ತುಫಾನಿಗೆ ಸಿಲುಕಿದ್ದ18 ಮೀನುಗಾರರ ರಕ್ಷಣೆ
ಉಡುಪಿ: ಕಾರವಾರ ಮತ್ತು ಗೋವಾದ ಗಡಿಯಲ್ಲಿ ತುಫಾನಿಗೆ ಸಿಲುಕಿಕೊಂಡಿದ್ದ ಮಲ್ಪೆಯ ರಾಜ್‌ಕಿರಣ್ ಮತ್ತು ಮಂಗಳೂರಿನ ಮಹೇಲಿ ಬೋಟ್‌ನಲ್ಲಿದ್ದ ಒಟ್ಟು 18 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರ ಜಿಲ್ಲಾಧಿಕಾರಿ ಅವರಿಗೆ ತುರ್ತು ಸೂಚನೆ ನೀಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಸಂಪರ್ಕಿಸಿ ಸಂಕಷ್ಟದಲ್ಲಿರುವ ಮೀನುಗಾರರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಹಾಗೆಯೇ ಅಗತ್ಯ ಬಿದ್ದರೆ ಹೆಲಿಕಾಪ್ಟರ್ ಸೇವೆಯನ್ನು ಬಳಸಿಕೊಳ್ಳುವಂತೆ ಅವರು ಸೂಚಿಸಿದ್ದರು. […]
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಬಿರುಸಿನ ಮಳೆ
ಮಂಗಳೂರು: ವಾಯುಭಾರ ಕುಸಿತದಿಂದ ಹಾಗೂ ಕ್ಯಾರ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ಬಿಡುವು ಪಡೆದಿದ್ದ ಮಳೆ ಶನಿವಾರ ಬೆಳಗ್ಗಿನಿಂತ ನಿರಂತರ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೊರಭಾಗವಾದ ಮೂಡಬಿದಿರೆ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಜಿಲ್ಲೆಯಲ್ಲಿ ರೆಡ್ ಆಲರ್ಟ್ ಮುಂದುವರಿದಿದ್ದು, ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ […]
ಸಂಸದೆ ಶೋಭಾ ಕರಂದ್ಲಾಜೆ ಸಾಧನೆ ಶೂನ್ಯ: ಪ್ರಮೋದ್ ಮಧ್ವರಾಜ್
ಉಡುಪಿ: ಉಪ್ಪೂರು ಪ್ರೌಢಶಾಲೆ ಬಳಿ ಸ್ಥಾಪಿಸಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರ ಸಾಧನೆ ಶೂನ್ಯ. ಅವರು ಏನು ಕೆಲಸ ಮಾಡದೆ. ಯಾರೋ ಮಾಡಿದ ಕೆಲಸವನ್ನು ತಾನು ಮಾಡಿದ್ದೇನೆಂದು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ದೂರಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಟಿಟಿಸಿ ಕಾಲೇಜು ಶೋಭಾ ಅವರ ಪ್ರಯತ್ನದಿಂದ ನಿರ್ಮಿಸಲಾಗಿದೆ ಎಂಬ ಶಾಸಕ ರಘುಪತಿ ಭಟ್ರ ಟ್ವೀಟ್ ಸತ್ಯಕ್ಕೆ ದೂರವಾಗಿದ್ದು, ಇದಕ್ಕಿಂತ ದೊಡ್ಡ ಸುಳ್ಳು ಇನ್ನೊಂದಿಲ್ಲ ಎಂಬುವುದನ್ನು ಜಿಟಿಟಿಸಿ […]
ಭ್ರೂಣಲಿಂಗ ಪರೀಕ್ಷೆ ಪತ್ತೆ ಹಚ್ಚಲು ಸ್ಟ್ರಿಂಗ್ ಆಪರೇಷನ್ ನಡೆಸಿ- ಜಿಲ್ಲಾಧಿಕಾರಿ
ಉಡುಪಿ : ಜಿಲ್ಲೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಭ್ರೂಣಲಿಂಗ ಪರೀಕ್ಷೆ ಮಾಡುತ್ತಿರುವವನ್ನು ಪತ್ತೆ ಹಚ್ಚಲು ಸ್ಟ್ರಿಂಗ್ ಆಪರೇಷನ್ ನಡೆಸುವಂತೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.
ಕುಂದಾಪುರ: ಹೈವೇ ಪ್ಯಾಟ್ರೋಲ್ ತಪಾಸಣೆ ವೇಳೆ ಸವಾರ ಬಿದ್ದು ಗಾಯ:ಪೊಲೀಸರ ವಿರುದ್ದ ತಿರುಗಿಬಿದ್ದ ಸಾರ್ವಜನಿಕರು
ಕುಂದಾಪುರ: ಹೈವೇ ಪ್ಯಾಟ್ರೋಲ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರ ಬಿದ್ದು ಗಾಯಗೊಂಡ ಘಟನೆ ತೆಕ್ಕಟ್ಟೆ ರಾಘವೇಂದ್ರಸ್ವಾಮಿ ಮಠದ ಸ್ವಾಗತ ಗೋಪುರ ಬಳಿ ನಡೆದಿದೆ. ಘಟನೆಗೆ ಪೊಲೀಸರ ಅಜಾಗರೂಕತೆ ವರ್ತನೆಯೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಬೈಕ್ ಸವಾರ ಗೋಪಾಡಿ ನಿವಾಸಿ ಉಲ್ಲಾಸ್(27) ಗಾಯಾಗೊಂಡಿದ್ದು ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈವೇ ಪ್ಯಾಟ್ರೋಲ್‌ನಲ್ಲಿ ಸಿಬ್ಬಂದಿಗಳೊಡನೆ ಎಎಸ್‌ಐ ಪ್ರಭಾಕರ್ ವಾಹನ ತಪಾಸಣೆ ಮಾಡುವಾಗ ಬೈಕ್ […]