ಪಡುಬಿದ್ರೆ -ಕಾರ್ಕಳ ರಾಜ್ಯ ಹೆದ್ದಾರಿಯ ಬದಿ ವಾಸಿಸುತ್ತಿದ್ದ ಕುಟುಂಬಗಳ ಸ್ಥಳಾಂತರ
ಉಡುಪಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ ಮತ್ತು ಪಡುಬಿದ್ರೆ ಪೊಲೀಸ್ ಠಾಣೆ ಜಂಟಿ ಕಾರ್ಯಾಚರಣೆ ನಡೆಸಿ, ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಬದಿಯಲ್ಲಿ ವಾಸಿಸುತ್ತಿದ್ದ, ಕಮ್ಮಾರಿಕೆ ಕಸುಬು ಮಾಡಿಕೊಂಡಿದ್ದ ಮದ್ಯಪ್ರದೇಶದ ಬೋಪಾಲ್ ಮೂಲದ 3 ಕುಟುಂಬಗಳ ಒಟ್ಟು 15 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ಸ್ಥಳ ಅಪಘಾತ ಸ್ಥಳವಾಗಿರುವುದರಿಂದ ಮತ್ತು ಮಕ್ಕಳ ಸಂರಕ್ಷಣೆಯ ಹಿತದೃಷ್ಠಿಯಿಂದ ಈ ಕುಟುಂಬವನ್ನು ಅಲ್ಲಿಂದ ತೆರವುಗೊಳಿಸಲಾಯಿತು. ಸದರಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ, ಕಾನೂನು ಪರಿವೀಕ್ಷಣಾಧಿಕಾರಿ […]
ಕುಂದಾಪುರ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಣಂತಿ ಸಾವು ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ.
ಕುಂದಾಪುರ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ರಕ್ತ ಸ್ರಾವದಿಂದ ಬಳಲಿ ಸಾವನ್ನಪ್ಪಿದ ಘಟನೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಮೃತರ ಕುಟುಂಬಿಕರು ಹಾಗೂ ಸಾರ್ವಜನಿಕರು ಸೋಮವಾರದಂದು ಕುಂದಾಪುರದ ಸರಕಾರಿ ಆಸ್ಪತ್ರೆಯ ಎದುರು ಜಮಾಯಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಕುಂದಾಪುರ ಅಂಕದಕಟ್ಟೆಯ ನಿವಾಸಿ ಸುಜಾತ(೨೭) ಅವರಿಗೆ ತಾಯಿ ಮಕ್ಕಳ ಆಸ್ಪತ್ರೆಯಾಗಿರುವ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ […]
ಅಯೋಧ್ಯೆಯಲ್ಲಿ ನಾಲ್ಕು ತಿಂಗಳೊಳಗೆ ಆಕಾಶದೆತ್ತರ ರಾಮಮಂದಿರ ನಿರ್ಮಾಣ: ಅಮಿತ್ ಶಾ
ನವದೆಹಲಿ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ನಾಲ್ಕು ತಿಂಗಳೊಳಗೆ ಆಕಾಶದೆತ್ತರದ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಜಾರ್ಖಂಡ್ ನ ಪಾಕೂರ್ ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಅಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೆಂಬುದು ಶತಮಾನಗಳಿಂದ ಪ್ರತಿಯೊಬ್ಬ ಭಾರತೀಯನ ಬೇಡಿಕೆಯಾಗಿತ್ತು. ಆದರೆ ಈ ಪ್ರಕರಣ ಕಾಂಗ್ರೆಸ್ ನಿಂದಾಗಿ ವಿಳಂಬವಾಯಿತು. ಅಯೋಧ್ಯೆ ವಿವಾದ ಪ್ರಕರಣವನ್ನು ಶೀಘ್ರವೇ ವಿಚಾರಣೆ ನಡೆಸಬೇಕಾದ […]
ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಆಚರಣೆ
ಉಡುಪಿ: ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ 60ನೇ ವರ್ಷದ ಜನ್ಮದಿನಾಚರಣೆಯನ್ನು ಸೋಮವಾರ ಮಿಷನ್ ಕಾಂಪೌಂಡಿನ ಸಮೀಪದ ವಿಶೇಷ ಮಕ್ಕಳ ವಸತಿ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು. ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ವಿ. ಯೋಗೀಶ್ ಶೆಟ್ಟಿ ಕಾಪು ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸುಮಾರು 30 ಸಾವಿರ ಕೋಟಿ ಮೊತ್ತದ ರೈತರ ಸಾಲ ಮನ್ನಾ ಮಾಡಿದ್ದಾರೆ. […]
ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗೆ ಅವಕಾಶ: ಅನಾಹುತಗಳಾದರೆ ಜಿಲ್ಲಾಡಳಿತವೇ ಹೊಣೆ: ಯಶ್ ಪಾಲ್ ಸುವರ್ಣ
ಉಡುಪಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಉಡುಪಿಯಲ್ಲಿ ಪ್ರತಿಭಟನೆ ನಡೆಸಲು ಕೆಲವು ರಾಷ್ಟ್ರಘಾತುಕ ಶಕ್ತಿಗಳು ಮುಂದಾಗಿದ್ದು, ಪೊಲೀಸ್ ಇಲಾಖೆ ಈ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿದರೆ ಮುಂದೆ ಆಗಬಹುದಾದ ಅನಾಹುತಗಳಿಗೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಯುವ ಮುಖಂಡ ಯಶಪಾಲ್ ಸುವರ್ಣ ಅವರು ಎಚ್ಚರಿಸಿದ್ದಾರೆ. ದೇಶವನ್ನು ಮತೀಯ ಆಧಾರದಲ್ಲಿ ವಿಭಜಿಸಿದ ಬಳಿಕ ಅತೀ ಹೆಚ್ಚು ತಾರತಮ್ಯ ಮತ್ತು ದಬ್ಬಾಳಿಕೆಗೆ ಒಳಗಾದವರು ಪಾಕ್ ಮತ್ತು ಬಾಂಗ್ಲಾ ದೇಶದಲ್ಲಿರುವ ಹಿಂದೂ ಅಲ್ಪ ಸಂಖ್ಯಾತರು. ಅಲ್ಲಿಂದ ಶರಣಾರ್ಥಿಗಳಾಗಿ […]