ಪಿಎಸ್ ಐ ಅನಂತಪದ್ಮನಾಭ ಅಮಾನತು ಆದೇಶ ವಾಪಸ್: ಡಿಸಿಐಬಿ ಘಟಕಕ್ಕೆ ವರ್ಗಾವಣೆ
ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತೀಚೆಗೆ ಅಮಾನತುಗೊಂಡಿದ್ದ ಉಡುಪಿ ನಗರಠಾಣೆಯ ಪಿಎಸ್ ಐ ಅನಂತಪದ್ಮನಾಭ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ, ಉಡುಪಿಯ ಡಿಸಿಐಬಿ ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ. ಅನಂತಪದ್ಮನಾಭ ಅವರು ಅಜ್ಜರಕಾಡಿನ ಪಾರ್ಕ್ ನಲ್ಲಿ ಈಚೆಗೆ ನಡೆದ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದೆ ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪದಡಿ ಎಸ್ಪಿ ನಿಶಾ ಜೇಮ್ಸ್ ಅಮಾನತು ಮಾಡಿದ್ದರು. ಆ ಬಳಿಕ ಅಮಾನತು ಆದೇಶ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಸವಾಗಿತ್ತು. ಅಮಾನತು ಆದೇಶದ ಪರ ಹಾಗೂ ವಿರೋಧ […]
ನ. 24: ಯಕ್ಷೋತ್ಸಾಹಿ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ-ಪ್ರಶಸ್ತಿ ಪ್ರದಾನ
ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಉಡುಪಿ ಯಕ್ಷೋತ್ಸಾಹಿ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನ. 24ರಂದು ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಶ್ರೀನಿದಿ ಆಚಾರ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 7ಗಂಟೆಗೆ ಬಡಗುತಿಟ್ಟು ಶೈಲಿಯ ‘ವಿದ್ಯುನ್ಮತಿ ಪರಿಣಯ’ ಯಕ್ಷಗಾನ ಪ್ರಸಂಗ ಪ್ರದರ್ಶಗೊಳ್ಳಲಿದೆ. ಬಳಿಕ ಸಂಜೆ ೮.೪೫ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ, ಕಿರಿಯ ವಿದ್ಯಾರಾಜೇಶ್ವರ ಸ್ವಾಮೀಜಿ ಅನುಗ್ರಹ […]
ಕಾರ್ಕಳ: ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ
ಕಾರ್ಕಳ : ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಕಾರ್ಕಳ ಶಾಖಾ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2019 ರ ಅಂಗವಾಗಿ ಬುಧವಾರ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಟ್ಟದಿಂದ ಹಿಡಿದು ಕಾಲೇಜು ಮಟ್ಟದವರೆಗೂ ಭಾವ ಗೀತೆ ಸ್ಪರ್ದೆ, ಜಾನಪದ ಸ್ಪರ್ದೆ ಹಾಗೂ ಅಭಿನಯ ಗೀತೆ ಸ್ಪರ್ದೆ ಮತ್ತು ಇನ್ನಿತರ ಸ್ಪರ್ಧೆಗಳನ್ನು ನಡೆಸಲಾಯಿತು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಶುಭದ ರಾವ್, ಓದುವ ಹವ್ಯಾಸದಿಂದ ಜ್ಞಾನದ ಸಂಪತ್ತು ಹೆಚ್ಚುತ್ತಲೇ ಹೋಗುತ್ತದೆ. ಓದುವ ಸಂಸ್ಕøತಿಯಿಂದ ಜಗತ್ತಿನ ಹಲವಾರು ವಿಷಯಗಳನ್ನು ತಿಳಿದುಕೊಳ್ಳುವುದರ […]
ಕಾನೂನುಗಳ ಸಮರ್ಪಕ ಅನುಷ್ಠಾನದಿಂದ ಸಮಾಜಿಕ ಬದಲಾವಣೆ: ರಾಜಶೇಖರ್
ಉಡುಪಿ: ಭಾರತದಲ್ಲಿ ಸಂವಿಧಾನ ಸಾಮಾಜಿಕ ನ್ಯಾಯದ ಮೂಲವಾಗಿದೆ. ಆದ್ದರಿಂದ ಸಂವಿಧಾನಿಕ ಧ್ಯೇಯೋದ್ದೇಶಗಳು ಹಾಗೂ ಕಾನೂನುಗಳ ಸಮರ್ಪಕ ಅನುಷ್ಠಾನದಿಂದ ಸಾಮಾಜಿಕ ಬದಲಾವಣೆ ತರಬಹುದು ಎಂದು ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕ ರಾಜಶೇಖರ್ ಸೀತಾರಾಮನ್ ಮಲುಶ್ತೆ ಹೇಳಿದರು. ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿ ಸಬಲೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾನೂನು ವಿದ್ಯಾರ್ಥಿಗಳು ಕಾನೂನು ವಿಷಯಗಳ ಕುರಿತು ಆಳವಾದ ಅಧ್ಯಯನ ಮಾಡಬೇಕು. ಕಾನೂನು ಪ್ರಕರಣಗಳ ವಸ್ತುಸ್ಥಿತಿಗೆ ಅನುಗುಣವಾಗಿರುವ ಕಾನೂನು ಉಪಬಂಧಗಳನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ […]
ಜಿಲ್ಲೆಯ ಎಲ್ಲಾ ಬೀಚ್ಗಳಿಗೂ ಬ್ಲೂ ಫ್ಲಾಗ್ ಮಾನ್ಯತೆ ಪಡೆಯಲು ಪ್ರಯತ್ನ: ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಎಲ್ಲಾ ಬೀಚ್ಗಳಿಗೂ ಬ್ಲೂ ಫ್ಲಾಗ್ ಮಾನ್ಯತೆ ದೊರೆಯುವ ರೀತಿಯಲ್ಲಿ ಬೀಚ್ಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸೋದ್ಯಮವನ್ನು ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಬ್ಲೂ ಫ್ಲಾಗ್ ಪಡೆದಿರುವ ಬೀಚ್ಗಳಲ್ಲಿನ ಸೌಲಭ್ಯಗಳನ್ನು ಗುರುತಿಸಿ, ಇತರೆ ಬೀಚ್ಗಳಲ್ಲಿ ಸಹ ಆ ಸೌಲಭ್ಯಗಳನ್ನು ಅಳವಡಿಸಿ, […]