ಶಾಲಾ ಬಸ್-ಕಾರು ಢಿಕ್ಕಿ; ಶಿಕ್ಷಕ ಸಹಿತ ಎಂಟು‌‌ ವಿದ್ಯಾರ್ಥಿಗಳಿಗೆ ಗಾಯ

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ತಿರುವಿನಲ್ಲಿ ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ನಡುವೆ ಶುಕ್ರವಾರ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಹಿರಿಯ ಪ್ರಾಥಮಿಕ ಶಾಲೆಯಿಂದ 3 ಬಸ್ಸುಗಳಲ್ಲಿ ಪ್ರವಾಸಕ್ಕೆ ಬಂದಿದ್ದರು. ಈ ಪೈಕಿ ಒಂದು ಬಸ್ ಧರ್ಮಸ್ಥಳದಿಂದ ಬೇಲೂರಿಗೆ ಹೋಗುವ ವೇಳೆ ಕೊಕ್ಕಡದ ಕಾಪಿನಬಾಗಿಲು ಬಳಿ ಕಾರೊಂದಕ್ಕೆ ಢಿಕ್ಕಿಯಾಗಿ ಉರುಳಿಬಿದ್ದಿದೆ. ಇದರಿಂದ ಗಾಯಗೊಂಡ ಎಂಟು ವಿದ್ಯಾರ್ಥಿಗಳು […]

ಗುರು-ಶಿಷ್ಯರ ಸಂಬಂಧ ವಿದ್ಯಾರ್ಥಿಯ ಶ್ರೇಷ್ಠತೆಗೆ ಸೋಪಾನ: ಕಾಣಿಯೂರು ಶ್ರೀ

ಉಡುಪಿ: ಗುರುಶಿಷ್ಯರ ನಡುವಿನ ಶ್ರೇಷ್ಠ ಸಂಬಂಧವೇ ವಿದ್ಯಾರ್ಥಿ ಜೀವನದ ಯಶಸ್ಸಿಗೆ ಸೋಪಾನ ಎಂದು ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು. ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶುಕ್ರವಾರ ನಡೆದ 21ನೇ ಶಿಷ್ಯೋಪನಯನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ ಯಶೋವರ್ಮ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಡಾ. ಜಿ. ಶ್ರೀನಿವಾಸ ಆಚಾರ್ಯ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಕೆ.ವಿ. ಮಮತ, […]

ಪದವು ಪೂರ್ವ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ ಅನುದಾನ ಬಿಡುಗಡೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಿವಿಧ ಅನುದಾನಗಳನ್ನು ಜೋಡಿಸಿ 13 ಕಾಮಗಾರಿಗಳಿಗೆ 84.52 ಲಕ್ಷ ಅನುದಾನ ಬಿಡುಗಡೆಗೊಳಿಸಿರುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ 5 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು, ಅದರಲ್ಲಿ ಕುಲಶೇಖರ ಚೌಕಿ ಬೈತುರ್ಲಿ ಬಳಿ ಕಾಲು ಸಂಕ ನಿರ್ಮಾಣವಾಗಲಿದೆ. ಮಳೆಹಾನಿ ಅನುದಾನದಡಿ 15 ಲಕ್ಷ ಬಿಡುಗಡೆಯಾಗಿದ್ದು, ಬೈತುರ್ಲಿ ಚೌಕಿ ಬಳಿ ಚರಂಡಿ ದುರಸ್ತಿ ಕಾಮಗಾರಿಗೆ 5 […]

ಉಡುಪಿ: ಹಿಂದೂ ಯುವಸೇನೆ ನಿರ್ಮಿತ ಮನೆ ‘ಅಯೋಧ್ಯೆ’ ಹಸ್ತಾಂತರ

ಉಡುಪಿ: ಹಿಂದೂ ಯುವಸೇನೆ ಉಡುಪಿ ಜಿಲ್ಲಾ ಘಟಕವು ದಾನಿಗಳ ನೆರವಿನಿಂದ ಮಲ್ಪೆ ಕೊಳದ ಬಡ ಕುಟುಂಬದ ಬೇಬಿ ಸಾಲ್ಯಾನ್ ಅವರಿಗೆ ನೂತನ ಸುಸಜ್ಜಿತವಾದ ಆಯೋಧ್ಯ ಹೆಸರಿನಲ್ಲಿ ಮನೆ ನಿರ್ಮಾಣವನ್ನು ಮಾಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಕಲ್ಲಡ್ಕ ಶ್ರೀ ರಾಮ ವಿದ್ಯಾಲಯದ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್ ಅವರು ನೂತನ ಮನೆಗೆ ದೀಪ‌ ಬೆಳಗಿಸಿ ಫಲಾನುಭವಿ ಬೇಬಿ ಸಾಲ್ಯಾನ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ೧೯೯೨ ಡಿಸೆಂಬರ್ ೬ ನೂರಾರು ವರ್ಷಗಳ ಅಪಮಾನವನ್ನು […]