ಬುಧವಾರ ನಿಮ್ಮ ರಾಶಿ ಭವಿಷ್ಯದಲ್ಲಿ ವಿಶೇಷವೇನಿದೆ ಗೊತ್ತಾ? ಪಂಡಿತ್ ವಾದಿರಾಜ್ ಭಟ್ ಹೇಳ್ತಾರೆ
ಮೇಷ: ಈ ದಿನ ಮದ್ಯಪಾನ ಮಾಡುವ ವ್ಯಸನಿಗಳಿಗೆ ಗಂಭೀರ ಸ್ವರೂಪದಲ್ಲಿ ಆರೋಗ್ಯ ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ನಿಮ್ಮ ರಾಶಿಯಲ್ಲಿ ಕೇತು ಸಹ ಕೆಟ್ಟ ಸ್ಥಾನ ದಲ್ಲಿ ಇರುವುದರಿಂದ ನಿಮಗೆ ದಿಕ್ಕೇ ತೋಚುವುದಿಲ್ಲ. ನಿಮ್ಮ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುವುದು ಕಲಿಯಿರಿ. ದುಷ್ಟ ಜನರ ಸಹವಾಸ ಬಿಡುವುದು ಸೂಕ್ತ. ಜೀವನದಲ್ಲಿ ಯಾವುದೇ ರೀತಿಯ ಗುಪ್ತ ಮತ್ತು ಆರೋಗ್ಯ ಸಮಸ್ಯೆಗಳು ಏನೇ ಇದ್ದರು ಕೂಡ ಈ ಕೂಡಲೇ ಗುರುಗಳ ಸಂಖ್ಯೆಗೆ ಕರೆ ಮಾಡಿರಿ. 9743666601 ವೃಷಭ: ಈ ದಿನ […]
ಶಿರೂರು ಹೆದ್ದಾರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಶಿರೂರು ಟೋಲ್ ಚಲೋ ಅಭಿಯಾನಕ್ಕೆ ಭಾರೀ ಸ್ಪಂದನೆ
ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಶಿರೂರು ಹೆದ್ದಾರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಶಿರೂರು ಟೋಲ್ ಚಲೋ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಿರೂರು ಟೋಲ್ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಬೇಕು, ಸರ್ವಿಸ್ ರಸ್ತೆ ಪೂರ್ಣಗೊಳಿಸಬೇಕು ಎಂಬ ಪ್ರಮುಖ ಆಗ್ರಹಗಳೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬುಧವಾದ ಬೆಳಿಗ್ಗೆ ಶಿರೂರು ಟೋಲ್ ಕೇಂದ್ರದ ಬಳಿ ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸ್ಥಳೀಯರು ಶಾಂತಿಯುತ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ […]
ಮಕ್ಕಳಿಗೆ ಎಳೆವೆಯಲ್ಲೆ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಬೇಕು: ಶೋಭಾ ಕರಂದ್ಲಾಜೆ
ಉಡುಪಿ: ಮಕ್ಕಳಿಗೆ ಎಳವೆಯಲ್ಲಿಯೇ ಕ್ರೀಡೆಯ ಬಗ್ಗೆ ಸರಿಯಾದ ಪ್ರೋತ್ಸಾಹ ಹಾಗೂ ತರಬೇತಿ ನೀಡಿದರೆ, ಮುಂದೆ ಅವರು ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಎರಡು ದಿನಗಳ ಪ್ರಾಥಮಿಕ ಹಾಗೂ -ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ರಾಜ್ಯಮಟ್ಟದ ಬ್ಯಾಡ್ಮಿಂಟನ್ […]
ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಶೋಭಾ
ಉಡುಪಿ: ಅಧಿಕಾರ ಕಳೆದುಕೊಂಡ ಅನಂತರ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ಗೆ ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಅವರಿಗೆ ಯಾವುದೇ ಹಿಡಿತ ಇಲ್ಲ ಎಂದು ಲೇವಡಿ ಮಾಡಿದರು. ಪ್ರಸ್ತುತ ಕಾಂಗ್ರೆಸ್ನಲ್ಲಿ ಅನೇಕ ಬಣಗಳು ಹುಟ್ಟಿಕೊಂಡಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್ ವಲಸಿಗರ ಬಣ, ಪರಮೇಶ್ವರ್ ಬಣ ಹಾಗೂ ಡಿ.ಕೆ. ಶಿವಕುಮಾರ್ ಬಣ ಹೀಗೆ ಹಲವು […]
ನ.1: ದಿ ವರ್ಲ್ಡ್ ಸಂಡೇ ಸ್ಕೂಲ್ ಡೇ ಮಕ್ಕಳ ಹಬ್ಬ
ಉಡುಪಿ: ಸಿಎಸ್ಐ ಉಡುಪಿ ವಲಯ ಹಾಗೂ ಬೈಲೂರು ಸಿಎಸ್ಐ ಕ್ರಿಸ್ತ ಜ್ಯೋತಿ ಚರ್ಚ್ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಬ್ಬ ‘ದಿ ವರ್ಲ್ಡ್ ಸಂಡೇ ಸ್ಕೂಲ್ ಡೇ’ ಬೈಲೂರಿನ ಸಿಎಸ್ಐ ಕ್ರಿಸ್ತ ಜ್ಯೋತಿ ಚರ್ಚ್ನಲ್ಲಿ ನವೆಂಬರ್ 1ರಂದು ನಡೆಯಲಿದೆ ಎಂದು ಸಿಎಸ್ಐ ಉಡುಪಿ ವಲಯ ಅಧ್ಯಕ್ಷ ಇಯಾನ್ ಡಿ. ಸೋನ್ಸ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9.15ಕ್ಕೆ ಸಿಎಸ್ಐ ಕರ್ನಾಟಕದ ಬಿಷಪ್ ಮೋಹನ್ ಮನೋರಾಜ್ ಸಂದೇಶ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಇದಕ್ಕೂ ಮೊದಲು ಮುದ್ದಣ […]