ಸೀತಾನದಿ-ಬ್ರಹ್ಮಾವರ ರಸ್ತೆ ಅಗಲೀಕರಣ ನೆಪದಲ್ಲಿ 1,000 ಮರಗಳು ಬಲಿ: ಸಾರ್ವಜನಿಕ ಅಭಿಪ್ರಾಯಕ್ಕೆ ಡಿ.30 ಕ್ಕೆ ಅಹವಾಲು ಸಭೆ
ಉಡುಪಿ: ಬ್ರಹ್ಮಾವರ ತಾಲೂಕು ಸೀತಾನದಿ-ಬ್ರಹ್ಮಾವರ ರಸ್ತೆ (ಬ್ರಹ್ಮಾವರದಿಂದ ಹೆಬ್ರಿ ಕಡೆಗೆ 7 ಕಿ.ಮೀ.) ವರೆಗೆ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಸಲುವಾಗಿ ರಸ್ತೆಯ ಇಕ್ಕೆಲಗಳಲ್ಲಿ ಕಾಮಗಾರಿಗೆ ಅಂದಾಜು 1,092 ಮರಗಳನ್ನು ಕಡಿಯಲು ಜಿಲ್ಲಾಡಳಿತ ಉದ್ದೇಶಿಸಿದೆ. ಸ್ಥಳದಲ್ಲಿರುವ ಮರಗಳು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣ 8(3) (ಗಿIII) ರಡಿ 50 ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದ್ದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಡಿ. 30 ರಂದು ಮಧ್ಯಾಹ್ನ 3 ಕ್ಕೆ ಉಡುಪಿಯ, ಉಡುಪಿ ವಲಯ ಅರಣ್ಯಾಧಿಕಾರಿ ಕಚೇರಿ […]
ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ- ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ: ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ರಾಜ್ಯದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಉಡುಪಿ ಜಿಲ್ಲೆಯ ಎ ವರ್ಗದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಕುರಿತಂತೆ ವಿವಿಧ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ, ಉತ್ತಮ ಆದಾಯವಿರುವ ರಾಜ್ಯದ […]
ಪಶುವೈದ್ಯೆ ಅತ್ಯಾಚಾರ: ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪಂಚಾಯತ್ ರಾಜ್ ಸಂಘಟನೆ ಆಗ್ರಹ
ಉಡುಪಿ: ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುಷ್ಕರ್ಮಿಗಳಿಗೆ ಶೀಘ್ರವೇ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಉಡುಪಿ ಜಿಲ್ಲಾ ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ರಾಷ್ಟ್ರಪತಿಗಳಿಗೆ ಪೋಸ್ಟ್ ಕಾರ್ಡ್ ಬರೆಯುವ ಮೂಲಕ ಆಗ್ರಹಪಡಿಸಲಾಯಿತು. ಉಡುಪಿ ಪ್ರಧಾನ ಅಂಚೆ ಕಚೇರಿ ಎದುರು ಗುರುವಾರ ಹಮ್ಮಿಕೊಂಡ ಪೋಸ್ಟ್ ಕಾರ್ಡ್ ಚಳುವಳಿಯಲ್ಲಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕರ್ತರು ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಘಟನೆಯ ವಿರುದ್ಧ ಖಂಡನೆ ವ್ಯಕ್ತಪಡಿಸಿದರು. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದುಷ್ಕರ್ಮಿಗಳ ತ್ವರಿತ ವಿಚಾರಣೆ ನಡೆಸಿ ಗಲ್ಲುಶಿಕ್ಷೆ […]
ಡಿ.6: ಬಾಬರಿ ಮಸೀದಿ ದ್ವಂಸ ದಿನ; ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಕಾಜ್ಞೆ ಜಾರಿ
ಮಂಗಳೂರು: ಡಿಸೆಂಬರ್ 6 ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಇದರಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಸಂಪೂರ್ಣ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ. ಪಿ.ಎಸ್ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ […]
ಕುಂದಾಪುರ ಫ್ಲೈಓವರ್: ಮತ್ತೆ ಕಾಮಗಾರಿ ಕೈಗೆತ್ತಿಕೊಂಡ ನವಯುಗ
ಕುಂದಾಪುರ: ಕಳೆದ ಹಲವು ತಿಂಗಳುಗಳಿಂದ ಕಾಮಗಾರಿ ನಡೆಸದೇ ನೆನಗುದಿಗೆ ಬಿದ್ದಿದ್ದ ಕುಂದಾಪುರ ಫ್ಲೈ ಓವರ್ ಕಾಮಗಾರಿಯನ್ನು ನವಯುಗ ಗುತ್ತಿಗೆ ಕಂಪೆನಿ ಮತ್ತೆ ಪ್ರಾರಂಭಿಸಿದೆ. ಇಲ್ಲಿನ ನಕ್ಷತ್ರ ಜ್ಯೂವೆಲ್ಲರ್‍ಸ್ ಎದುರಿನ ಫ್ಲೈಓವರ್ ಏಂಬ್ಯಾಕ್‌ಮೆಂಟ್ ಕಾಮಗಾರಿಯನ್ನು ಆರಂಭಿಸಿರುವ ನವಯುಗ ಕಂಪೆನಿ ಮಣ್ಣನ್ನು ಸಮತಟ್ಟುಗೊಳಿಸುವಲ್ಲಿ ಮುಂದಾಗಿದೆ. ಕುಂದಾಪುರ ಫ್ಲೈಓವರ್ ವಿಳಂಬ ಕಾಮಗಾರಿಯನ್ನು ವಿರೋಧಿಸಿ ಶೀಘ್ರವೇ ಕಾಮಗಾರಿ ಮುಗಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸೋಮವಾರ ಬೃಹತ್ ಪ್ರತಿಭಟನಾ ಧರಣಿ ನಡೆಸಿತ್ತು. ಆ ವೇಳೆಯಲ್ಲಿ ಸ್ಥಳಕ್ಕಾಗಮಿಸಿದ ನವಯುಗ ಅಧಿಕಾರಿಗಳು ಎರಡು ದಿನಗಳೊಳಗೆ ಕಾಮಗಾರಿ […]