ಕೋಟೇಶ್ವರ ಕೋಡಿ ಹಬ್ಬ ಗಮ್ಮತ್ತೋ ಗಮ್ಮತ್ತ್: ವೈಭವದ ರಥೋತ್ಸವದಲ್ಲಿ ಮಿಂದೆದ್ದ ಊರು

ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಕರ್ನಾಟಕ ಕರಾವಳಿಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಇಲ್ಲಿನ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬ ವಿಜೃಂಭಣೆಯಿಂದ ಜರುಗಿತು. ಗುರುವಾರ ನಡೆದ ವೈಭವದ ಬ್ರಹ್ಮ ರಥೋತ್ಸವಕ್ಕೆ ಊರ ಹಾಗೂ ಪರವೂರಿನಿಂದ ಬಂದ ಸಾವಿರಾರು ಮಂದಿ ಸಾಕ್ಷಿಯಾದರು. ಈ ಬಾರಿಯ ಕೊಡಿ ಹಬ್ಬಕ್ಕಾಗಿ ಗುರುವಾರ ನಸುಕಿನಿಂದಲೆ ಧಾರ್ಮಿಕ ಆಚರಣೆಯಲ್ಲಿ ಭಾಗಿಯಾಗಿದ್ದ ಭಕ್ತರು ಮಧ್ಯಾಹ್ನ ೧೨.೪೦ ಕ್ಕೆ ನಡೆದ ವೈಭವದ ರಥೋತ್ಸವದ ಆರೋಹಣವನ್ನು ನೋಡಿ ಕಣ್ಮನ ತುಂಬಿಕೊಂಡರು. ನಸುಕಿನಲ್ಲಿ ಇತಿಹಾಸ ಪ್ರಸಿದ್ದ ಕೋಟಿ ತೀರ್ಥ […]
ಉಡುಪಿ: ವೈದ್ಯಾಧಿಕಾರಿ ಹುದ್ದೆ-ಅರ್ಜಿ ಆಹ್ವಾನ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತೆರವು ಇರುವ 7 ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಯವರನ್ನು ಗುತ್ತಿಗೆ ಆಧಾರದ ಮೇರೆಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾದಲ್ಲಿ (ಯಾವುದು ಮೊದಲೋ ಅಲ್ಲಿಯವರೆಗೆ) ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, […]
ಗ್ರಾಮಕರಣಿಕರ ಹುದ್ದೆ ನೇಮಕಾತಿಯಲ್ಲಿ ಆಮಿಷಕ್ಕೆ ಒಳಗಾಗಬೇಡಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ 2019 ನೇ ಸಾಲಿನ ಗ್ರಾಮಕರಣಿಕರ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಸರಕಾರದ ಮಾರ್ಗಸೂಚಿಯಡಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಪರಿಗಣಿಸಿ, ನೇರ ನೇಮಕಾತಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ಸಂದರ್ಶನ, ಲಿಖಿತ ಪರೀಕ್ಷೆ ಇತ್ಯಾದಿಗಳು ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ಆನ್‍ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಹಾಗೂ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಷಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]