ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ; ಅಲ್ಲಲ್ಲಿ ಬಿಗಿಭದ್ರತೆ
ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ನಾಳೆ (ನ.9) ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಪು ಪ್ರಕಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊದಲಿಗೆ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು. ಅನಂತರ ರಾಜ್ಯದಾದ್ಯಂತ ರಜೆ ಘೋಷಣೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಟ್ವಿಟರ್ ಹಾಗೂ ಫೇಸ್ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಗು ಭದ್ರತೆ ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ ಸೇರಿ ಇತರ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. […]
ಅಯೋಧ್ಯೆ ತೀರ್ಪು ಹಿನ್ನೆಲೆ ಶಾಲಾ ಕಾಲೇಜುಗಳಿಗೆ (ಪ.ಪೂ)ರಜೆ
ಮಂಗಳೂರು/ಉಡುಪಿ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ನಾಳೆ (ನ.9)ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ (ನ.9) ಬೆಳಗ್ಗೆ ಅಯೋಧ್ಯೆ ತೀರ್ಪು ಪ್ರಕಟ
ನವದೆಹಲಿ: ಹಲವು ವರ್ಷಗಳಿಂದ ಇಡೀ ಭಾರತ ದೇಶವೇ ಕಾಯುತ್ತಿರುವ ಅಯೋಧ್ಯೆಯ ತೀರ್ಪು ಶನಿವಾರ (ನ.9)ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನ.17 ರಂದು ನಿವೃತ್ತಿ ಆಗಲಿರುವ ಹಿನ್ನೆಲೆಯಲ್ಲಿ ತೀರ್ಪು ಶೀಘ್ರ ಪ್ರಕಟವಾಗುವ ನಿರೀಕ್ಷೆ ಇತ್ತು. ಹೀಗಾಗಿ ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅ.16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು […]
ಬಂಟ್ವಾಳ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
ಬಂಟ್ವಾಳ: ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮಾಣಿ ಮತ್ತು ಇತರ 51 ಜನವಸತಿಗಳಿಗೆ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರು, ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಜನಪ್ರತಿನಿಧಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ನ.9: ವಿಶೇಷ ಆರ್ಥಿಕ ವಲಯದ ವತಿಯಿಂದ ಗ್ರಂಥಾಲಯಗಳಿಗೆ ಪುಸ್ತಕಗಳ ಹಸ್ತಾಂತರ
ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯದಿಂದ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯ ಹಾಗೂ ಮಂಗಳೂರಿನ ಪತ್ರಿಕಾಭವನದಲ್ಲಿ ಆರಂಭಿಸಲಾಗುವ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಕಾರ್ಯಕ್ರಮ ನ.9ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರು ವಿಶೇಷ ಆರ್ಥಿಕ ವಲಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೂರ್ಯನಾರಾಯಣ ಪುಸ್ತಕಗಳನ್ನು ಹಸ್ತಾಂತರ ಮಾಡಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಂಗಳೂರು ವಿಶೇಷ ಆರ್ಥಿಕ ವಲಯದ ಸಾರ್ವಜನಿಕ […]