ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯ ಫೋಟೋ ಅಪ್ಲೋಡ್: ಯುವಕನಿಗೆ 1 ವರ್ಷ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧ
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಿವಾಸಿ ಜಬಿನ್ ಚಾರ್ಲ್ಸ್ ಫೇಸ್ಬುಕ್ನಲ್ಲಿ ಪ್ರಧಾನಿ ಮೋದಿ ಅವರ ವ್ಯಂಗ್ಯ ಫೋಟೋವನ್ನು ಎಡಿಟ್ ಮಾಡಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದನು. ಇದಕ್ಕೆ ಯುವಕನಿಗೆ ಮದ್ರಾಸ್ ಹೈಕೋರ್ಟ್ 1 ವರ್ಷ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧ ಹೇರಿದೆ. ಫೇಸ್ಬುಕ್ನಲ್ಲಿ ಫೋಟೋ ಹಂಚಿಕೊಂಡಿದ್ದನು ಬಿಜೆಪಿ ಕಾರ್ಯಕರ್ತ ನಂಜಿಲ್ ರಾಜ ಅವರು ಗಮನಿಸಿ ಚಾರ್ಲ್ಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಚಾರ್ಲ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.