ಕೆಡಿಪಿ ಸಭೆಗೆ ಎಲ್ಲಾ ಇಲಾಖಾಧಿಕಾರಿಗಳು ಬರಲೇಬೇಕು: ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಎಚ್ಚರಿಕೆ
ಕುಂದಾಪುರ: ಕೆಡಿಪಿ ಸಭೆ ನಡೆಸುವುದು ಕಾಟಾಚಾರಕ್ಕೆ ಅಲ್ಲ. ಎಲ್ಲಾ ಅಧಿಕಾರಿಗಳು ಹಾಜರಾಗದಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಬಡವರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಸಡ್ಡೆ ತೋರಿದರೆ ನಾನು ಸುಮ್ಮನಿರೋದಿಲ್ಲ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಗೈರು ಹಾಜರಾತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ವನ್ಯಜೀವಿಗಳ ರಕ್ಷಣೆ ಬಗ್ಗೆ ವೈಲ್ಡ್ಲೈಫ್ ಅಧಿಕಾರಿಗಳು ನಿಗಾ ಇಡಬೇಕು. […]
ಮಂಗಳೂರು: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತಯಾಚನೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡ್ ನಂಬರ್ 37ರಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ದೇವಾಡಿಗ ಅವರ ಪರವಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮನೆ ಮನೆ ತೆರಳಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಯೋಗೀಶ್ ಭಟ್, ಸುದರ್ಶನ್ ಮೂಡಬಿದ್ರೆ, ಅಭ್ಯರ್ಥಿ ಕಿರಣ್ ದೇವಾಡಿಗ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನ.12: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕುಂದಾಪುರ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ನ.೧೨ರ ಸಂಜೆ ೫ಗಂಟೆಗೆ ಇಲ್ಲಿನ ಪದವಿಪೂರ್ವ ಕಾಲೇಜು ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯಲಿದೆ. ಖ್ಯಾತ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಕವಲು ದಾರಿಯಲ್ಲಿ ಪತ್ರಕರ್ತರು ಎಂಬ ವಿಷಯದ ಬಗ್ಗೆ ವಿಶೇಷ ದಿಕ್ಸೂಚಿ ಭಾಷಣ ಮಾಡಲಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್, ಕುಂದಾಫುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ […]