ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ: ಹೊಸಾಡು ಗ್ರಾ.ಪಂ ನಿರ್ಲಕ್ಷ್ಯಕ್ಕೆ ಭತ್ತದ ಕೃಷಿ ಸರ್ವನಾಶ:

ಕುಂದಾಪುರ: ಇಲ್ಲಿನ ಮುಳ್ಳಿಕಟ್ಟೆ ಸಮೀಪದ ಹೊಸಾಡು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡುಬೈಲು ಕೃಷಿ ಗದ್ದೆಯಲ್ಲಿ ಕಟಾವು ಮಾಡಿ ಇಟ್ಟಿದ್ದ ಭತ್ತದ ಪೈರಿಗೆ ಏಕಾಏಕಿ ಉಪ್ಪು ನೀರು ನುಗ್ಗಿದ ಪರಿಣಾಮ ಸುಮಾರು ಐದು ಎಕರೆಯಷ್ಟು ಕೃಷಿ ನಾಶವಾಗಿದೆ. ಮಳೆಗಾಲದ ತೀವ್ರ ನೆರೆಯಲ್ಲೂ ರೈತರು ಕಷ್ಟಪಟ್ಟು ರಕ್ಷಿಸಿ, ಪೋಷಿಸಿಕೊಂಡು ಬಂದಿದ್ದ ಭತ್ತದ ಪೈರು ಇದೀಗ ಉಪ್ಪು ನೀರಿನ ಹಾವಳಿಗೆ ಬಲಿಯಾಗುವ ಮೂಲಕ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತಾಗಿದೆ. ಹುಣ್ಣೆಮೆ-ಅಮವಾಸ್ಯೆ ಸಮಯದಲ್ಲಿ ಉಬ್ಬರ-ಇಳಿತಕ್ಕೆ ಸ್ವಲ್ಪ ಮಟ್ಟಿಗೆ ಕೃಷಿ ಗದ್ದೆಗಳಿಗೆ […]

ಕಿಂಡಿ ಅಣೆಕಟ್ಟಿನ ಹೂಳು ತೆಗೆದು ನೀರಿನ ಸಮಸ್ಯೆಗೆ ಪರಿಹಾರ: ಶಾಸಕ ಸುಕುಮಾರ್ ಶೆಟ್ಟಿ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರುತ್ತಿದೆ. ಹೀಗಾಗಿ ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರತೀ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಅಲ್ಲಿರುವ ಹೂಳನ್ನು ಮೇಲೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಕಾರ್ಯಪ್ರವೃತ್ತರಾಗಬೇಕು ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಬಿಮ್ ಸುಕುಮಾರ್ ಶೆಟ್ಟಿ ಹೇಳಿದರು. ಅವರು ಬುಧವಾರ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ […]

ಡಿ. 1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಡಿಸೆಂಬರ್ 1 ರಿಂದ ದೇಶದಾದ್ಯಂತ  ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು,  ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗಳಲ್ಲಿ ಸಹ […]

ಕಾಪು ಹಾಗೂ ಶ್ರೀ ಆನಂದ ತೀರ್ಥ ವಿದ್ಯಾಲಯ ಪಾಜಕ ಕ್ಷೇತ್ರ: ಜಿಲ್ಲಾ ಮಟ್ಟದ ಕಬ್ ಬುಲ್ ಬುಲ್ ಉತ್ಸವ

  ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸ್ಥಳೀಯ ಸಂಸ್ಥೆ ಕಾಪು ಹಾಗೂ ಶ್ರೀ ಆನಂದ ತೀರ್ಥ ವಿದ್ಯಾಲಯ ಪಾಜಕ ಕ್ಷೇತ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಲಿನ ಕಬ್ ಬುಲ್ ಬುಲ್ ಉತ್ಸವವನ್ನು ನಡೆಸಲಾಯಿತು. ಎರಡು ದಿನಗಳ ಕಾಲ ನಡೆದ ಶಿಬಿರದಲ್ಲಿ ೫೦೦ ಕ್ಕಿಂತಲೂ ಹೆಚ್ಚಿನ ಕಬ್ಸ್ ಬುಲ್ ಬುಲ್ ಶಿಕ್ಷಕ-ಶಿಕ್ಷಕಿಯರು, ಸ್ವಯಂಸೇವಕರು, ಭಾಗವಹಿಸಿದ್ದು, ಧ್ವಜವಂದನೆ ಸರ್ವಧರ್ಮ ಪ್ರಾರ್ಥನೆ, ಭವ್ಯಶಿಬಿರಾಗ್ನಿ, ಕಲರವ, ಬೆದರುಗೊಂಬೆ ತಯಾರಿ, ಸಾಹಸಮಯ ಆಟಗಳು, […]

ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ತರವಾದದ್ದು: ಎಂ.ಎನ್‌. ರಾಜೇಂದ್ರ ಕುಮಾರ್

ಉಡುಪಿ: ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಸದೃಢ ಆರ್ಥಿಕ ಸಮಾಜ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಮಹಿಳೆಯರು ಇನ್ನಷ್ಟು ಪರಿಣಾಮಕಾರಿಯಾಗಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು. 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌, ಉಡುಪಿ ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳ ವಿವಿಧೋದ್ದೇಶ ಸಹಕಾರ ಸಂಘ, ಉಡುಪಿ ಮಹಿಳಾ ಗ್ರಾಹಕರ ವಿವಿಧೋದ್ದೇಶ ಸಹಕಾರ […]