ಪೊಲೀಸ್ ಠಾಣೆಗಳನ್ನು ಬಲಪಡಿಸುವ ಕಾರ್ಯಕ್ಕೆ ಸರ್ಕಾರ ಸಿದ್ಧ: ಬೊಮ್ಮಾಯಿ

ಕುಂದಾಪುರ: ಪೊಲೀಸರು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಪೊಲೀಸರ ಸ್ಥಿತಿಗತಿಗಳನ್ನು ಸುಧಾರಣೆ ಮಾಡಿ, ಅವರ ಸೇವೆಗಳನ್ನು ಉತ್ತಮಗೊಳಿಸುವ ಮತ್ತು ಪೊಲೀಸರು ಕರ್ತವ್ಯ ನಿರ್ವಹಿಸುವ ಪೊಲೀಸ್ ಠಾಣೆಗಳನ್ನು ಬಲಪಡಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದ್ದು, ಪೊಲೀಸ್ ವ್ಯವಸ್ಥೆ ಬದಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ಬೈಂದೂರು ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಅಪರಾಧವನ್ನು ಕ್ಲಪ್ತ ಸಮಯದಲ್ಲಿ ಭೇದಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ […]

ದ.ಕ. ಜಿಲ್ಲೆ: ಸಂಭ್ರಮದ ಕನ್ನಡ ರಾಜ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ.‌ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡುವುದಾಗಿ ಅವರು ತಿಳಿಸಿದರು. ದಕ್ಷಿಣ […]

ಮಣಿಪಾಲದಲ್ಲಿ ಮಾದಕದ್ರವ್ಯ ವ್ಯಸನ ತೊಡೆದುಹಾಕುವೆ : ಗೃಹಸಚಿವ ಬೊಮ್ಮಾಯಿ

ಕುಂದಾಪುರ:ಉಡುಪಿ, ಮಣಿಪಾಲ ಹಾಗೂ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿರುವ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಈಗಾಗಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾದಕ ವ್ಯಸನವನ್ನು ಸಂಪೂರ್ಣವಾಗಿ ತೊಡೆದುಹಾಕಬೇಕು ಮತ್ತು ಮಾದಕ ವ್ಯಸನ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಇದಕ್ಕಾಗಿಯೇ ವಿಶೇಷ ಪೊಲೀಸರ ತಂಡವನ್ನು ರಚನೆ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಮಾಫಿಯಾವನ್ನು ನಿಯಂತ್ರಣ ಮಾಡುತ್ತೇವೆ  ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಗೃಹಸಚಿವ […]

ಉಡುಪಿ XPRESS- “ಅಮ್ಮ with ಕಂದಮ್ಮ”ಫೋಟೋ ಸ್ಪರ್ಧೆ: ನಿಮ್ಮ ಚೆಂದದ ಫೋಟೋಗೆ ನಾವ್ ಕೊಡ್ತೇವೆ ಬಹುಮಾನ!

ಪುಟ್ಟ ಪುಟ್ಟಿಯರು ಸಂಭ್ರಮಪಟ್ಟು, ಕೇಕೆ ಹಾಕಿ ನಗುವ ಮಕ್ಕಳ ದಿನಾಚರಣೆಗೆ ಇನ್ನೇನು ಕೆಲವೇ ದಿನ ಬಾಕಿ. ಆಗಾಗ ಹೊಸ ಹೊಸ contest ಗಳನ್ನು ಆಯೋಜಿಸುವ ಕರಾವಳಿಯ ವೇಗದ ಜಾಲತಾಣ ಉಡುಪಿ XPRESS, ಮಕ್ಕಳ ದಿನಾಚರಣೆ ಪ್ರಯುಕ್ತ “ಅಮ್ಮ with ಕಂದಮ್ಮ” ಅನ್ನೋ ಚಂದದ ಫೋಟೋ ಸ್ಪರ್ಧೆ ಆಯೋಜಿಸಿದೆ. ಏನ್ ಸ್ಪರ್ಧೆ? ತನ್ನ ಕಂದನ ಜೊತೆ ಅಮ್ಮನೂ ಫೋಟೋದಲ್ಲಿ ಮಿಂಚುವ ಸ್ಪರ್ಧೆಯಿದು. ಅಮ್ಮಂದಿರು ತಮ್ಮ ಕಂದಮ್ಮ ನ ಜೊತೆ ಮುದ್ದಾದ ಫೋಟೋ ಸೆರೆಹಿಡಿದು ಸ್ಪರ್ಧೆಗೆ ಕಳಿಸಬೇಕು. ಆಯ್ಕೆಯಾದ ಮೋಹಕ‌ […]

ಕುಂದಾಪುರದಲ್ಲಿ ಸಂಭ್ರಮದಿ ಮೊಳಗಿತು ಕನ್ನಡ ರಾಜ್ಯೋತ್ಸವ ಡಿಂಡಿಮ

ಕುಂದಾಪುರ: ತಾಲೂಕು ಆಡಳಿತದ ವತಿಯಿಂದ ಇಲ್ಲಿನ ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಭ್ರಮ ಸಡಗರದಿಂದ ೬೪ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಆಶ್ರಯದಲ್ಲಿ ಗಾಂಧಿ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ರಾಜು ಕೆ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಹಾಯಕ ಆಯುಕ್ತ ರಾಜು ಕೆ ಅವರು ಸ್ವಾತಂತ್ರ್ಯಪೂರ್ವದಿಂದಲೇ ಭಾಷಾವಾರು ಪ್ರಾಂತ್ಯ ರಚನೆಗೆ ಆಗ್ರಹಿಸಿ ಹೋರಾಟ ನಡೆಯುಯತ್ತಲೇ ಇತ್ತು. […]