಂದಿರುವ ರಾಜಕಾರಣಿ: ಶೋಭಾ ಕರಂದ್ಲಾಜೆ
ಉಡುಪಿ: ವೀರ ಸವಾರ್ಕರ್ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಬೇಕು. ಸ್ವಾತಂತ್ರ್ಯಕ್ಕಾಗಿ ಯಾರೆಲ್ಲ ಹೋರಾಟ ಮಾಡಿದ್ದಾರೆಂಬುವುದೇ ಗೊತ್ತಿಲ್ಲದ ಸಿದ್ದರಾಮಯ್ಯಗೆ ಇದೆಲ್ಲ ಅರ್ಥ ಆಗುವುದಿಲ್ಲ. ಅವರು ಓರ್ವ ಕ್ಷುಲಕ, ಚೀಪ್ ಮೆಂಟಾಲಿಟಿ ಹೊಂದಿರುವ ರಾಜಕಾರಣಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಉಡುಪಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸವಾರ್ಕರ್ ಅವರ ಇಡೀ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ಸಿದ್ದರಾಮಯ್ಯನವರಿಗೆ ಕೇವಲ ವೋಟ್, ಜಾತಿ, ಧರ್ಮ ಮಾತ್ರ ಕಾಣುತ್ತದೆ. […]