ಬಂಟರ ಸಂಘದ ಚುನಾವಣೆ; ಅಜಿತ್ ಕುಮಾರ್ ರೈ ಮಾಲಾಡಿ ಗೆಲುವು
ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ ಬಂಟ ಸಮುದಾಯದ ಎರಡು ಬಣಗಳ ನಡುವಿನ ಜಿದ್ದಾಜಿದ್ದಿನ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಜಿತ್ ಕುಮಾರ್ ರೈ ಮಾಲಾಡಿ ಬಣ ಗೆಲುವು ಸಾಧಿಸಿದ್ದಾರೆ. ನಗರದ ಬಂಟ್ಸ್ ಹಾಸ್ಟೆಲ್ ಶ್ರೀ ರಾಮಕೃಷ್ಣ ಪ್ರಾಥಮಿಕ ಶಾಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಚುನಾವಣೆ ನಡೆಯಿತು. ವಿಜಯೀ ಅಭ್ಯರ್ಥಿ ಅಜಿತ್ ಕುಮಾರ್ ರೈ ಮಾಲಾಡಿ 4791 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಸುರೇಶ್ಚಂದ್ರ […]
ಜನರ ಆಶೋತ್ತರಗಳನ್ನು ಈಡೇರಿಸಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸುತ್ತೇನೆ: ಶಾಸಕ ಕಾಮತ್
ಮಂಗಳೂರು: ಕದ್ರಿ ಹಿಂದೂ ರುದ್ರ ಭೂಮಿಯ ಕುಸಿದ ತಡೆಗೋಡೆ ಪುನರ್ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ ಜನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಶ್ರಮ ವಹಿಸುತ್ತೇನೆ. ಕುಡಿಯುವ ನೀರು, ವಿದ್ಯುತ್, ರಸ್ತೆ ಕಾಮಗಾರಿಗಳ ಜೊತೆಯಲ್ಲಿ ಮನುಷ್ಯನ ದೇಹ ಮಣ್ಣಾಗಿಸುವ ರುದ್ರಭೂಮಿಯೂ ಕೂಡ ಅಭಿವೃದ್ಧಿ ಕಾಣಬೇಕಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಕದ್ರಿ ಹಿಂದೂ ರುದ್ರಭೂಮಿಯ ತಡೆಗೋಡೆ ಪುನರ್ನಿರ್ಮಾಣ ಕಾಮಗಾರಿಗೆ 10 ಲಕ್ಷ […]
ಕುಂದಾಪುರ: ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ
ಕುಂದಾಪುರ : ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ, ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿಯ ನೇತ್ರತ್ವದಲ್ಲಿ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ಈಚೆಗೆ ಹೈದರ್‌ಬಾದ್‌ನಲ್ಲಿ ನಡೆದ ಪ್ರೀಯಾಂಕ ರೆಡ್ಡಿ ಅವರ ಮೇಲಿನ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಲಾಯಿತು. ಅತ್ಯಾಚಾರ ಹಾಗೂ ಕೊಲೆ ಮಾಡಿದವರನ್ನು ಕಾನೂನಿನ ಅಡಿಯಲ್ಲಿ ತನಿಖೆ ನಡೆಸದೆ ಏಕಾಏಕಿ ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿರುವುದು ಕೂಡ ಅಪರಾಧ. ನಮ್ಮ ರಾಜ್ಯದಲ್ಲಿ […]
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು; ಮಂಗಳೂರಿನಲ್ಲಿ ಸಂಭ್ರಮಾಚರಣೆ
ಮಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನಿಂದ ಮೂರು ವರ್ಷ ಸರಕಾರ ಸುಭದ್ರವಾಗಿದೆ: ವೇದವ್ಯಾಸ್ ಕಾಮತ್
ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿ ಗೆಲುವು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಕೋರಿದ್ದಾರೆ. ನಮ್ಮ ಸಂಸದರೂ ಹಾಗೂ ರಾಜ್ಯಾದ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಪ್ರಬಲ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಿದ್ದ ಬಿಜೆಪಿ ನಿರೀಕ್ಷೆಯಂತೆ ಗೆದ್ದಿದ್ದು, ರಾಜ್ಯದಲ್ಲಿ ಮುಂದಿನ ಮೂರು ವರ್ಷ ಸ್ಥಿರ ಸರ್ಕಾರ […]