ಆರೋಗ್ಯ ಸುದೃಡವಾಗಿದ್ದರೆ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ: ಪ್ರಶಾಂತ್ ಶೆಟ್ಟಿ
ಉಡುಪಿ: ಆರೋಗ್ಯ ಸುದೃಢವಾಗಿದ್ದಾಗ ಸುಸ್ಥಿರ ಕುಟುಂಬ, ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎ.ಜೆ. ಆಸ್ಪತ್ರೆ ಸಾಮಾಜಿಕ ಕಳಕಳಿಯೊಂದಿಗೆ ವಿಶೇಷ ಸೇವೆ ನೀಡುತ್ತಾ ಬರುತ್ತಿದೆ ಎಂದು ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹೇಳಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸೇರಿದಂತೆ ಎಲ್ಲರೂ ತಮ್ಮ ಒತ್ತಡ ಕೆಲಸದಿಂದ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಮನೆಯಲ್ಲಿ ಯಾವುದೇ ವ್ಯಕ್ತಿಯ ಆರೋಗ್ಯ ಕೆಟ್ಟಾಗ ಇಡೀ […]
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತ ಸಮಾವೇಶ: ದೇಶದಲ್ಲಿ ಗೋಹತ್ಯೆ ನಿಷೇಧ ಸೇರಿ ಮೂರು ಪ್ರಮುಖ ನಿರ್ಣಯ
ಉಡುಪಿ: ಗೋ ಹತ್ಯೆ ನಿಷೇಧ, ಏಕರೂಪ ನಾಗರಿಕ ಸಂಹಿತೆ ಜಾರಿ ಹಾಗೂ ಜನಾಸಂಖ್ಯಾ ಸ್ಫೋಟ ತಡೆಗೆ ಕಾನೂನು ಈ ಮೂರು ಪ್ರಮುಖ ನಿರ್ಣಯಗಳನ್ನು ಗುರುವಾರ ಉಡುಪಿ ಶ್ರೀಕಷ್ಣಮಠದ ರಾಜಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಕೈಗೊಳ್ಳಲಾಯಿತು. ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯ ನೇತೃತ್ವದಲ್ಲಿ ಕೈಗೊಳ್ಳಲಾದ ನಿರ್ಣಯಗಳಿಗೆ ಸಮಾವೇಶದಲ್ಲಿ ಭಾಗವಹಿಸಿದ್ದ ವಿವಿಧ ಮಠಗಳ ಸಾಧು ಸಂತರು ಒಕ್ಕೊರಲಿನಿಂದ ಒಪ್ಪಿಗೆ ಸೂಚಿಸಿದರು. ಈ ನಿರ್ಣಯಗಳನ್ನು ಆದಷ್ಟು ಬೇಗ ಜಾರಿಗೆ ತರಬೇಕೆಂದು ಆಗ್ರಹಪಡಿಸಿದರು.
ನ. 21ರಿಂದ ರಂಗಭೂಮಿ ಉಡುಪಿ ಆಯೋಜಿಸುವ 40ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆ
ಉಡುಪಿ: ರಂಗಭೂಮಿ ಉಡುಪಿಯ 40ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನ. 21ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 6ಗಂಟೆಗೆ ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಎಂ.ಜಿ. ವಿಜಯ ಅವರು ನಾಟಕ ಸ್ಪರ್ಧೆಗೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಕುಮಾರ ಬಿಕ್ಕೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು […]
ಡಿಸೆಂಬರ್ ನಲ್ಲಿ ‘ಶಕಲಕ ಬೂಂ ಬೂಂ’ ತುಳು-ಕನ್ನಡ ಚಿತ್ರದ ಚಿತ್ರೀಕರಣ
ಉಡುಪಿ: ಕೋಸ್ಟಲ್‌ವುಡ್ ಸಿನಿಮಾಸ್ ಪ್ರಸ್ತುತಪಡಿಸುವ ಹಾರರ್ ಕಾಮಿಡಿ ಮಿಶ್ರಣವುಳ್ಳ ‘ಶಕಲಕ ಬೂಂ ಬೂಂ’ ತುಳು ಮತ್ತು -ಕನ್ನಡ ಚಿತ್ರದ ಚಿತ್ರೀಕರಣ ಡಿಸೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಎಂದು ನಿರ್ದೇಶಕ ಶ್ರೀಶ ಎಳ್ಳಾರೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಚಿತ್ರದ ಕಥೆ ಐದು ಮಂದಿಯ ನಡುವೆ ಸಾಗಲಿದ್ದು, ಇದಕ್ಕಾಗಿ ಪರ್ಕಳ ಕಬ್ಯಾಡಿಯ ಮನೆಯೊಂದರಲ್ಲಿ ಸೆಟ್ ಹಾಕಲಾಗುವುದು. ಉಳಿದಂತೆ ಉಡುಪಿ, ಮಣಿಪಾಲ, ಕಾರ್ಕಳ, ಮಂಗಳೂರು, ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದರು. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅರವಿಂದ ಬೋಳಾರ್, […]
ಹಾಡು ನಿಲ್ಲಿಸಿದ ಕುಂದಾಪುರದ ಟ್ರೋಲ್ ಕಿಂಗ್ ವೈಕುಂಠ : ಜನಮನಗೆದ್ದ ಬಿಂದಾಸ್ ಹಾಡುಗಾರ ಇನ್ನಿಲ್ಲ
ಕುಂದಾಪುರ: ತನ್ನ ವಿಭಿನ್ನ ಶೈಲಿಯ ಹಾಡುಗಾರಿಕೆ ಮೂಲಕ ಕುಂದಾಪುರದ ಜನರನ್ನು ರಂಜಿಸುತ್ತಿದ್ದ ರಾಕ್‌ಸ್ಟಾರ್ ಖ್ಯಾತಿಯ ಕುಂದಾಪುರದ ವೈಕುಂಠ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಹಂಗಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ನೇರಂಬಳ್ಳಿ ನಿವಾಸಿ ವೈಕುಂಠ ಕಳೆದ ನಾಲ್ಕು ದಿನಗಳಿಂದ ಕುಂದಾಪುರದ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿರುವ ಪಶು ಆಸ್ಪತ್ರೆಯ ಆವರಣದಲ್ಲಿ ತೀವ್ರ ಅಸ್ವಸ್ಥಗೊಂಡು ಮಲಗಿದ್ದರು. ಸ್ಥಳೀಯರು ಅಸ್ವಸ್ಥಗೊಂಡಿರುವ ವೈಕುಂಠ ಅವರ ಫೋಟೋ ಕ್ಲಿಕ್ಕಿಸಿ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪ್ರಕಟಿಸಿದ್ದರು. ಕೂಡಲೇ ಸಾಮಾಜಿಕ ಕಾರ್ಯಕರ್ತ ಜೋಯ್ ಕುಂದಾಪುರ ವೈಕುಂಠ […]