ಮಂಗಳೂರು: ಬ್ಯಾರಿ ಭವನಕ್ಕೆ ರಾಜ್ಯ ಸರಕಾರದಿಂದ 6 ಕೋ.ರೂ.: ರಹೀಂ ಉಚ್ಚಿಲ್

ಮಂಗಳೂರು: ಮಂಗಳೂರಿನ ನೀರುಮಾರ್ಗದ ಬೈತುರ್ಲಿ ಎಂಬಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ 6 ಕೋ.ರೂ. ಅನುದಾನ ಮಂಜೂರಾತಿ ಮಾಡಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು ಮಂಗಳೂರಿನಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಬ್ಯಾರಿ ಭವನ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಬೇಡಿಕೆಯಿಡಲಾಗುತ್ತಿತ್ತು. ಆದರೆ ಬ್ಯಾರಿ ಭವನದ ಬೇಡಿಕೆಯನ್ನು ಯಾವ ಸರ್ಕಾರವೂ ಈಡೇರಿಸಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದಾಗ ಅವರು ಆರು […]
ಉನ್ನಾವೋ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಉನ್ನಾವೋ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉನ್ನಾವೋದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಮಹಿಳೆಯ ಅತ್ಯಾಚಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರು ಉತ್ತರಪ್ರದೇಶ ಸರಕಾರ ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸಹಾಯಹಸ್ತ ಚಾಚದೆ ಆಕೆಯ ಹತ್ಯೆಯಾಯಿತು. ತೆಲಂಗಾಣದಲ್ಲಿ ಅತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದಂತೆ ಉನ್ನಾವೋ […]
ಡಿ. 13: ಕೊರಂಗ್ರಪಾಡಿ ಶ್ರೀ ಮಹಾವಿಷ್ಣು ದೇವಳ ಶಿಲಾಸ್ತಂಭ ಸ್ಥಾಪನೆ: ಎಂಆರ್ ಜಿ ಗ್ರೂಪ್ ಪ್ರಕಾಶ್ ಶೆಟ್ಟಿ ಅವರಿಗೆ ಹುಟ್ಟೂರ ಸಮ್ಮಾನ
ಉಡುಪಿ: ಕೊರಂಗ್ರಪಾಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸುತ್ತುಪೌಳಿಯ ಪಾದುಕಾನ್ಯಾಸ, ಶಿಲಾಸ್ತಂಭ ಸ್ಥಾಪನೆ, ಮಹಾದ್ವಾರನ್ಯಾಸ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಆರ್‌ಜಿ ಗ್ರೂಪ್‌ನ ಮುಖ್ಯಸ್ಥ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಹುಟ್ಟೂರ ಸನ್ಮಾನ ಸಮಾರಂಭ ನ. 13ರಂದು ದೇಗುಲದ ಆವರಣದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 11.08ಕ್ಕೆ ಕೆ.ಜಿ. ರಾಘವೇಂದ್ರ ತಂತ್ರಿ ಮಾರ್ಗದರ್ಶನದಲ್ಲಿ ಕೆ.ಎಸ್. ಕೃಷ್ಣಮೂರ್ತಿ ತಂತ್ರಿಯವರ […]
ಮಲಬಾರ್ ಗೋಲ್ಡ್: ಸಿಆರ್ ಎಸ್ ಯೋಜನೆಯಡಿ ವಿದ್ಯಾರ್ಥಿವೇತನ- ಸಹಾಯಧನ ವಿತರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಸಂಸ್ಥೆಯ ಸಿಆರ್‌ಎಸ್ ಯೋಜನೆಯಡಿಯಲ್ಲಿ ವಿದ್ಯಾರ್ಥಿ ವೇತನ ಹಾಗೂ ವಸತಿ ರಹಿತರಿಗೆ ಸಹಾಯಧನ ವಿತರಣಾ ಸಮಾರಂಭವು ಸಂಸ್ಥೆಯ ಉಡುಪಿ ಮಳಿಗೆಯಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಮನೆ ಇಲ್ಲದಿರುವ ಸಾಕಷ್ಟು ಮಂದಿ ನಿರಾಶ್ರಿತರಿದ್ದಾರೆ. ಅಂತಹವರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರಿ ಯೋಜನೆಯ ಹಣ ಬಹಳಷ್ಟು ಕಡಿಮೆ ಆಗುತ್ತದೆ ಎಂಬ ಅಭಿಪ್ರಾಯವೂ ಇದೆ. ಹಾಗಾಗಿ ಮಲಬಾರ್ ಗೋಲ್ಡ್‌ನಂತಹ ಸಂಸ್ಥೆಗಳು ಬಡವರಿಗೆ ಮನೆ ನಿರ್ಮಿಸಲು […]
ಡಿ.14-15: ನಿಟ್ಟೂರು ಪ್ರೌಢಶಾಲೆಯ ಸುವರ್ಣಪರ್ವ ಸಮಾರಂಭದ ಉದ್ಘಾಟನೆ- ವಾರ್ಷಿಕೋತ್ಸವ

ಉಡುಪಿ: ನಿಟ್ಟೂರು ಪ್ರೌಢಶಾಲೆಯ ಸುವರ್ಣಪರ್ವ ಸಮಾರಂಭದ ಉದ್ಘಾಟನೆ, ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿಗಳ ಮತ್ತು ರಕ್ಷಕರ ಸಂಭ್ರಮ ಡಿ. 14 ಮತ್ತು 15ರಂದು ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರೂ ಆಗಿರುವ ಸುವರ್ಣಪರ್ವ ಸಮಿತಿ ಕಾರ್ಯದರ್ಶಿ ಮುರಲಿ ಕಡೆಕಾರ್ ಹೇಳಿದರು. ನಿಟ್ಟೂರು ಪ್ರೌಢಾಶಾಲೆಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಡಿ. 14ರಂದು ರಕ್ಷಕರ ಸಂಭ್ರಮ ಹಾಗೂ ಶಾಲಾ ವಾರ್ಷಿಕೋತ್ಸವ ಜರುಗಲಿದೆ. ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ, 9.30ಕ್ಕೆ ರಕ್ಷಕರಿಗೆ ವಿವಿಧ […]