ಶಾಸಕನಾಗಿದ್ದ ಅವಧಿಯೇ ನನ್ನ ಬದುಕಿನ ಖುಷಿಯ ಕ್ಷಣವಾಗಿತ್ತು: ಜಯಪ್ರಕಾಶ್ ಹೆಗ್ಡೆ

ಕುಂದಾಪುರ: ಪಕ್ಷೇತರ ಶಾಸಕನಾಗಿದ್ದ ವೇಳೆಯಲ್ಲಿ ವೀರೋಧಪಕ್ಷದ ಸ್ಥಾನದಲ್ಲಿ ನನ್ನನ್ನು ಮೊದಲ ಬೆಂಚಿನಲ್ಲಿ ಕೂರಿಸಿ ಎಲ್ಲಾ ವಿಷಯದಲ್ಲೂ ಮಾತನಾಡಲು ಅವಕಾಶ ನೀಡಿದ್ದರು. ಜಯಪ್ರಕಾಶ್ ಹೆಗ್ಡೆ ಹೆಸರು ಇಡೀ ರಾಜ್ಯಕ್ಕೆ ಪರಿಚಯವಾಗಿದ್ದು ಆ ದಿನಗಳಲ್ಲಿ. ೨ ಬಾರಿ ಪಕ್ಷೇತರ ಶಾಸಕನಾಗಿ ಸೇವೆ ಸಲ್ಲಿಸಿದ್ದ ದಿನಗಳೇ ರಾಜಕೀಯದಲ್ಲಿ ನನಗೆ ತುಂಬಾ ಖುಷಿ ಕೊಟ್ಟ ದಿನಗಳಾಗಿದ್ದವು ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಗುರುವಾರ ಬೆಳಗ್ಗೆ ಕುಂದಾಪುರದ ಶರೋನ್ ಹೋಟೇಲ್‌ನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಮಾಧ್ಯಮ […]

ದಲಿತೆ ಎಂದು ಪೋಲಿಸ್‌ ಪೇದೆಯನ್ನೇ ದೇವಸ್ಥಾನದಿಂದ ಹೊರ ಹಾಕಿದ ಅರ್ಚಕರು..

ಮಂಗಳೂರು: ದಲಿತ ಮಹಿಳೆ ಎಂಬ ಕಾರಣದಿಂದ ಕರ್ತವ್ಯ ನಿರತ ಮಹಿಳಾ ಪೊಲೀಸ್ ಸಿಬ್ಬಂದಿ ಅವರನ್ನು ದೇವಸ್ಥಾನದಿಂದ ಹೊರಹಾಕಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಸೋಮವಾರ ಷಷ್ಠಿ ಮಹೋತ್ಸವ ಈ ದೇವಸ್ಥಾನದಲ್ಲಿ ನಡೆದಿದ್ದು, ಸಾವಿರಾರು ಭಕ್ತರು ಆಗಮಿಸುತ್ತಿದ್ದರಿಂದ ಪೊಲೀಸ್ ಇಲಾಖೆ ದೇವಸ್ಥಾನಕ್ಕೆ ಭದ್ರತೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಮಹಿಳಾ ಪೊಲೀಸ್ ಪೇದೆಯು ಅಲ್ಲಿ ಕಾರ್ಯನಿರತರಾಗಿದ್ದರು. ಹೀಗಾಗಿ ಮಹಿಳಾ ಪೇದೆ ದಲಿತೆ ಎಂಬ ಕಾರಣಕ್ಕೆ ಅಲ್ಲಿನ ದೇವಸ್ಥಾನ ಅರ್ಚಕ ಮಂಡಳಿಯವರು […]

ಅತ್ಯಾಚಾರ ಹತ್ಯೆ ಖಂಡಿಸಿ‌; ನ್ಯಾಯಕ್ಕಾಗಿ ಆಗ್ರಹಿಸಿ ಹಿಂದೂ‌ ಸಂಘಟನೆಗಳಿಂದ ರಾಷ್ಟ್ರಪತಿಗೆ ಮನವಿ

ಉಡುಪಿ: ತೆಲಂಗಾಣಾದಲ್ಲಿ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮತ್ತು ತಮಿಳುನಾಡಿನ ರೋಜಾ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ವಿಶ್ವ ಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಉಡುಪಿ ಜಿಲ್ಲೆಯ ವತಿಯಿಂದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು‌. ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪ್ರಮೋದ್ ಮಂದಾರ್ತಿ, ಜಿಲ್ಲಾ ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಮಹೇಶ್ ಬೈಲೂರು, ವಿಶ್ವ ಹಿಂದು ಪರಿಷದ್ […]

ಮಂಗಳೂರು: ತೆಲಂಗಾಣ ಪಶುವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಮಂಗಳೂರು: ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದುರ್ಗಾವಾಹಿನಿಯಿಂದ ಪ್ರತಿಭಟನೆ ನಡೆಯಿತು. ತೆಲಂಗಾಣದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಖಂಡನೀಯ. ದೇಶದ ಬೇರೆ ಕಡೆ ಕೂಡ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಇದರ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರ ವಹಿಸಿದರು. ದುರ್ಗಾವಾಹಿನಿಯ ನೂರಾರು ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.