ಕುಂದಾಪುರ: ಕೋರಲ್ ಎಡ್ಜ್ ವಸತಿ ಸಮುಚ್ಚಯಕ್ಕೆ ಭೂಮಿಪೂಜೆ

ಕುಂದಾಪುರ: ಪುರಸಭೆ ವ್ಯಾಪ್ತಿಯ ವೆಸ್ಟ್ ಬ್ಲಾಕ್ ರಸ್ತೆಯಲ್ಲಿ 1.2 ಎಕರೆ ಜಾಗದಲ್ಲಿ ಶ್ರೀ ರಾಜರಾಜೇಶ್ವರಿ ಕನ್ಸ್ಟ್ರಕ್ಷನ್ ಇಲ್ಲಿನ ಪುರಸಭೆ ವ್ಯಾಪ್ತಿಯ ವೆಸ್ಟ್ ಬ್ಲಾಕ್ ರಸ್ತೆಯಲ್ಲಿ ನಿರ್ಮಿಸಲಿರುವ ಕೋರಲ್ ಎಡ್ಜ್ ವಸತಿ ಸಮುಚ್ಚಯಕ್ಕೆ ಭೂಮಿಪೂಜೆ ಡಿ. 11 ರಂದು ನಡೆಯಿತು. ಶ್ರೀ ರಾಜರಾಜೇಶ್ವರಿ ನಿರ್ಮಾಣ ಸಂಸ್ಥೆಯ ಮಾಲಕ ರವಿ ರಾಮಚಂದ್ರ ಬೆಂಗಳೂರು, ಪ್ರಾಜೆಕ್ಟ್ ಹೆಡ್ ದಿನೇಶ್ ಕಾರಂತ, ಶಾರದ ಕಾರಂತ, ನಿತಾ, ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ, ಪುರಸಭೆ ಸದಸ್ಯ ಮೋಹನದಾಸ ಶೆಣೈ, ಉದ್ಯಮಿ ಕೆ. […]

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ ಶ್ಯಾಮಲಾ ಕು೦ದರ್ ಭೇಟಿ

ಉಡುಪಿ : ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ ರಾಷ್ಟ್ರೀಯ ಮಹಿಳಾ ಅಯೊೀಗದ ಸದಸ್ಯೆಶ್ಯಾಮಲಾ ಕು೦ದರ್ ಭೇಟಿ  ನೀಡಿ ವಿಶೇಷ ಪುಾಜೆ ಸಲಿಸಿದರು. ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಶ್ರೀ ರಮಾನಂದ ಗುರೂಜಿ ಶ್ರೀ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹ ಪ್ರಸಾದ ನೀಡಿ ಗೌರವಿಸಿ ಸನ್ಮಾನಿಸಿದರು. ಉಸ್ತುವಾರಿ  ಕುಸುಮಾ ನಾಗರಾಜ್ ಉಪಸ್ಥಿತರಿದ್ದರು.

ಅದಮಾರು ಪರ್ಯಾಯ: ಶ್ರೀಗಳ ಪುರ ಪ್ರವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು: ಉಡುಪಿಯಲ್ಲಿ ನಡೆಯಲಿರುವ ಅದಮಾರು ಮಠದ ಪರ್ಯಾಯ 2020-22ರ ಪೂರ್ವಭಾವಿಯಾಗಿ ನಡೆಯುವ ಅದಮಾರು ಶ್ರೀಗಳ ಪುರಪ್ರವೇಶ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಮೀನುಗಾರ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಜಿಪಂ ಅಧ್ಯಕ್ಷ ದಿನಕರ ಬಾಬು ಮೊದಲಾದವರು ಇದ್ದರು.

ಕಾರು ಢಿಕ್ಕಿ: ಹಿರಿಯ ಸಾಹಿತಿ ಕೋಟೇಶ್ವರ ನಾರಾಯಣ ರಾವ್ ಸಾವು

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪದ ಪುಲ್ಲೋಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಹಿರಿಯ ಸಾಹಿತಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಬೆಂಗಳೂರು ನಿವಾಸಿಯಾಗಿದ್ದ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್ (82) ಮೃತಪಟ್ವವರು. ಇವರು ಕುಂದಾಪುರದಲ್ಲಿ ನಡೆಯಬೇಕಿದ್ದ ಒಂದು ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಬಸ್ಸಿನಲ್ಲಿ ಆಗಮಿಸುತ್ತಿದ್ದರು. ಬಸ್ ಶಿರಾಡಿ ಸಮೀಪದ ಪುಲ್ಲೊಟೆ ಎಂಬಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ಸೂರ್ಯನಾರಾಯಣ ರಾವ್ ಅವರು ಬಹಿರ್ದೆಸೆಗೆ ಬಸ್ಸಿನಿಂದ ಹೊರಗಡೆ ಇಳಿದಿದ್ದರು ಎನ್ನಲಾಗಿದ್ದು, ಈ ವೇಳೆ ವೇಗವಾಗಿ ಬಂದ ಕಾರೊಂದು […]

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್:ಸಮುದಾಯೋತ್ಸವ್-2020 ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 2020 ಜನವರಿ 19ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಆಯೋಜಿಸಿರುವ ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್-2020’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ  ಗುರುವಾರ ಸಂಘಟನೆಯ ಸಭಾಭವನದಲ್ಲಿ ಜರಗಿತು. ಆಮಂತ್ರಣ ಪತ್ರಿಕೆಯನ್ನು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ. ಡಾ. ಲೆಸ್ಲಿ ಡಿಸೋಜಾ ಬಿಡುಗಡೆಗೊಳಿಸಿದರು. ಅನಂತರ ಮಾತನಾಡಿದ ಅವರು ಸಮಾಜದಲ್ಲಿ ಸೇವೆ ನೀಡಲು ಅವಕಾಶ ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಂಡಾಗ ಬದಲಾವಣೆ ತರಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರಿಗೂ ದೇವರು […]