ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು
ಬಂಟ್ವಾಳ: ಮಾಜಿ ತಾಲೂಕು ಪಂಚಾಯತ್ ಸದಸ್ಯರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಕೆಳಗಿನ ತುಂಬೆ ನಿವಾಸಿ ಮಾಜಿ ತಾಲೂಕು ಪಂಚಾಯತ್ ಸದಸ್ಯ, ಬಿಜೆಪಿ ಸಕ್ರಿಯ ಕಾರ್ಯಕರ್ತ ಸೋಮಪ್ಪ ಕೋಟ್ಯಾನ್ ಅವರ ಮನೆಯಲ್ಲಿ ನಡೆದಿದ್ದು, ಹಾಡಹಗಲು ಮನೆಯಲ್ಲಿ ಯಾರು ಇಲ್ಲದ ವೇಳೆ ಹಿಂಬದಿಯ ಬಾಗಿಲು ಮುರಿದು ಮನೆಯೊಳಗೆ ಪ್ರವೇಶ ಮಾಡಿ ಕಳವು ನಡೆಸಿದ್ದಾರೆ. ಮನೆಯಲ್ಲಿದ್ದ 12,92,600 ಲಕ್ಷ ರೂಪಾಯಿ ಬೆಲೆಬಾಳುವ ಬಂಗಾರ, 15 ಸಾವಿರ ನಗದು […]
ಒತ್ತಡಗಳ ಮಧ್ಯೆ ಪತ್ರಿಕೋದ್ಯಮ ಮೌಲ್ಯ ಕಾಪಾಡುವುದೇ ಸವಾಲು: ಮೋಹನ್ ಆಳ್ವ
ಮಂಗಳೂರು: ಆಧುನಿಕ ಜೀವನದಲ್ಲಿ ವೃತ್ತಿ ಬದುಕಿನ ಒತ್ತಡಗಳ ಮಧ್ಯೆ ಪತ್ರಿಕಾರಂಗದ ವೌಲ್ಯಗಳನ್ನು ಕಾಪಾಡುವುದೇ ಮಾಧ್ಯಮ, ಪ್ರತಕರ್ತನ ನಿಜವಾದ ಸವಾಲು ಎಂದು ಆಳ್ವಾಸ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ದ.ಕ. ಜಿಲ್ಲಾ ಕಾರ್ಯನಿತರ ಪತ್ರಕತ್ರರ ಸಂಘದ ವತಿಯಿಂದ ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನೂರು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಬೆಳವಣಿಗೆ ವಿಸ್ತಾರವಾಗಿದೆ. ಪ್ರಸಕ್ತ ಕಾಲದಲ್ಲಿ ಹೂಡಿಕೆ ಸ್ಪರ್ಧೆಯ ನಡುವೆ ಮಾಧ್ಯಮಗಳ ಮೇಲೆ […]
ಉಡುಪಿ: ಬಿಜೆಪಿ ನಗರ-ಗ್ರಾಮಾಂತರ ಅಧ್ಯಕ್ಷರ ಆಯ್ಕೆ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ಭಾಗದ ಬಿಜೆಪಿ ನೂತನ ಅಧ್ಯಕ್ಷರ ಆಯ್ಕೆ ನಡೆದಿದ್ದು, ನಗರ ಬಿಜೆಪಿ ಅಧ್ಯಕ್ಷರಾಗಿ ಮಹೇಶ್ ಠಾಕೂರ್ ಹಾಗೂ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾಗಿ ವೀಣಾ ನಾಯ್ಕ ಅವರನ್ನು ಮಾಡಲಾಗಿದೆ.
ಸಹಕಾರಿ ಸಂಸ್ಥೆಯಲ್ಲಿ ಠೇವಣಿಗೆ ರಾಜ್ಯ-ಕೇಂದ್ರ ಸರಕಾರ ಹಿಂದೇಟು: ಡಾ.ಎಂ.ಎನ್
ಉಡುಪಿ: ದ.ಕ. ಜಿಲ್ಲೆಯಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಶೇ.100ರಷ್ಟು ಸಾಲ ಮರುಪಾವತಿ ಆಗುತ್ತಿರುವುದು ಹೆಮ್ಮೆಯ ವಿಚಾರ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಮ್ಮಲ್ಲಿ ಠೇವಣೆ ಇಡಲು ಹಿಂದೇಟು ಹಾಕುತ್ತದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಬೇಸರ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ರಾಜ್ಯದ ಎಲ್ಲಾ ಸಹಕಾರ ಶೃಂಗ ಸಂಸ್ಥೆಗಳು, ದ.ಕ.ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, […]
ಉಡುಪಿ: ಸಹಕಾರ ಸಪ್ತಾಹ ಅಂಗವಾಗಿ ಬೃಹತ್ ಮೆರವಣಿಗೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಚಾಲನೆ
ಉಡುಪಿ: ರಾಜ್ಯಮಟ್ಟದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಹಮ್ಮಿಕೊಂಡ ಬೃಹತ್ ಮೆರವಣಿಗೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೋಮವಾರ ಜೋಡುಕಟ್ಟೆಯಲ್ಲಿ ಚಾಲನೆ ನೀಡಿದರು. ಸಹಕಾರಿ ಸಂಸ್ಥೆ ಸಿಬ್ಬಂದಿ, ನವೋದಯ ಸ್ವ-ಸಹಾಯ ಸಂಘದ ಸದಸ್ಯರು ಸಹಿತ 3 ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಸಹಕಾರಿ ಸಂಘ, ಮೀನುಗಾರರ ಸಹಕಾರಿ ಸಂಘ, ದ.ಕ. ಹಾಲು ಉತ್ಪಾದಕರ ಸಹಕಾರಿ, ಉಡುಪಿ ಶ್ರೀಕೃಷ್ಣನ ದೇವರ ಮೂರ್ತಿ ಸಹಿತ ವಿವಿಧ ಟ್ಯಾಬ್ಲೋಗಳು […]