ಸದಾ ದೇವರ ಆರಾಧನೆಯಿಂದ ಮನುಷ್ಯನ‌ ಮೋಕ್ಷದ ಹಾದಿ ಸುಗಮ: ಪೂರ್ಣಾಮೃತಾನಂದ ಶ್ರೀ

ಉಡುಪಿ: ಸ್ವಾರ್ಥರಹಿತವಾಗಿ ಭಕ್ತಿ ಶ್ರದ್ಧೆಯಿಂದ ಧಾರ್ಮಿಕ ಚಿಂತನೆಯೊಂದಿಗೆ ದೇವರನ್ನು ಸದಾ ಆರಾಧನೆ ಮಾಡಿದಾಗ ಮಾತ್ರ ಮನುಷ್ಯನಿಗೆ ಮೋಕ್ಷದ ಹಾದಿ ಸುಗಮವಾಗುತ್ತದೆ ಎಂದು ಕೇರಳ ಕೊಲ್ಲಂ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಪೂರ್ಣಾಮೃತಾನಂದ ಪುರಿ ಸ್ವಾಮೀಜಿ ಹೇಳಿದರು. ಉಡುಪಿಯ ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಉಡುಪಿ ನಗರದ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ನಡೆದ ಸತ್ಸಂಗ, ಧ್ಯಾನ, ಭಜನೆಯನ್ನೊಳಗೊಂಡ ಅಮೃತ ವೈಭವ ಧಾರ್ಮಿಕ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಭಕ್ತಿ ಮಾರ್ಗವನ್ನು ಅನುಸರಿಸುವುದರಿಂದ ಜೀವನದಲ್ಲಿ ಸದಾ ಮಾನಸಿಕ […]

ತುಳು ಶಿವಳ್ಳಿ ಬ್ರಾಹ್ಮಣ ಸಮಾಜಕ್ಕೆ ಮಂತ್ರಿ ಸ್ಥಾನದ ಅಗತ್ಯವಿದೆ: ಪಲಿಮಾರು ಶ್ರೀ

ಉಡುಪಿ: ತುಳು ಶಿವಳ್ಳಿ ಬ್ರಾಹ್ಮಣ ಸಮಾಜಕ್ಕೆ ಮಂತ್ರಿ ಸ್ಥಾನದ ಅಗತ್ಯವಿದೆ. ಆದರೆ ಇದಕ್ಕೆ ಧ್ವನಿ ಕೊಡುವವರು ಯಾರು ಇಲ್ಲ. ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಅವಶ್ಯಕವಾಗಿದೆ. ಶಾಸಕ ರಘುಪತಿ ಭಟ್‌ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದರೆ, ತುಳು ಶಿವಳ್ಳಿ ಬ್ರಾಹ್ಮಣ ವಿಶ್ವ ಸಮ್ಮೇಳನ ಸಾರ್ಥಕ ಆಗುತ್ತದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ನಡೆದ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ […]

ಡಿ.18-21: ಉಡುಪಿಯಲ್ಲಿ ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ‌;  20 ಮಂದಿ ಪ್ರೋ ಕಬಡ್ಡಿ ಆಟಗಾರರು ಭಾಗಿ

ಉಡುಪಿ: ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಭಾಗಿತ್ವದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಿಭಾಗದ ಕಬಡ್ಡಿ ಚಾಂಪಿಯನ್‌ ಶಿಪ್‌ ಡಿ. 18ರಿಂದ 21ರ ವರೆಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿವಿಯ ಕುಲಸಚಿವ ಪ್ರೊ. ಎ.ಎಂ. ಖಾನ್‌ ಹೇಳಿದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ […]

ಜಪ್ಪಿನಮೊಗರು ವಾರ್ಡ್ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಸಹಕಾರ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ವಾರ್ಡಿನ ನಾಯಕ್ ಹಿತ್ಲು ಬಳಿ 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಬಗ್ಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಜಪ್ಪಿನಮೊಗರು ವಾರ್ಡಿನ ಸಮಗ್ರ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಿದ್ದು, ಈಗಾಗಲೇ ವಿವಿಧ ಕಾಮಗಾರಿಗಳಿಗೆ ವಿಶೇಷ ಅನುದಾನ ಒದಗಿಸಲಾಗಿದೆ. ನಾಯಕ್ ಹಿತ್ಲು ಪರಿಸರದ ಸಾರ್ವಜನಿಕರು  ಹಾಗೂ ಸ್ಥಳೀಯ ಮುಖಂಡರು […]

ದಕ್ಷಿಣ ವಲಯ ಪುರುಷರ ಕಬಡ್ಡಿ; ಮಂಗಳೂರು‌‌‌ ವಿವಿಗೆ ಪ್ರಶಸ್ತಿ

ಉಡುಪಿ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್‌ಅನ್ನು ಮಂಗಳೂರು ವಿಶ್ವವಿದ್ಯಾನಿಲಯ ತಂಡ ಗೆದ್ದುಕೊಂಡಿದೆ. ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ತೆಂಕನಿಡಿಯೂರು ಕಾಲೇಜಿನ ಸಹಯೋಗದಲ್ಲಿ ಟೂರ್ನಿ ಆಯೋಜಿಸಲಾಗಿತ್ತು. ಚೆನ್ನೈನ ವೇಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ಅಂಡ್‌ ಅಡ್ವಾನ್ಸ್‌ ಸ್ಟಡೀಸ್‌ ತಂಡ ದ್ವಿತೀಯ, ತಿರುನೇಲ್ವೇಲಿ ಎಂ.ಎಸ್‌. ವಿವಿ ತಂಡ ತೃತೀಯ ಹಾಗೂ ಚೆನ್ನೈ ಎಸ್‌ಆರ್‌ಎಂ ವಿವಿ ತಂಡ ಚತುರ್ಥ ಸ್ಥಾನ ಪಡೆದುಕೊಂಡಿವೆ. ಟೂರ್ನಿಯಲ್ಲಿ ದಕ್ಷಿಣ […]