ಸಾಲ ಮನ್ನಾ; ಬ್ಯಾಂಕ್ ಖಾತೆಗೆ ಮೊತ್ತ ಜಮೆ ಮಾಡಲು ಕ್ರಮ ವಹಿಸಲು ಮನವಿ
ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆಯಲ್ಲಿ ಘೋಷಿಸಿರುವ ಮೊತ್ತವನ್ನು ಶೀಘ್ರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ಬಗ್ಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಒಂದು ವಾರದೊಳಗೆ ಮಹಿಳಾ ಮೀನುಗಾರರ ಖಾತೆಗಳಿಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ […]
ಶ್ರೀ ಕೃಷ್ಣ ಮಠದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮಾಡಿದರು. ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷರುಗಳಾದ ರಾಮದಾಸ ಮಡಮಣ್ಣಾಯ,ಡಾ.ಬಾಲಕೃಷ್ಣ ಮೂಡಂಬಡಿತ್ತಾಯ, ಪ್ರಧಾನ ಸಂಚಾಲಕರಾದ ಎಂ.ಬಿ.ಪುರಾಣಿಕ್,ಕಾರ್ಯಾಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ,ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊಳದವರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠದಲ್ಲಿ “ಸು-ವರ್ಣ ಪರ್ಯಾಯ ದರ್ಶನ ಛಾಯಾಚಿತ್ರ ಪ್ರದರ್ಶನ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪಲಿಮಾರು ಮಠದ 2 ವರ್ಷ ಪರ್ಯಾಯಾವಧಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮಗಳ,ಗಣ್ಯರ ಭೇಟಿ,ಅಲಂಕಾರಗಳು ಮೊದಲಾದ ಛಾಯಾಚಿತ್ರ ಪ್ರದರ್ಶನ “ಸು-ವರ್ಣ ಪರ್ಯಾಯ ದರ್ಶನ” ವನ್ನು ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಂದರ್ಭದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಪ್ರಧಾನ ಸಂಚಾಲಕರಾದ ಎಂ.ಬಿ.ಪುರಾಣಿಕ್,ಪರ್ಯಾಯ ಮಠದ ದಿವಾನರಾದ ವೇದವ್ಯಾಸ […]
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಗಳಿಂದ ಕ್ಯಾಲೆಂಡರ್ ಬಿಡುಗಡೆ
ಉಡುಪಿ: ಶ್ರೀಕೃಷ್ಣ ಮಠದಲ್ಲಿ, ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ 2020 ನೇಯ ಇಸವಿಯ ಕ್ಯಾಲೆಂಡರನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾರ್ಕಳ: ಮಕ್ಕಳಿಗಾಗಿ ಉಚಿತ ಆರೋಗ್ಯ ಶಿಬಿರ
ಕಾರ್ಕಳ : ಕಾರ್ಕಳದ ಮೈನ್ ಶಾಲೆಯ ವಿದ್ಯಾರ್ಥಿಗಳಿಗೆ ಸೋಮವಾರ ಉಚಿತ ಆರೋಗ್ಯ ತಪಾಸಣೆಯ ಶಿಬಿರ ನಡೆಸಲಾಯಿತು. ೨೫ ಕ್ಕೂ ಹೆಚ್ಚು ಮಕ್ಕಳ ಆರೋಗ್ಯವನ್ನು ಡಾ| ಧೀಶಾ ಕಿಸನ್ ತಪಾಸಣೆ ನಡೆಸಿದರು. ಡಿ,ಎನ್.ಎಸ್.ಎ.ಎಮ್ ಇಂಗ್ಲೀಷ್ ಮಿಡಿಯಂ ಸ್ಕೂಲ್‌ನ ೯ನೇ ತರಗತಿಯ ವಿದ್ಯಾರ್ಥಿನಿ ವೃದ್ದಿ ಕಿಣಿ ಹಾಗೂ ತ್ರಿಷಾ ಕೆ. ಕಾರ್ಯಕ್ರಮವನ್ನು ಆಯೊಜಿಸಿದ್ದರು.